ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

India- Pak : ಆಕ್ರಮಿತ ಕಾಶ್ಮೀರವನ್ನು ಈಗಲೇ ತೆರವುಗೊಳಿಸಿ; ವಿಶ್ವಸಂಸ್ಥೆಯಲ್ಲಿ ಭಾರತದಿಂದ ಪಾಕಿಸ್ತಾನಕ್ಕೆ ಖಡಕ್‌ ಎಚ್ಚರಿಕೆ

ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಹೇಳಿದ್ದಾರೆ.

ಜಿನಿವಾ: ಪಾಕಿಸ್ತಾನವು ಜಮ್ಮು ಮತ್ತು ಕಾಶ್ಮೀರ ಪ್ರದೇಶವನ್ನು ಅಕ್ರಮವಾಗಿ ಆಕ್ರಮಿಸಿಕೊಂಡಿರುವುದನ್ನು ಭಾರತ ವಿಶ್ವಸಂಸ್ಥೆಯಲ್ಲಿ ಖಂಡಿಸಿದೆ. ಕೂಡಲೇ ಪಾಕ್ ಆಕ್ರಮಿತ ಕಾಶ್ಮಿರವನ್ನು ತೆರವುಗೊಳಿಸಲೇಬೇಕು ಎಂದು ಎಚ್ಚರಿಕೆ ನೀಡಿದೆ. ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿ ರಾಯಭಾರಿ ಪರ್ವತನೇನಿ ಹರೀಶ್ ಮಾತನಾಡಿ, ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕಿಸ್ತಾನ ಯಾವಾಗಲೂ ಸುಳ್ಳು ಹೇಳುತ್ತಲೇ ಬಂದಿದೆ. ಅದು ಭಾರತದ ಅವಿಭಾಜ್ಯ ಅಂಗವಾಗಿತ್ತು, ಇದೆ ಮತ್ತು ಯಾವಾಗಲೂ ಉಳಿಯುತ್ತದೆ. ಜಮ್ಮು ಮತ್ತು ಕಾಶ್ಮೀರದ ಕೆಲವು ಪ್ರದೇಶಗಳನ್ನು ಪಾಕಿಸ್ತಾನ ಅಕ್ರಮವಾಗಿ ಆಕ್ರಮಿಸಿಕೊಂಡಿದ್ದು, ಆ ಪ್ರದೇಶಗಳನ್ನು ತಕ್ಷಣವೇ ತೆರವುಗೊಳಿಸಬೇಕಾಗುತ್ತದೆ ಎಂದು ಅವರು ಹೇಳಿದ್ದಾರೆ.

ವಿಶ್ವಸಂಸ್ಥೆಯ ಶಾಂತಿ ಕಾರ್ಯಾಚರಣೆಗಳಲ್ಲಿ ಹೊಂದಾಣಿಕೆಯನ್ನು ಹೆಚ್ಚಿಸುವ ಕುರಿತು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯ ಮುಕ್ತ ಚರ್ಚೆಯಲ್ಲಿ ಮಾತನಾಡುವಾಗ ಅವರು ಪಾಕಿಸ್ತಾನಕ್ಕೆ ಕಾಶ್ಮೀರ ಖಾಲಿ ಮಾಡುವಂತೆ ಸೂಚನೆ ನೀಡಿದ್ದಾರೆ. ಪಾಕಿಸ್ತಾನದ ಪ್ರತಿನಿಧಿಯು ವಿಶ್ವಸಂಸ್ಥೆಯಲ್ಲಿ ಜಮ್ಮು ಮತ್ತು ಕಾಶ್ಮೀರದ ವಿರುದ್ಧ ಅನುಚಿತ ಹೇಳಿಕೆಗಳನ್ನು ನೀಡಿದ್ದರು. ಇದಕ್ಕೆ ಪ್ರತಿಕ್ರಿಯೆಯಾಗಿ, ಪರ್ವತನೇನಿ ಹರೀಶ್ ಅವರಿಂದ ಈ ಹೇಳಿಕೆ ಬಂದಿದೆ. ಭಾರತದ ಕೇಂದ್ರಾಡಳಿತ ಪ್ರದೇಶವಾದ ಜಮ್ಮು ಮತ್ತು ಕಾಶ್ಮೀರದ ಬಗ್ಗೆ ಪಾಕಿಸ್ತಾನದ ಪ್ರತಿನಿಧಿ ಮತ್ತೊಮ್ಮೆ ಅನಗತ್ಯ ಹೇಳಿಕೆಗಳನ್ನು ನೀಡಿದ್ದಾರೆ ಎಂಬುದನ್ನು ಭಾರತ ಗಮನಿಸಬೇಕಾಗಿದೆ. ಇಂತಹ ಹೇಳಿಕೆಗಳನ್ನು ನಾವು ಸಹಿಸುವುದಿಲ್ಲ ಎಂದು ಅವರು ಹೇಳಿದ್ದಾರೆ. ಅವರು ಪ್ರಾಯೋಜಿತ ಗಡಿಯಾಚೆಗಿನ ಭಯೋತ್ಪಾದನೆಯನ್ನು ಸಮರ್ಥಿಸುವುದಿಲ್ಲ ಎಂದು ಕಿಡಿಕಾರಿದ್ದಾರೆ. ತಮ್ಮ ಸಂಕುಚಿತ ಮತ್ತು ವಿಭಜಕ ಕಾರ್ಯಸೂಚಿಯನ್ನು ಸಾಧಿಸಲು ಈ ವೇದಿಕೆಯ ಗಮನವನ್ನು ಬೇರೆಡೆಗೆ ತಿರುಗಿಸಲು ಪ್ರಯತ್ನಿಸಬೇಡಿ ಎಂದು ನಾವು ಪಾಕಿಸ್ತಾನಕ್ಕೆ ಸಲಹೆ ನೀಡುತ್ತೇವೆ ಎಂದಿದ್ದಾರೆ.



ಈ ಸುದ್ದಿಯನ್ನೂ ಓದಿ: Lashkar-e-Taiba : ಲಷ್ಕರ್-ಎ-ತೊಯ್ಬಾದ ಮೋಸ್ಟ್ ವಾಂಟೆಡ್ ಉಗ್ರ ಅಬು ಖತಾಲ್ ಪಾಕಿಸ್ತಾನದಲ್ಲಿ ಹತ್ಯೆ

ಅಫ್ಘಾನಿಸ್ತಾನದ ಬಗ್ಗೆ ಭಾರತದ ನಿಲುವು

ಏತನ್ಮಧ್ಯೆ, ಇತ್ತೀಚೆಗೆ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ, ರಾಯಭಾರಿ ಪರ್ವತನೇನಿ ಹರೀಶ್ ಅವರು ಭಾರತ ಮತ್ತು ಅಫ್ಘಾನಿಸ್ತಾನದ ನಡುವಿನ ಸಂಬಂಧವು ಶತಮಾನಗಳಷ್ಟು ಹಳೆಯದು ಎಂದು ಒತ್ತಿ ಹೇಳಿದ್ದರು. ಭಾರತ ಮತ್ತು ಅಫ್ಘಾನಿಸ್ತಾನದ ಜನರ ನಡುವೆ ವಿಶೇಷ ಸಂಬಂಧವಿದ್ದು, ಅದು ನಮ್ಮ ಪ್ರಸ್ತುತ ಕಾರ್ಯಕ್ರಮಗಳಿಗೆ ಆಧಾರವಾಗಿದೆ ಎಂದು ಅವರು ಹೇಳಿದರು. ಅಫ್ಘಾನಿಸ್ತಾನದಲ್ಲಿ ಸ್ಥಿರತೆ ಮತ್ತು ಶಾಂತಿಯನ್ನು ಕಾಪಾಡಿಕೊಳ್ಳಲು ಭಾರತ ಪ್ರಾದೇಶಿಕ ಮತ್ತು ಅಂತಾರಾಷ್ಟ್ರೀಯ ಪ್ರಯತ್ನಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದೆ ಎಂದು ಅವರು ಹೇಳಿದ್ದರು.