ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Rahul Gandhi: ಕಾಂಗ್ರೆಸ್‌ ನಾಯಕತ್ವದಲ್ಲಿಯೇ ಉಂಟಾಯ್ತಾ ಬಿರುಕು? ರಾಹುಲ್‌ ಬಿಟ್ಟು ಪ್ರಿಯಾಂಕಾಗೆ ಪಟ್ಟ?

ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ನಡೆದ ಸತತ ಚುನಾವಣೆಗಳ ಸೋಲಿನ ನಂತರ, ಕಾಂಗ್ರೆಸ್‌ ನಾಯಕತ್ವದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಿಯಾಂಕಾ ಗಾಂಧಿ ವಾದ್ರಾಗೆ ರಾಷ್ಟ್ರೀಯ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ರಾಹುಲ್‌ ಮತ್ತು ಪ್ರಿಯಾಂಕಾ ಗಾಂಧಿ

ನವದೆಹಲಿ: ಮಹಾರಾಷ್ಟ್ರ, ಹರಿಯಾಣ ಮತ್ತು ದೆಹಲಿಯಲ್ಲಿ ನಡೆದ ಸತತ ಚುನಾವಣೆಗಳ ಸೋಲಿನ (Rahul Gandhi) ನಂತರ, ಕಾಂಗ್ರೆಸ್‌ ನಾಯಕತ್ವದಲ್ಲಿ ಬಿರುಕು ಮೂಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಪ್ರಿಯಾಂಕಾ ಗಾಂಧಿ (Priyanka Gandhi) ವಾದ್ರಾಗೆ ರಾಷ್ಟ್ರೀಯ ನಾಯಕತ್ವ ನೀಡುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ. ಇದಕ್ಕೆ ಪುಷ್ಟಿ ಎನ್ನುವಂತೆ ಹಲವು ನಾಯಕರು ಪ್ರಿಯಾಂಕಾ ಹೆಸರನ್ನು ಸೂಚಿಸಿದ್ದರು ಎನ್ನಲಾಗಿದೆ. ಒಡಿಶಾದ ಹಿರಿಯ ಶಾಸಕ ಮೊಹಮ್ಮದ್ ಮೋಕಿಮ್ ಅವರು ಸೋನಿಯಾ ಗಾಂಧಿಗೆ ಬರೆದ ಪತ್ರದಲ್ಲಿ ಕಾಂಗ್ರೆಸ್ ನಾಯಕತ್ವವನ್ನು ಪ್ರಶ್ನಿಸಿ ಪ್ರಿಯಾಂಕಾಗೆ ಹೆಚ್ಚಿನ ಪಾತ್ರವನ್ನು ಸೂಚಿಸಿದ್ದರು.

ಶಾಸಕರಾಗಿದ್ದರೂ ಸುಮಾರು ಮೂರು ವರ್ಷಗಳ ಕಾಲ ರಾಹುಲ್ ಗಾಂಧಿಯನ್ನು ಭೇಟಿಯಾಗಲು ಸಾಧ್ಯವಾಗದಿರುವುದಕ್ಕೆ ಅವರು ಬಹಿರಂಗವಾಗಿಯೇ ಅಸಮಧಾನ ವ್ಯಕ್ತಪಡಿಸಿದ್ದರು. ಮತ್ತೊಬ್ಬ ಸಂಸದ ಇಮ್ರಾನ್ ಮಸೂದ್ ಪ್ರಿಯಾಂಕಾ ಗಾಂಧಿ ಅವರನ್ನು ಇಂದಿರಾ ಗಾಂಧಿಗೆ ಹೋಲಿಸಿದ್ದರು. ಮುಂದೊಂದು ದಿನ ಪ್ರಿಯಾಂಕಾ ಇಂದಿರಾ ಗಾಂಧಿಯವರಂತಹ ಮಹಾನ್ ಪ್ರಧಾನಿಯಾಗುತ್ತಾರೆ ಎಂದು ಹೇಳಿದ್ದರು. ಪ್ರಿಯಾಂಕಾ ಗಾಂಧಿ, ಹೆಸರಿನ ಗಾಂಧಿ, ಇಂದಿರಾ ಗಾಂಧಿಯವರ ಮೊಮ್ಮಗಳು, ಪಾಕಿಸ್ತಾನಕ್ಕೆ ಎಷ್ಟು ಹೊಡೆತ ಕೊಟ್ಟರೆಂದರೆ ಅದರ ಗಾಯಗಳು ಇಂದಿಗೂ ಹಾಗೆಯೇ ಉಳಿದಿವೆ. ಅವರನ್ನು ಪ್ರಧಾನಿಯನ್ನಾಗಿ ಮಾಡಿ ಮತ್ತು ಪ್ರತೀಕಾರವನ್ನು ನೋಡಿ ಎಂದು ಅವರು ಸದನದಲ್ಲಿ ಹೇಳಿದ್ದರು.

ವಯನಾಡ್ ಸಂಸದೆ, ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ವಂದೇ ಮಾತರಂ ಚರ್ಚೆಯ ಸಂದರ್ಭದಲ್ಲಿ ಮತ್ತು ನಂತರ MGNREGA ಬದಲಿಗೆ VB-G RAM G ಮಸೂದೆಯನ್ನು ವಿರೋಧಿ ವಿಪಕ್ಷವನ್ನು ಮುನ್ನಡೆಸಿದ್ದರು. 30 ನಿಮಿಷಗಳ ಕಾಲ ಮಾತನಾಡಿದ ಪ್ರಿಯಾಂಕಾ, ಜವಾಹರಲಾಲ್ ನೆಹರು ವಿರುದ್ಧ ಬಿಜೆಪಿ ನಡೆಸಿದ ಟೀಕೆಗಳನ್ನು ಖಂಡಿಸಿದ್ದರು. ರಾಹುಲ್‌ ಗಾಂಧಿ ಮತಗಳ್ಳತನದ ಕುರಿತು ಮಾತನಾಡಿದ್ದರೂ ಅದು ಅಷ್ಟೊಂದು ಪ್ರಭಾವ ಬೀರಿರಲಿಲ್ಲ.

ಪ್ರಧಾನಿ ನಿವಾಸದಲ್ಲಿ ನಡೆದ ಸೌಹಾರ್ದ ಸಭೆಯಲ್ಲಿ ಪ್ರಿಯಾಂಕಾ ಮೋದಿ, ಅಮಿತ್‌ ಶಾ ಸೇರಿದಂತೆ ಹಲವು ಬಿಜೆಪಿ ಹಾಗೂ ಕೆಲ ಪಕ್ಷದ ನಾಯಕರ ಜೊತೆ ಮಾತುಕತೆ ನಡೆಸಿದ್ದರು. ಅವರ ಈ ನಡೆಗೆ ಮೆಚ್ಚುಗೆ ಸಹ ವ್ಯಕ್ತವಾಗಿತ್ತು.

ಪ್ರಿಯಾಂಕ ಪ್ಲಸ್‌ ಪಾಯಿಂಟ್‌

ಕೇವಲ ಒಂದು ವರ್ಷದ ಹಿಂದೆಯಷ್ಟೇ ಚುನಾವಣಾ ಪ್ರವೇಶ ಮಾಡಿದ್ದರೂ, ಪ್ರಿಯಾಂಕಾ ರಾಜಕೀಯದಲ್ಲಿ ಉತ್ತಮ ವರ್ಚಸ್ಸನ್ನು ಹೊಂದಿದ್ದಾರೆ. ದೃಷ್ಟಿಕೋನವನ್ನು ವ್ಯಕ್ತಪಡಿಸುವಲ್ಲಿ ಹೆಚ್ಚು ಪರಿಣಾಮಕಾರಿಯಾಗಿ ಮತನಾಡುವ ಕಲೆಯನ್ನು ಹೊಂದಿದ್ದಾರೆ. ಪಕ್ಷದ ಕಾರ್ಯಕರ್ತರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದಾರೆ.