ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸರ್ವಿಸ್ ರೈಫಲ್ ಸಹಿತ ನಾಪತ್ತೆಯಾದ ಜಮ್ಮು ಮತ್ತು ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ!

SPO Goes Missing in J&K: 55 ವರ್ಷದ ವಿಶೇಷ ಪೊಲೀಸ್ ಅಧಿಕಾರಿ (SPO) ಒಬ್ಬರು ತಮ್ಮ ಸೇವಾ ರೈಫಲ್‌ನೊಂದಿಗೆ ನಾಪತ್ತೆಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ನಾಪತ್ತೆಯಾಗಿರುವ ಪೊಲೀಸ್ ಅಧಿಕಾರಿಯನ್ನು ಕಿಶ್ತ್ವಾರ್‌ನ ತ್ರಿಹ್ಗಾಮ್ ನಿವಾಸಿ ಬಶೀರ್ ಅಹ್ಮದ್ ಎಂದು ಗುರುತಿಸಲಾಗಿದೆ.

ಜಮ್ಮು-ಕಾಶ್ಮೀರದ ವಿಶೇಷ ಪೊಲೀಸ್ ಅಧಿಕಾರಿ ನಾಪತ್ತೆ

ನಾಪತ್ತೆಯಾದ ಅಧಿಕಾರಿ ಬಶೀರ್ ಅಹ್ಮದ್ -

Priyanka P
Priyanka P Oct 16, 2026 4:20 PM

ಶ್ರೀನಗರ, ಅ.16: 55 ವರ್ಷದ ವಿಶೇಷ ಪೊಲೀಸ್ ಅಧಿಕಾರಿ (SPO) ಒಬ್ಬರು ತಮ್ಮ ಸೇವಾ ರೈಫಲ್‌ನೊಂದಿಗೆ ನಾಪತ್ತೆಯಾಗಿರುವ ಘಟನೆ ಜಮ್ಮು ಮತ್ತು ಕಾಶ್ಮೀರದ (Jammu and Kashmir) ಕಿಶ್ತ್ವಾರ್ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆ ಚೆನಾಬ್ ಕಣಿವೆಯಲ್ಲಿ ಆತಂಕ ಮೂಡಿಸಿದ್ದು, ಭದ್ರತಾ ಪಡೆಗಳು ಬೃಹತ್ ಶೋಧ ಕಾರ್ಯಾಚರಣೆ ಆರಂಭಿಸಿವೆ. ನಾಪತ್ತೆಯಾಗಿರುವ ಪೊಲೀಸ್ ಅಧಿಕಾರಿಯನ್ನು ಕಿಶ್ತ್ವಾರ್‌ನ ತ್ರಿಹ್ಗಾಮ್ ನಿವಾಸಿ ಬಶೀರ್ ಅಹ್ಮದ್ ಎಂದು ಗುರುತಿಸಲಾಗಿದೆ.

ಅಧಿಕಾರಿಗಳು ನೀಡಿರುವ ಮಾಹಿತಿಯ ಪ್ರಕಾರ, ಇಂದು ಬೆಳಗ್ಗೆ ಸುಮಾರು 7 ಗಂಟೆಗೆ ಅಹ್ಮದ್ ಅವರು ಮನೆಗೆ ತೆರಳಲು ಪೊಲೀಸ್ ಪೋಸ್ಟ್‌ನಿಂದ ಹೊರಟಿದ್ದರು. ಆದರೆ, ಅವರು ಮನೆ ತಲುಪಲಿಲ್ಲ. ನಾಪತ್ತೆಯಾಗುವ ಸಂದರ್ಭದಲ್ಲಿ ಅಹ್ಮದ್ ಅವರು ತಮ್ಮ ಸೇವಾ ಶಸ್ತ್ರಾಸ್ತ್ರವಾದ ಸೆಲ್ಫ್-ಲೋಡಿಂಗ್ ರೈಫಲ್ (SLR) ಅನ್ನು ಹೊಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಬೆಳಗ್ಗಿನಿಂದಲೂ ಅವರೊಂದಿಗೆ ಸಂಪರ್ಕ ಸಾಧಿಸಲು ಸಾಧ್ಯವಾಗಿಲ್ಲ ಎಂದು ಕುಟುಂಬದ ಸದಸ್ಯರು ಹೇಳಿದ್ದಾರೆ.

ಜಮ್ಮು-ಕಾಶ್ಮೀರದಲ್ಲಿ ಲ್ಯಾಂಡ್‌ಮೈನ್ ಸ್ಫೋಟ: ಲಷ್ಕರ್ ಕಮಾಂಡರ್ ಸೇರಿ ನಾಲ್ವರು ಉಗ್ರರು ಹತ

ಈ ಮಾಹಿತಿ ತಿಳಿಯುತ್ತಿದ್ದಂತೆ ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿದ್ದು, ಪೊಲೀಸ್ ತಂಡಗಳನ್ನು ತಕ್ಷಣವೇ ಸ್ಥಳಕ್ಕೆ ರವಾನಿಸಲಾಗಿದೆ. ನಾಪತ್ತೆಯಾಗಿರುವ ವಿಶೇಷ ಪೊಲೀಸ್ ಅಧಿಕಾರಿ (SPO) ಹಾಗೂ ಅವರ ಶಸ್ತ್ರಾಸ್ತ್ರವನ್ನು ಪತ್ತೆಹಚ್ಚಲು ಶೋಧ ಕಾರ್ಯಾಚರಣೆ ಆರಂಭಿಸಲಾಗಿದೆ. ಪೊಲೀಸರು ಸಾಧ್ಯವಿರುವ ಎಲ್ಲ ಮಾರ್ಗಗಳು, ಅರಣ್ಯ ಪ್ರದೇಶಗಳು ಹಾಗೂ ಸುತ್ತಮುತ್ತಲಿನ ಸ್ಥಳಗಳಲ್ಲಿ ತೀವ್ರ ಶೋಧ ನಡೆಸುತ್ತಿದ್ದಾರೆ.

ಈ ಪ್ರಕರಣದ ತನಿಖೆ ವೇಳೆ ಪೊಲೀಸರು ಎಲ್ಲ ಆಯಾಮಗಳಿಂದಲೂ ಪರಿಶೀಲನೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ. ಇಂದು (ಅ.16) ಬೆಳಗ್ಗೆ ಕಿಶ್ತ್ವಾರ್‌ನಲ್ಲಿ ಭಾರಿ ಮಳೆಯಾಗಿದ್ದರಿಂದ, ಮನೆಗೆ ತೆರಳುವ ಮಾರ್ಗದಲ್ಲಿ ಅವರು ಜಾರಿ ಬಿದ್ದಿರಬಹುದೇ ಅಥವಾ ಅಪಘಾತಕ್ಕೆ ಸಿಲುಕಿರಬಹುದೇ ಎಂಬ ಸಾಧ್ಯತೆಯನ್ನೂ ಪರಿಶೀಲಿಸಲಾಗುತ್ತಿದೆ.

ಅವರು ರೈಫಲ್‌ ಸಹಿತ ಉಗ್ರ ಸಂಘಟನೆಗೆ ಸೇರಿದ್ದಾರೆಯೇ ಅಥವಾ ಉಗ್ರರು ಅವರನ್ನು ಅಪಹರಿಸಿದ್ದಾರೆಯೇ ಎಂಬುದೂ ಸೇರಿದಂತೆ ಇತರ ಸಾಧ್ಯತೆಗಳ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರದಲ್ಲಿ ಈ ಹಿಂದೆ ಕೆಲ ಪೊಲೀಸರು ತಮ್ಮ ಸೇವಾ ಶಸ್ತ್ರಾಸ್ತ್ರಗಳೊಂದಿಗೆ ಕರ್ತವ್ಯ ತೊರೆದು ಉಗ್ರ ಸಂಘಟನೆಗಳಿಗೆ ಸೇರ್ಪಡೆಯಾದ ಘಟನೆಗಳು ನಡೆದಿದೆ. ಇಲ್ಲಿಯವರೆಗೆ ಪೊಲೀಸರು ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ.