Operation Sindoor: ಭಾರತ-ಪಾಕ್ ಘರ್ಷಣೆ; ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಿದ ಕಂಪನಿಗಳು
ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿದ್ದಂತೆ, ಪ್ರಮುಖ ಭಾರತೀಯ ಐಟಿ ಮತ್ತು ಜಾಗತಿಕ ಸಲಹಾ ಸಂಸ್ಥೆಗಳು ಸೂಕ್ಷ್ಮ ಪ್ರದೇಶಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಿದೆ. ಅನಾವಶ್ಯಕ ಪ್ರಯಾಣವನ್ನು ತಪ್ಪಿಸಿ ಎಂದು ಸಲಹೆ ನೀಡಿದೆ. ಬಹು ರಾಷ್ಟ್ರೀಯ ಸಂಸ್ಥೆಗಳು ಸೇರಿದಂತೆ ಹಲವು ಕಂಪನಿಗಳು ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ.


ನವದೆಹಲಿ: ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆ (Operation Sindoor) ಹೆಚ್ಚಾಗುತ್ತಿದ್ದಂತೆ, ಪ್ರಮುಖ ಭಾರತೀಯ ಐಟಿ ಮತ್ತು ಜಾಗತಿಕ ಸಲಹಾ ಸಂಸ್ಥೆಗಳು (Work From Home) ಸೂಕ್ಷ್ಮ ಪ್ರದೇಶಗಳಲ್ಲಿನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡಲು ಸೂಚನೆ ನೀಡಿದೆ. ಅನಾವಶ್ಯಕ ಪ್ರಯಾಣವನ್ನು ತಪ್ಪಿಸಿ ಎಂದು ಸಲಹೆ ನೀಡಿದೆ. ಬಹು ರಾಷ್ಟ್ರೀಯ ಸಂಸ್ಥೆಗಳು ಸೇರಿದಂತೆ ಹಲವು ಕಂಪನಿಗಳು ತನ್ನ ಉದ್ಯೋಗಿಗಳಿಗೆ ಮನೆಯಿಂದಲೇ ಕೆಲಸ ಮಾಡುವಂತೆ ಸೂಚಿಸಿದೆ. ದೆಹಲಿ, ನೋಯ್ಡಾ ಸೇರಿದಂತೆ ಉತ್ತರ ರಾಜ್ಯಗಳಲ್ಲಿ ಹೆಚ್ಚಿದ ಭದ್ರತಾ ಎಚ್ಚರಿಕೆಗಳ ನಡುವೆಯೂ ಉದ್ಯೋಗಿಗಳನ್ನು ರಕ್ಷಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಂಡಿವೆ.
ದೆಹಲಿ, ನೋಯ್ಡಾ, ಗುರುಗ್ರಾಮ್, ಚಂಡೀಗಢ ಮತ್ತು ಇತರ ಹೈ-ಅಲರ್ಟ್ ಪ್ರದೇಶಗಳಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ WFH ಸಲಹೆಯನ್ನು ನೀಡಲಾಗಿದೆ. ಡೆಲಾಯ್ಟ್ ಇಂಡಿಯಾ ಎಲ್ಲಾ ಅನಿವಾರ್ಯವಲ್ಲದ ದೇಶೀಯ ಮತ್ತು ಅಂತರರಾಷ್ಟ್ರೀಯ ಪ್ರಯಾಣವನ್ನು ಮುಂದೂಡಲು ಉದ್ಯೋಗಿಗಳನ್ನು ಕೇಳಿಕೊಂಡಿದೆ ಎಂದು ವರದಿಯಾಗಿದೆ. ಸಿಬ್ಬಂದಿಗೆ ಸಹಾಯ ಮಾಡಲು ಕಮಾಂಡ್ ಸೆಂಟರ್ ಹಾಟ್‌ಲೈನ್ ಅನ್ನು ಸಹ ಸ್ಥಾಪಿಸಲಾಗಿದೆ ಎಂದು ವರದಿಯಾಗಿದೆ. ಭಾರತದ ಮೂರನೇ ಅತಿದೊಡ್ಡ ಐಟಿ ಸೇವೆಗಳ ಕಂಪನಿಯಾದ HCLTech, ಚಂಡೀಗಢ, ಗುರುಗ್ರಾಮ್ ಮತ್ತು ನೋಯ್ಡಾದಲ್ಲಿರುವ ತನ್ನ ಎಲ್ಲಾ ಕಚೇರಿಗಳಿಗೆ ಮೇ 9 ವರ್ಕ್ ಫ್ರಾಮ್ ಹೋಮ್ ಘೋಷಿಸಿದೆ. ಸಾಮಾಜಿಕ ಮಾಧ್ಯಮದಲ್ಲಿ ಅಥವಾ ಕ್ಲೈಂಟ್ ಸಂವಹನದ ಸಮಯದಲ್ಲಿ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ಚರ್ಚಿಸಬೇಡಿ ಎಂಬ ಸೂಚನೆಯನ್ನು ಉದ್ಯೋಗಿಗಳಿಗೆ ನೀಡಲಾಗಿದೆ.
ಭಾರತದಲ್ಲಿ KPMG ದೆಹಲಿ, ಗುರಗಾಂವ್, ನೋಯ್ಡಾ ಮತ್ತು ಜೈಪುರದ ಉದ್ಯೋಗಿಗಳಿಗೆ ವ್ಯವಹಾರ ವ್ಯವಸ್ಥಾಪಕರೊಂದಿಗೆ ಚರ್ಚೆಗಳನ್ನು ನಡೆಸಿ ವರ್ಕ್ ಫ್ರಾಮ್ ಹೋಮ್ ಘೋಷಿಸಿದೆ. ತುರ್ತು ಕೆಲಸ ಇದ್ದಲ್ಲಿ ಮಾತ್ರ ಕಚೇರಿಗೆ ಬರುವಂತೆ ಸೂಚನೆ ಹೊರಡಿಸಲಾಗಿದೆ.
ಈ ಸುದ್ದಿಯನ್ನೂ ಓದಿ: ಪಾಕಿಸ್ತಾನದ 4 ಏರ್ ಬೇಸ್ ಉಡೀಸ್, ಭಾರತೀಯ ಸೇನೆ ಸರ್ವ ಸನ್ನದ್ಧ; ಸುದ್ದಿಗೋಷ್ಠಿಯಲ್ಲಿ ಸೇನೆ ಮಾಹಿತಿ
ದೇಶದಲ್ಲಿ ಈಗಾಗಲೇ ಹೈ ಅಲರ್ಟ್ ಘೋಷಿಸಲಾಗಿದೆ. ಶುಕ್ರವಾರ ರಾತ್ರಿ ಪಾಕಿಸ್ತಾನ ಮತ್ತೆ ಡ್ರೋನ್ ದಾಳಿಯನ್ನು ಪ್ರಾರಂಭಿಸಿದ್ದು, ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ. ರಕ್ಷಣಾ ಇಲಾಖೆ ಹಾಗೂ ವಿದೇಶಾಂಗ ಇಲಾಖೆ ನಡೆಸಿದ ಜಂಟಿ ಸುದ್ದಿಗೋಷ್ಠಿಯಲ್ಲಿ ಪಾಕಿಸ್ತಾನದ 4 ವಾಯುನೆಲೆಗಳನ್ನು ಭಾರತೀಯ ಸೇನೆ ಧ್ವಂಸಗೊಳಿಸಿದೆ ಎಂದು ಮಾಹಿತಿ ನೀಡಿದೆ. ಪಾಕಿಸ್ತಾನ ಸುಳ್ಳು ಮಾಹಿತಿ ನೀಡಿದ್ದು, ನಮ್ಮ ಯಾವುದೇ ವಾಯುನೆಲೆಗೆ ಯಾವುದೇ ಹಾನಿ ಸಂಭವಿಸಿಲ್ಲ ಎಂದು ರಕ್ಷಣಾ ಇಲಾಖೆ ತಿಳಿಸಿದೆ. ಭಾರತದ ಪಶ್ಚಿಮ ಗಡಿಗಳಲ್ಲಿ ಪಾಕಿಸ್ತಾನದ ಡ್ರೋನ್ ದಾಳಿ ಮತ್ತು ಇತರ ಯುದ್ಧಸಾಮಗ್ರಿಗಳ ದಾಳಿ ಮುಂದುವರೆದಿದೆ. ಇಂದು ಬೆಳಿಗ್ಗೆ ಸರಿಸುಮಾರು 5 ಗಂಟೆಗೆ, ಅಮೃತಸರದ ಖಾಸಾ ಕ್ಯಾಂಟ್ ಮೇಲೆ ಹಾರುತ್ತಿರುವ ಬಹು ಶತ್ರು ಶಸ್ತ್ರಸಜ್ಜಿತ ಡ್ರೋನ್‌ಗಳು ಕಂಡುಬಂದವು. ನಮ್ಮ ವಾಯು ರಕ್ಷಣಾ ಘಟಕಗಳು ಶತ್ರು ಡ್ರೋನ್‌ಗಳನ್ನು ತಕ್ಷಣವೇ ತೊಡಗಿಸಿಕೊಂಡು ನಾಶಪಡಿಸಿದವು" ಎಂದು ಭಾರತೀಯ ಸೇನೆ ತಿಳಿಸಿದೆ.