PM Modi: ದೋಹಾದ ಮೇಲೆ ಇಸ್ರೇಲ್ ದಾಳಿ: ಕಳವಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ
ದೋಹಾದ ಮೇಲೆ ಮಂಗಳವಾರ ಇಸ್ರೇಲ್ ದಾಳಿ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್ ರಾಜ್ಯದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ಮಾತನಾಡಿರುವುದಾಗಿ ಸಾಮಾಜಿಕ ಮಾಧ್ಯಮ ಖಾತೆಯಲ್ಲಿ ತಿಳಿಸಿದ್ದು, ದೋಹಾದಲ್ಲಿ ನಡೆದ ದಾಳಿಗಳ ಬಗ್ಗೆ ತೀವ್ರ ಕಳವಳ ಹೊಂದಿರುವುದಾಗಿ ತಿಳಿಸಿದ್ದಾರೆ.

-

ನವದೆಹಲಿ: ದೋಹಾದ (attack on doha) ಮೇಲೆ ಇಸ್ರೇಲ್ ದಾಳಿ (Israel Strikes) ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಅವರು, ಕತಾರ್ (Qatar) ರಾಜ್ಯದ ದೊರೆ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ (Sheikh Tamim Bin Hamad Al-Thani) ಅವರೊಂದಿಗೆ ದೂರವಾಣಿ ಮೂಲಕ ಸಂಭಾಷಣೆ ನಡೆಸಿ ತೀವ್ರ ಕಳವಳ ವ್ಯಕ್ತಪಡಿಸಿದರು. ಈ ಕುರಿತು ಸಾಮಾಜಿಕ ಮಾಧ್ಯಮವಾದ ಎಕ್ಸ್ ನಲ್ಲಿ (X) ಮಾಹಿತಿ ಹಂಚಿಕೊಂಡಿರುವ ಪ್ರಧಾನಿ ಮೋದಿ, ಸಹೋದರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಉಲ್ಲಂಘನೆಯನ್ನು ಭಾರತ ಖಂಡಿಸುತ್ತದೆ ಎಂದು ಹೇಳಿದ್ದಾರೆ.
ದೋಹಾದ ಮೇಲೆ ಮಂಗಳವಾರ ಇಸ್ರೇಲ್ ದಾಳಿ ನಡೆಸಿದ ಬಳಿಕ ಪ್ರಧಾನಿ ನರೇಂದ್ರ ಮೋದಿ ಅವರು ಕತಾರ್ ರಾಜ್ಯದ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ದೂರವಾಣಿ ಸಂಭಾಷಣೆ ನಡೆಸಿ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದರು.
ಈ ಕುರಿತು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಮೋದಿ, ಕತಾರ್ ಅಮೀರ್ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರೊಂದಿಗೆ ಮಾತನಾಡಿದ್ದೇನೆ. ದೋಹಾದಲ್ಲಿ ನಡೆದ ದಾಳಿಗಳ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದೇನೆ. ಸಹೋದರ ರಾಷ್ಟ್ರವಾದ ಕತಾರ್‌ನ ಸಾರ್ವಭೌಮತ್ವದ ಉಲ್ಲಂಘನೆಯನ್ನು ಭಾರತ ಖಂಡಿಸುತ್ತದೆ ಎಂದು ತಿಳಿಸಿದ್ದಾರೆ.
ಸಂವಾದ ಮತ್ತು ರಾಜತಾಂತ್ರಿಕತೆಯ ಮೂಲಕ ಸಮಸ್ಯೆಗಳನ್ನು ಪರಿಹರಿಸಬೇಕು ಮತ್ತು ಸಮಸ್ಯೆಗಳು ಉಲ್ಬಣಗೊಳ್ಳುವುದನ್ನು ತಪ್ಪಿಸುವುದನ್ನು ನಾವು ಬೆಂಬಲಿಸುತ್ತೇವೆ. ಭಾರತವು ಈ ಪ್ರದೇಶದಲ್ಲಿ ಶಾಂತಿ ಮತ್ತು ಸ್ಥಿರತೆಗೆ ಮತ್ತು ಅದರ ಎಲ್ಲಾ ರೂಪಗಳು ಮತ್ತು ಅಭಿವ್ಯಕ್ತಿಗಳಲ್ಲಿ ಭಯೋತ್ಪಾದನೆಯ ವಿರುದ್ಧ ದೃಢವಾಗಿ ಬೆಂಬಲ ನೀಡುತ್ತದೆ ಎಂದು ಹೇಳಿರುವುದಾಗಿ ಅವರು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದಾರೆ.
ಪ್ರಧಾನ ಮಂತ್ರಿಗಳ ಕಚೇರಿ ನೀಡಿರುವ ಮಾಹಿತಿ ಪ್ರಕಾರ, ಗಾಜಾದಲ್ಲಿ ಕದನ ವಿರಾಮವನ್ನು ಸಾಧಿಸಲು ಮತ್ತು ಎಲ್ಲಾ ಒತ್ತೆಯಾಳುಗಳನ್ನು ಬಿಡುಗಡೆ ಮಾಡಲು ಅದರ ಮಧ್ಯಸ್ಥಿಕೆ ಪ್ರಯತ್ನಗಳು ಸೇರಿದಂತೆ ಪ್ರಾದೇಶಿಕ ಶಾಂತಿ ಮತ್ತು ಸ್ಥಿರತೆಯನ್ನು ಉತ್ತೇಜಿಸುವಲ್ಲಿ ಕತಾರ್ ವಹಿಸುತ್ತಿರುವ ಪಾತ್ರವನ್ನು ಪ್ರಧಾನಿ ಮೋದಿ ಶ್ಲಾಘಿಸಿದ್ದಾರೆ.
ಪ್ರಧಾನಿ ಮೋದಿಗೆ ಧನ್ಯವಾದ ಹೇಳಿರುವ ಶೇಖ್ ತಮೀಮ್, ಭಾರತ ಮತ್ತು ಕತಾರ್ ಪರಸ್ಪರ ಆಸಕ್ತಿಯ ಎಲ್ಲಾ ಕ್ಷೇತ್ರಗಳಲ್ಲಿ ದ್ವಿಪಕ್ಷೀಯ ಸಹಕಾರವನ್ನು ಮುನ್ನಡೆಸಲು ತಾವು ಬದ್ಧವಾಗಿರುವುದಾಗಿ ಹೇಳಿದರು.
ದೋಹಾದ ಮೇಲಿನ ದಾಳಿಯ ಬಗ್ಗೆ ಪ್ರತಿಕ್ರಿಯಿಸಿರುವ ವಿದೇಶಾಂಗ ಸಚಿವಾಲಯ, ದಾಳಿಯಿಂದ ಕತಾರ್ ನ ಅಭಿವೃದ್ಧಿ ಮತ್ತು ಅದರ ಭದ್ರತಾ ಪರಿಸ್ಥಿತಿಯ ಮೇಲೆ ಬೀರುವ ಪರಿಣಾಮದ ಬಗ್ಗೆ ಭಾರತ ತೀವ್ರ ಕಳವಳ ಹೊಂದಿದೆ. ಇಲ್ಲಿ ಶಾಂತಿ ಮತ್ತು ಭದ್ರತೆಗೆ ಅಪಾಯವಾಗದಂತೆ ಕ್ರಮ ಕೈಗೊಳ್ಳಲು ನಾವು ಒತ್ತಾಯಿಸುತ್ತೇವೆ ಎಂದು ಹೇಳಿದೆ.
ಇದನ್ನೂ ಓದಿ: Nepal Gen Z Protest: ನೇಪಾಳದಲ್ಲಿ ಜೆನ್ ಝಿ ಪ್ರತಿಭಟನೆ; ಹೊತ್ತಿ ಉರಿಯುತ್ತಿರುವ ಸಂಸತ್ತಿನ ಮುಂದೆ ಡ್ಯಾನ್ಸ್
ಪ್ರಧಾನಿ ಮೋದಿ ಅವರ ಆಹ್ವಾನದ ಮೇರೆಗೆ ಈ ವರ್ಷದ ಆರಂಭದಲ್ಲಿ ಶೇಖ್ ತಮೀಮ್ ಬಿನ್ ಹಮದ್ ಅಲ್-ಥಾನಿ ಅವರು ಭಾರತಕ್ಕೆ ಭೇಟಿ ನೀಡಿದ್ದರು. ಸಚಿವರು, ಅಧಿಕಾರಿಗಳು ಮತ್ತು ವ್ಯಾಪಾರ ನಾಯಕರನ್ನು ಒಳಗೊಂಡ ಉನ್ನತ ಮಟ್ಟದ ನಿಯೋಗವೂ ಇವರೊಂದಿಗೆ ಬಂದಿತ್ತು. ಇದು ಕತಾರ್‌ನ ಅಮೀರ್ ಅವರ ಭಾರತಕ್ಕೆ ನೀಡಿದ ಎರಡನೇ ಭೇಟಿಯಾಗಿತ್ತು. ಈ ಸಂದರ್ಭದಲ್ಲಿ ಅವರು ದ್ವಿಪಕ್ಷೀಯ ಕಾರ್ಯತಂತ್ರದ ಪಾಲುದಾರಿಕೆ ಸ್ಥಾಪನೆಯ ಒಪ್ಪಂದಕ್ಕೆ ಸಹಿ ಹಾಕಿದ್ದರು.