ಸಮಯ್ ರೈನಾ, ರಣವೀರ್ ಅಲಹಾಬಾದಿಯಾಗೆ ಬಿಗ್ ರಿಲೀಫ್; FIR ರದ್ದುಗೊಳಿಸಿದ ಸುಪ್ರೀಂ ಕೋರ್ಟ್
India's Got Latent: ಇಂಡಿಯಾಸ್ ಗಾಟ್ ಲ್ಯಾಟೆಂಟ್ ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ, ಕಾಡಿಯನ್ ಸಮಯ್ ರೈನಾ ಮತ್ತು ಇತರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.
ಸಂಗ್ರಹ ಚಿತ್ರ -
ಮುಂಬೈ: ಇಂಡಿಯಾಸ್ ಗಾಟ್ ಲ್ಯಾಟೆಂಟ್ (India's Got Latent) ರಿಯಾಲಿಟಿ ಶೋ ಕಾರ್ಯಕ್ರಮದಲ್ಲಿ ಪೋಷಕರು ಮತ್ತು ಲೈಂಗಿಕತೆ ಕುರಿತು ಆಕ್ಷೇಪಾರ್ಹ ಹೇಳಿಕೆಗಳಿಗೆ ಸಂಬಂಧಿಸಿದಂತೆ ಪಾಡ್‌ಕ್ಯಾಸ್ಟರ್ ರಣವೀರ್ ಅಲ್ಹಾಬಾದಿಯಾ, ಕಾಡಿಯನ್ ಸಮಯ್ ರೈನಾ (Samay Raina) ಮತ್ತು ಇತರರ ವಿರುದ್ಧದ ಎಲ್ಲಾ ಎಫ್‌ಐಆರ್‌ಗಳನ್ನು ಸುಪ್ರೀಂ ಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. "ಇಂಡಿಯಾಸ್ ಗಾಟ್ ಲ್ಯಾಟೆಂಟ್" ನಲ್ಲಿ ಪೋಷಕರು ಮತ್ತು ಲೈಂಗಿಕತೆಯ ಬಗ್ಗೆ ಅಸಭ್ಯ ಹೇಳಿಕೆ ನೀಡಿದ್ದಾರೆ ಎಂದು ಆರೋಪಿಸಿ ರೈನಾ, ರಣವೀರ್ ಅಲ್ಹಾಬಾದಿಯಾ ಮತ್ತು ಇತರರ ವಿರುದ್ಧ ಹಲವು ಪ್ರಕರಣಗಳು ದಾಖಲಾಗಿದ್ದವು.
ತಮ್ಮ ವಿರುದ್ಧ ಎಫ್‌ಐಆರ್‌ಗಳನ್ನು ರದ್ದುಗೊಳಿಸಲು ಮತ್ತು ಬಲವಂತದ ಕ್ರಮದಿಂದ ರಕ್ಷಣೆ ಕೋರಿ ರೈನಾ, ರಣವೀರ್ ಹಾಗೂ ಇತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಎಲ್ಲಾ ಎಫ್ಐಆರ್ ಗಳನ್ನು ರದ್ದುಗೊಳಿಸಿದೆ. ಶುಕ್ರವಾರ, ಮುಖ್ಯ ನ್ಯಾಯಮೂರ್ತಿ ಸೂರ್ಯ ಕಾಂತ್, ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಮತ್ತು ನ್ಯಾಯಮೂರ್ತಿ ಜೆ.ವಿ. ಮೋಹನ ಅವರಿದ್ದ ಪೀಠವು ರೈನಾ ಮತ್ತು ಇತರರು ಸುಪ್ರೀಂ ಕೋರ್ಟ್‌ನ ನಿರ್ದೇಶನವನ್ನು ಪಾಲಿಸಿರುವುದನ್ನು ಗಮನಿಸಿ ಅವರ ವಿರುದ್ಧದ ಎಲ್ಲಾ ಪ್ರಕರಣಗಳನ್ನು ರದ್ದುಗೊಳಿಸಿತು.
ಕಳೆದ ವಿಚಾರಣೆಯ ಸಮಯದಲ್ಲಿ, ನ್ಯಾಯಾಲಯವು ರೈನಾ ಮತ್ತು ಇತರ ನಾಲ್ವರಿಗೆ 3 ಲಕ್ಷ ರೂ. ದಂಡ ವಿಧಿಸಿತ್ತು. ಅಲ್ಲದೆ ನ್ಯಾಯಾಲಯವು ಅವರ ಹೇಳಿಕೆಗಳನ್ನು ತೀವ್ರವಾಗಿ ಟೀಕಿಸಿತು. ವಾಕ್ ಸ್ವಾತಂತ್ರ್ಯವು ಸಾಮಾಜಿಕ ರೂಢಿಗಳನ್ನು ಉಲ್ಲಂಘಿಸುವ ಭಾಷೆಯನ್ನು ಬಳಸಲು ಯಾರಿಗೂ ಅವಕಾಶ ನೀಡುವುದಿಲ್ಲ ಎಂದು ಎಚ್ಚರಿಸಿದೆ.
Samay Raina: ಅಶ್ಲೀಲ ಹೇಳಿಕೆ ಪ್ರಕರಣ; ಕಾಮಿಡಿಯನ್ ಸಮಯ್ ರೈನಾಗೆ ಇನ್ನೂ ಮುಗಿಯದ ಕಾನೂನು ಸಂಕಷ್ಟ
ಸಮಯ್ ರೈನಾ ಹಾಗೂ ಇತರರು ವಿಶೇಷಚೇತನ ಜಾಗೃತಿ ಕಾರ್ಯಕ್ರಮಗಳನ್ನು ನಡೆಸಲು ಮತ್ತು ನಿಧಿ ಸಂಗ್ರಹಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ಸುಪ್ರೀಂ ಕೋರ್ಟ್ ಗಮನಿಸಿದೆ. ನ್ಯಾಯಪೀಠದ ಪ್ರಕಾರ, ಪ್ರಾಮಾಣಿಕ ಪ್ರಯತ್ನಗಳು ನಡೆದಾಗ ಸಕಾರಾತ್ಮಕ ಫಲಿತಾಂಶಗಳು ದೊರೆಯುತ್ತವೆ. ಯುವಕರು ಸಕಾರಾತ್ಮಕ ದಿಕ್ಕಿನಲ್ಲಿ ಕೆಲಸ ಮಾಡಲು ಆರಂಭಿಸಿರುವುದರಿಂದ ಉತ್ತಮ ಪರಿಣಾಮ ಉಂಟಾಗಲಿದೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.
.