ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Jaya Bachchan: ಮತ್ತೆ ಜಯಾ ಬಚ್ಚನ್ ಕಿರಿಕ್‌! ಸೆಲ್ಫಿಗೆ ಮುಂದಾದ ವ್ಯಕ್ತಿಗೆ ಮಾಡಿದ್ದೇನು ಗೊತ್ತಾ? ಇಲ್ಲಿದೆ ವಿಡಿಯೊ

Viral Video: ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ನಟಿ-ರಾಜಕಾರಣಿ ಜಯಾ ಬಚ್ಚನ್ ಅವರು ತಳ್ಳಿದ್ದ ಘಟನೆ ಮಂಗಳವಾರ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದಿದೆ. ನೀವು ಏನು ಮಾಡುತ್ತಿದ್ದೀರಿ? ಎಂದು ಕೋಪದಿಂದ ಪ್ರಶ್ನಿಸಿದ್ದಾರೆ. ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ, ನೆಟ್ಟಿಗರು ಜಯಾ ಬಚ್ಚನ್ ಅವರ ವರ್ತನೆಯನ್ನು ಖಂಡಿಸಿದ್ದಾರೆ.

ನವದೆಹಲಿ: ಸೆಲ್ಫಿ ತೆಗೆದುಕೊಳ್ಳಲು ಯತ್ನಿಸಿದ್ದ ವ್ಯಕ್ತಿಯನ್ನು ನಟಿ-ರಾಜಕಾರಣಿ ಜಯಾ ಬಚ್ಚನ್ ಅವರು ತಳ್ಳಿದ್ದ ಘಟನೆ ಮಂಗಳವಾರ ನವದೆಹಲಿಯ ಕಾನ್ಸ್ಟಿಟ್ಯೂಷನ್ ಕ್ಲಬ್‌ನಲ್ಲಿ ನಡೆದಿದೆ. ಜಯಾ ಬಚ್ಚನ್ ಅವರೊಂದಿಗೆ ವ್ಯಕ್ತಿಯೊಬ್ಬ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸಿದಾಗ ಅವರು ತಾಳ್ಮೆ ಕಳೆದುಕೊಂಡರು. ಈ ಘಟನೆಯ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್(Viral Video) ಆಗಿದೆ.

ವೈರಲ್ ಆಗಿರುವ ವಿಡಿಯೊದಲ್ಲಿ ಸಮಾಜವಾದಿ ಪಕ್ಷದ ಸಂಸದೆ ಜಯಾ ಬಚ್ಚನ್ ತಮ್ಮೊಂದಿಗೆ ಸೆಲ್ಫಿ ತೆಗೆದುಕೊಳ್ಳಲು ಪ್ರಯತ್ನಿಸುತ್ತಿದ್ದ ವ್ಯಕ್ತಿಯನ್ನು ತಳ್ಳುತ್ತಿರುವುದು ಕಂಡುಬಂದಿದೆ. ನೀವು ಏನು ಮಾಡುತ್ತಿದ್ದೀರಿ? ಎಂದು ಕೋಪದಿಂದ ಪ್ರಶ್ನಿಸಿದ್ದಾರೆ. ಬಚ್ಚನ್ ಅವರ ಜೊತೆ ಶಿವಸೇನಾ (ಯುಬಿಟಿ) ನಾಯಕಿ ಪ್ರಿಯಾಂಕಾ ಚತುರ್ವೇದಿ ಕೂಡ ಇದ್ದರು. ನಂತರ ಕ್ಲಬ್ ಕಡೆಗೆ ಸಾಗಿದ್ದಾರೆ.

ವಿಡಿಯೊ ವೀಕ್ಷಿಸಿ:

ಜಯಾ ಬಚ್ಚನ್ ವರ್ತನೆಗೆ ನೆಟ್ಟಿಗರು ಆಕ್ರೋಶ

ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ಕೂಡಲೇ, ನೆಟ್ಟಿಗರು ಜಯಾ ಬಚ್ಚನ್ ಅವರ ವರ್ತನೆಯನ್ನು ಖಂಡಿಸಿದ್ದಾರೆ. ಅಲ್ಲದೆ ಸೆಲೆಬ್ರಿಟಿಗಳೊಂದಿಗೆ ಫೋಟೋವನ್ನು ಕ್ಲಿಕ್ಕಿಸಿಕೊಳ್ಳಬೇಡಿ ಎಂದು ಇತರೆ ಕೆಲವರು ಒತ್ತಾಯಿಸಿದರು. ಜಯಾ ಬಚ್ಚನ್ ಈ ರೀತಿ ವರ್ತಿಸುತ್ತಿರುವುದು ಇದೇ ಮೊದಲಲ್ಲ. ಆದರೂ ಅವರೊಂದಿಗೆ ಸೆಲ್ಫಿ ತೆಗೆದುಕೊಳ್ಳುವ ಹುಚ್ಚೇ ಎಂದು ಕೆಲವರು ಕಿಡಿಕಾರಿದ್ದಾರೆ.

ಅಂದಹಾಗೆ ಜಯಾ ಬಚ್ಚನ್ ತನ್ನ ಖಾಸಗಿತನಕ್ಕೆ ಧಕ್ಕೆ ತಂದಿದ್ದಕ್ಕಾಗಿ ನಿಂದಿಸುತ್ತಿರುವುದು ಇದೇ ಮೊದಲಲ್ಲ. ಈ ಹಿಂದೆ ಹಲವು ಬಾರಿ ಈ ರೀತಿ ವರ್ತಿಸಿದ್ದಾರೆ. 2024 ರಲ್ಲಿ ಮುಂಬೈನಲ್ಲಿ ನಡೆದ ಲೋಕಸಭಾ ಚುನಾವಣೆಯ ಸಮಯದಲ್ಲಿ, ಜಯಾ ಬಚ್ಚನ್ ತಮ್ಮ ಪತಿ ಅಮಿತಾಬ್ ಬಚ್ಚನ್ ಅವರೊಂದಿಗೆ ಮತ ಚಲಾಯಿಸಲು ಬಂದರು. ಈ ವೇಳೆ ಮತಗಟ್ಟೆಯ ಹೊರಗೆ ಛಾಯಾಗ್ರಾಹಕರು ಸುತ್ತುವರೆದಿದ್ದರಿಂದ ನಟಿ ಕೋಪಗೊಂಡಿದ್ದರು.

ಕಳೆದ ವರ್ಷ ಮುಂಬೈನಲ್ಲಿ ನಡೆದ ಅಮಿರ್ ಖಾನ್ ಅವರ ಪುತ್ರಿ ಇರಾ ಅವರ ವಿವಾಹ ಆರತಕ್ಷತೆಗೆ ಜಯಾ ಬಚ್ಚನ್ ತಮ್ಮ ಪುತ್ರಿ ಶ್ವೇತಾ ಬಚ್ಚನ್ ಅವರೊಂದಿಗೆ ಆಗಮಿಸಿದ್ದರು. ಛಾಯಾಗ್ರಾಹಕರು ರೆಡ್ ಕಾರ್ಪೆಟ್ ಮೇಲೆ ಒಂದು ನಿರ್ದಿಷ್ಟ ಸ್ಥಳದಲ್ಲಿ ಪೋಸ್ ನೀಡುವಂತೆ ಕೇಳಿಕೊಂಡಾಗ ಅವರು ಸಿಟ್ಟಿಗೆದ್ದರು. ತನಗೆ ನಿರ್ದೇಶನ ನೀಡದಂತೆ ತಾಕೀತು ಮಾಡಿದ್ದರು.