ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Indigo Flight Issue: 5 ದಿನವೂ ಮುಂದುವರಿದ ಇಂಡಿಗೋ ವಿಮಾನ ಹಾರಾಟ ವ್ಯತ್ಯಯ; ಪ್ರಯಾಣಿಕರ ಪರದಾಟ

ಇಂಡಿಗೋ ವಿಮಾನ (IndiGo Flights Chaos) ಹಾರಾಟದಲ್ಲಿ ವ್ಯತ್ಯಯ ಇಂದು ಶನಿವಾರ 5ನೇ ದಿನವೂ ಮುಂದುವರಿದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Kempegowda Airport) ಪ್ರಯಾಣಿಕರ ಪರದಾಟ ಮುಂದುವರಿದಿದೆ. ಇಂಡಿಗೋ ಏರ್‌ಲೈನ್‌ನಲ್ಲಿ ಸಿಬ್ಬಂದಿ ಕೊರತೆಯಿಂದ ಸೃಷ್ಠಿಯಾದ ಅವಾಂತರ ಹೇಳತೀರದಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಇಂಡಿಗೋದ ಒಂದು ಸಾವಿರಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದ್ದು ಜನರು ವಿಮಾನ ನಿಲ್ದಾಣಗಳಲ್ಲಿ ಪರದಾಡುತ್ತಿದ್ದಾರೆ.

5 ದಿನವೂ ಮುಂದುವರಿದ ಇಂಡಿಗೋ ವಿಮಾನ ಹಾರಾಟ ವ್ಯತ್ಯಯ

ಸಂಗ್ರಹ ಚಿತ್ರ -

Vishakha Bhat
Vishakha Bhat Dec 6, 2025 10:50 AM

ಬೆಂಗಳೂರು: ಇಂಡಿಗೋ ವಿಮಾನ (IndiGo Flights Chaos) ಹಾರಾಟದಲ್ಲಿ ವ್ಯತ್ಯಯ ಇಂದು ಶನಿವಾರ 5ನೇ ದಿನವೂ ಮುಂದುವರಿದಿದ್ದು, ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (Bengaluru Kempegowda Airport) ಪ್ರಯಾಣಿಕರ ಪರದಾಟ ಮುಂದುವರಿದಿದೆ. ಸಾವಿರಾರು ಪ್ರಯಾಣಿರರು ಏರ್ಪೋರ್ಟ್‌ನಲ್ಲೇ ಹಗಲು- ರಾತ್ರಿ ಕಾಲ ಕಳೆಯುವಂತಾಗಿದೆ. ಇಂಡಿಗೋ ಏರ್‌ಲೈನ್ಸ್‌ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ. ಏರ್‌ಪೋರ್ಟ್‌ ಸಿಬ್ಬಂದಿ ನಮಗೆ ಸರಿಯಾದ ಮಾಹಿತಿ ಕೊಡುತ್ತಿಲ್ಲ. ಕೊನೇ ಕ್ಷಣದಲ್ಲಿ ವಿಮಾನ ಹಾರಾಟ ರದ್ದು ಎಂದು ಹೇಳುತ್ತಾರೆ. 2 ದಿನದಲ್ಲಿ ನಿಮ್ಮ ಹಣ ರೀಫಂಡ್‌ ಆಗುತ್ತದೆ ಎನ್ನುತ್ತಾರೆ ಎಂದು ಹಲವರು ಕಿಡಿ ಕಾರಿದರು.

ಇಂಡಿಗೋ ಏರ್‌ಲೈನ್‌ನಲ್ಲಿ ಸಿಬ್ಬಂದಿ ಕೊರತೆಯಿಂದ ಸೃಷ್ಠಿಯಾದ ಅವಾಂತರ ಹೇಳತೀರದಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಇಂಡಿಗೋದ ಒಂದು ಸಾವಿರಕ್ಕೂ ಅಧಿಕ ವಿಮಾನಗಳ ಹಾರಾಟ ರದ್ದಾಗಿದ್ದು ಜನರು ವಿಮಾನ ನಿಲ್ದಾಣಗಳಲ್ಲಿ ಪರದಾಡುತ್ತಿದ್ದಾರೆ. ಆರಂಭದಲ್ಲಿ ಸಣ್ಣ ಸಮಸ್ಯೆಯಂತೆ ಭಾಸವಾದ ಇದು ಒಂದೆರಡು ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಮಾನಗಳಿದ್ದರೂ ಅದನ್ನು ಆಪರೇಟ್ ಮಾಡಲು ಸಿಬ್ಬಂದಿಗಳಿಲ್ಲದ ಸನ್ನಿವೇಶ ಇಂಡಿಗೋಗೆ ಬಂದಿದೆ. ದೆಹಲಿ, ಬೆಂಗಳೂರು, ಲಕ್ನೋ, ಜಮ್ಮು ಕಾಶ್ಮೀರ, ಚೆನ್ನೈ, ಹೈದರಾಬಾದ್, ಭೂಪಾಲ್ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಪೂರ್ಣವಾಗಿ ವಿಮಾನಗಳ ಹಾರಾಟ ರದ್ದು ಮಾಡಿರುವುದಾಗಿ ಇಂಡಿಗೋ ಘೋಷಣೆ ಮಾಡಿದೆ.

600ಕ್ಕೂ ಹೆಚ್ಚು ಇಂಡಿಗೋ ವಿಮಾನ ರದ್ದು; ಪ್ರಯಾಣಿಕರಿಗೆ ಕ್ಷಮೆ ಕೇಳಿದ CEO

ಇದೇ ಪರಿಸ್ಥಿತಿಯ ಲಾಭ ಪಡೆದಿರುವ ಇತರೆ ಏರ್‌ಲೈನ್‌ಗಳು ಏರ್ ಫೇರ್ ನಿಯಮಗಳನ್ನು ಉಲ್ಲಂಘಿಸಿ ಟಿಕೆಟ್‌ಗಳ ಮೇಲೆ ಹತ್ತಕ್ಕಿಂತ ಹೆಚ್ಚು ಪಟ್ಟು ಬೆಲೆಯನ್ನು ಏರಿಕೆ ಮಾಡಿವೆ. ಮಹಾನಗರಿಗೆ 5 ರಿಂದ 8 ಸಾವಿರ ರೂಪಾಯಿಗೆ ಸಿಗಬೇಕಿದ್ದ ಎಕಾನಮಿ ಟಿಕೆಟ್‌ಗಳು 50 ರಿಂದ 80 ಸಾವಿರ ರೂಪಾಯಿವರೆಗೂ ಏರಿಕೆಯಾಗಿದೆ. ಆರಂಭದಲ್ಲಿ ಸಣ್ಣ ಸಮಸ್ಯೆಯಂತೆ ಭಾಸವಾದ ಇದು ಒಂದೆರಡು ದಿನಗಳಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ವಿಮಾನಗಳಿದ್ದರೂ ಅದನ್ನು ಆಪರೇಟ್ ಮಾಡಲು ಸಿಬ್ಬಂದಿಗಳಿಲ್ಲದ ಸನ್ನಿವೇಶ ಇಂಡಿಗೋಗೆ ಬಂದಿದೆ. ಇದೇ ಕಾರಣದಿಂದಲೇ ದೆಹಲಿ, ಬೆಂಗಳೂರು, ಲಕ್ನೋ, ಜಮ್ಮು ಕಾಶ್ಮೀರ, ಚೆನ್ನೈ, ಹೈದರಾಬಾದ್, ಭೂಪಾಲ್ ಸೇರಿದಂತೆ ಪ್ರಮುಖ ಮಾರ್ಗಗಳಲ್ಲಿ ಸಂಪೂರ್ಣವಾಗಿ ವಿಮಾನಗಳ ಹಾರಾಟ ರದ್ದು ಮಾಡಿರುವುದಾಗಿ ಇಂಡಿಗೋ ಘೋಷಣೆ ಮಾಡಿದೆ.