ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಶಿಕ್ಷಣ ಸುಧಾರಣೆಗಾಗಿ ನಡೆದ ಪ್ರತಿಭಟನೆ ವೇಳೆ ಇದೆಂಥ ವಿಕೃತಿ? ದೆಹಲಿಯಲ್ಲಿ ಯುವತಿಗೆ ಲೈಂಗಿಕ ಕಿರುಕುಳ; ದೂರು ನೀಡಿದಾಗ ಇದೆಲ್ಲ ಕಾಮನ್‌ ಎಂದಿದ್ದ ಆಯೋಜಕರು

Student Protest in Delhi: ದೆಹಲಿ ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ತನ್ನ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಮಾಜಿ ಶಾಸಕರ ಪುತ್ರಿ ಆರೋಪಿಸಿದ್ದಾರೆ. ಆರೋಪಿಯನ್ನು ತಾನು ಥಳಿಸಿದ್ದರೂ, ಅಲ್ಲಿದ್ದ ಕೆಲವರು ಘಟನೆಯನ್ನು ಗಂಭೀರವಾಗಿ ಪರಿಗಣಿಸದೆ ತನ್ನನ್ನೇ ಪ್ರಶ್ನಿಸಿದರು ಎಂದು ಅವರು ಹೇಳಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಅಧಿಕೃತ ತನಿಖೆ ಆರಂಭವಾಗಿಲ್ಲ.

ದೆಹಲಿಯಲ್ಲಿ ನಡೆದ ಪ್ರತಿಭಟನೆ

ನವದೆಹಲಿ, ಜು. 27: ದೆಹಲಿಯ ಜಂತರ್ ಮಂತರ್‌ನಲ್ಲಿ (Jantar Mantar) ಜುಲೈ 24ರಂದು ನಡೆದ ವಿದ್ಯಾರ್ಥಿ ಪ್ರತಿಭಟನೆಯ ವೇಳೆ ತನ್ನ ಮೇಲೆ ಲೈಂಗಿಕ ಕಿರುಕುಳ ನಡೆದಿದೆ ಎಂದು ಬಿಜೆಪಿ ಮಾಜಿ ಶಾಸಕರೊಬ್ಬರ ಪುತ್ರಿ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತು ಅವರು ಇನ್‌ಸ್ಟಾಗ್ರಾಂನಲ್ಲಿ ವಿವರವಾದ ಪೋಸ್ಟ್ ಹಂಚಿಕೊಂಡಿದ್ದು, ಘಟನೆಯು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಕಾರಣವಾಗಿದೆ. ತಮ್ಮ ಸಹೋದರಿಯೊಂದಿಗೆ ಮುಖ್ಯ ವೇದಿಕೆ ಸಮೀಪ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಜನಸಂದಣಿ ಹೆಚ್ಚಾಗಿತ್ತು. ಇದೇ ವೇಳೆ ಒಂದು ಬ್ಯಾರಿಕೇಡ್ ಕುಸಿದು ಗೊಂದಲದ ವಾತಾವರಣ ನಿರ್ಮಾಣವಾಯಿತು. ಈ ಸಂದರ್ಭವನ್ನು ದುರುಪಯೋಗಪಡಿಸಿಕೊಂಡ ವ್ಯಕ್ತಿಯೊಬ್ಬ ಹಿಂದಿನಿಂದ ಬಂದು ತನ್ನನ್ನು ಅಸಭ್ಯವಾಗಿ ಸ್ಪರ್ಶಿಸಲು ಯತ್ನಿಸಿ, ಬಲವಂತವಾಗಿ ಕಾಲುಗಳ ನಡುವೆ ಕೈ ಹಾಕಲು ಪ್ರಯತ್ನಿಸಿದ್ದಾನೆ ಎಂದು ಅವರು ಆರೋಪಿಸಿದ್ದಾರೆ.

ತಕ್ಷಣ ಆರೋಪಿಗೆ ಮೂರು ಬಾರಿ ಕಪಾಳಮೋಕ್ಷ ಮಾಡಿದ್ದಾಗಿ ಅವರು ತಿಳಿಸಿದ್ದಾರೆ. ಆದರೆ, ಆರೋಪಿಯನ್ನು ತಡೆಯುವ ಅಥವಾ ಪ್ರಶ್ನಿಸುವ ಬದಲು ಅಲ್ಲಿದ್ದ ಕೆಲವರು ತನ್ನ ಮೇಲೆಯೇ ಆಕ್ರೋಶ ವ್ಯಕ್ತಪಡಿಸಿದರು ಎಂದು ದೂರಿದ್ದಾರೆ. ಪ್ರತಿಭಟನೆಯ ಸ್ವಯಂಸೇವಕರೊಬ್ಬರು "ನೀವು ಇಲ್ಲಿ ಏಕೆ ಬಂದಿದ್ದೀರಿ?" ಎಂದು ಕೂಗಾಡಿದರೆ, ಮತ್ತೊಬ್ಬ ಸ್ವಯಂಸೇವಕ "ಇಂತಹ ತಪ್ಪುಗಳು ಆಗುತ್ತವೆ" ಎಂದು ಹೇಳಿ ಘಟನೆಯನ್ನು ನಿರ್ಲಕ್ಷಿಸಿದ ಆರೋಪವನ್ನೂ ಮಾಡಿದ್ದಾರೆ.
ಈ ಆರೋಪಗಳು ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿ ಪ್ರತಿಭಟನೆಗೆ ಸಂಬಂಧಿಸಿದ ವಿವಾದದ ನಡುವೆಯೇ ಹೊರಬಿದ್ದಿವೆ.

ಪ್ರತಿಭಟನೆ ವೇಳೆ ಯುವತಿ ಮೇಲೆ ಲೈಂಗಿಕ ದೌರ್ಜನ್ಯ:



ಇತ್ತೀಚೆಗೆ ಇದೇ ಪ್ರತಿಭಟನೆಯಲ್ಲಿ ಪೊಲೀಸ್ ಕ್ರಮ, ಪ್ರತಿಭಟನಾಕಾರರ ಬಂಧನ ಹಾಗೂ ಎಫ್‌ಐಆರ್‌ಗಳ ವಿಚಾರ ರಾಷ್ಟ್ರ ಮಟ್ಟದಲ್ಲಿ ಚರ್ಚೆಗೆ ಗ್ರಾಸವಾಗಿತ್ತು.
ಆರೋಪಗಳ ಕುರಿತು ಪ್ರತಿಕ್ರಿಯಿಸಿದ ಸಿಜೆಪಿ ನಾಯಕರೊಬ್ಬರು, "ಈ ಘಟನೆಯ ಬಗ್ಗೆ ನನಗೆ ಯಾವುದೇ ಮಾಹಿತಿ ಇಲ್ಲ. ನನ್ನ ತಾಯಿ ನನ್ನ ಪುತ್ರಿಯೊಂದಿಗೆ ಇದ್ದರು. ಏನಾಗಿದೆ ಎಂಬುದನ್ನು ಅವರೇ ಹೆಚ್ಚು ಸ್ಪಷ್ಟವಾಗಿ ಹೇಳಬಹುದು" ಎಂದು ತಿಳಿಸಿದ್ದಾರೆ.

ಸದ್ಯ ಈ ಆರೋಪಗಳಿಗೆ ಸಂಬಂಧಿಸಿದಂತೆ ಪೊಲೀಸ್ ದೂರು ದಾಖಲಾಗಿದೆಯೇ ಅಥವಾ ಅಧಿಕೃತ ತನಿಖೆ ಆರಂಭವಾಗಿದೆಯೇ ಎಂಬ ಮಾಹಿತಿ ಲಭ್ಯವಾಗಿಲ್ಲ. ಆರೋಪಗಳ ಬಗ್ಗೆ ಸಂಬಂಧಪಟ್ಟ ಸಂಘಟನೆಯಿಂದಲೂ ಅಧಿಕೃತ ಪ್ರತಿಕ್ರಿಯೆ ಇನ್ನೂ ಹೊರಬಂದಿಲ್ಲ.