ಫೋಟೋ ಗ್ಯಾಲರಿ ಆಪರೇಷನ್​ ಸಿಂಧೂರ ಐಪಿಎಲ್​ ಅಕ್ಷಯ ತೃತೀಯ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Pahalgam Terror Attack: 3 ಪಾಕ್ ಭಯೋತ್ಪಾದಕರ ಪೋಸ್ಟರ್‌ ಬಿಡುಗಡೆ; ಸುಳಿವು ನೀಡಿದ್ರೆ 20 ಲಕ್ಷ ರೂ ಬಹುಮಾನ ಘೋಷಣೆ

ಏಪ್ರಿಲ್ 22 ರಂದು 26 ನಾಗರಿಕರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿಂದೆ ಕೈವಾಡವಿದೆ ಎಂದು ಶಂಕಿಸಲಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಪೋಸ್ಟರ್‌ಗಳನ್ನು ಭದ್ರತಾ ಸಂಸ್ಥೆಗಳು ಜಮ್ಮು ಕಾಶ್ಮೀರದ ರಸ್ತೆಗಳಲ್ಲಿ ಹಾಕಲಾಗಿದೆ.

3 ಪಾಕ್ ಭಯೋತ್ಪಾದಕರ ಪೋಸ್ಟರ್‌ ಬಿಡುಗಡೆ

Profile Vishakha Bhat May 13, 2025 12:03 PM

ನವದೆಹಲಿ: ಏಪ್ರಿಲ್ 22 ರಂದು 26 ನಾಗರಿಕರ ಪ್ರಾಣವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ (Pahalgam Terror Attack) ಹಿಂದೆ ಕೈವಾಡವಿದೆ ಎಂದು ಶಂಕಿಸಲಾದ ಮೂವರು ಪಾಕಿಸ್ತಾನಿ ಭಯೋತ್ಪಾದಕರ ಪೋಸ್ಟರ್‌ಗಳನ್ನು ಭದ್ರತಾ ಸಂಸ್ಥೆಗಳು ಜಮ್ಮು ಕಾಶ್ಮೀರದ ರಸ್ತೆಗಳಲ್ಲಿ ಹಾಕಲಾಗಿದೆ. 'ಭಯೋತ್ಪಾದನೆ ಮುಕ್ತ ಕಾಶ್ಮೀರ' ಎಂಬ ಸಂದೇಶವನ್ನು ಹೊಂದಿರುವ ಪೋಸ್ಟರ್‌ಗಳು ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಅನೇಕ ಸ್ಥಳಗಳಲ್ಲಿ ಕಾಣಿಸಿಕೊಂಡಿವೆ. ಅಷ್ಟೇ ಅಲ್ಲದೆ ಭಯೋತ್ಪಾದಕರ ಸುಳಿವನ್ನು ನೀಡಿದವರಿಗೆ 20 ಲಕ್ಷ ರೂ. ನೀಡುವುದಾಗಿ ಪೋಸ್ಟರ್‌ಗಳಲ್ಲಿ ಉಲ್ಲೇಖ ಮಾಡಲಾಗಿದೆ.

ಕೃತ್ಯದಲ್ಲಿ ಭಾಗಿಯಾಗಿರುವ ಭಯೋತ್ಪಾದಕರ ಬಗ್ಗೆ ವಿಶ್ವಾಸಾರ್ಹ ಮಾಹಿತಿ ನೀಡಿದವರಿಗೆ 20 ಲಕ್ಷ ರೂ.ಗಳ ಬಹುಮಾನ ನೀಡುವುದಾಗಿ ಪೋಸ್ಟರ್‌ಗಳಲ್ಲಿ ಘೋಷಿಸಲಾಗಿದೆ. ಮಾಹಿತಿದಾರರ ಗುರುತನ್ನು ಕಟ್ಟುನಿಟ್ಟಾಗಿ ಗೌಪ್ಯವಾಗಿಡಲಾಗುವುದು ಎಂದು ಭದ್ರತಾ ಪಡೆಗಳು ತಿಳಿಸಿವೆ. ಪಹಲ್ಗಾಮ್ ಪಟ್ಟಣದಿಂದ ಸುಮಾರು ಆರು ಕಿಲೋಮೀಟರ್ ದೂರದಲ್ಲಿರುವ ಬೈಸರನ್ ಕಣಿವೆಯಲ್ಲಿ ಏ. 22 ರಂದು ಉಗ್ರರು ನಡೆಸಿದ ಭಾರತ ಉಗ್ರರನ್ನು ಮಟ್ಟ ಹಾಕುವ ಕಾರ್ಯವನ್ನು ಮಾಡುತ್ತಿದೆ.

ಈ ದಾಳಿಯ ಮಾಸ್ಟರ್‌ ಮೈಂಡ್‌ಗಳು ಎಂದು ಹೇಳಲಾದ ಭಯೋತ್ಪಾದಕರು ಇವರೆಲ್ಲರೂ ಲಷ್ಕರ್-ಎ-ತೈಬಾ (ಎಲ್‌ಇಟಿ) ಸಂಘಟನೆಯ ಸದಸ್ಯರಗಳು. ಇವರು ಅನಂತ್‌ನಾಗ್ ನಿವಾಸಿ ಆದಿಲ್ ಹುಸೇನ್ ಥೋಕರ್ ಮತ್ತು ಇಬ್ಬರು ಪಾಕಿಸ್ತಾನಿ ಪ್ರಜೆಗಳು - ಅಲಿ ಭಾಯ್ ಅಕಾ ತಲ್ಹಾ ಭಾಯ್ ಮತ್ತು ಹಾಶಿಮ್ ಮೂಸಾ ಅಕಾ ಸುಲೇಮಾನ್. ಪಾಕಿಸ್ತಾನ ಮೂಲದ ಲಷ್ಕರ್-ಎ-ತೈಬಾ (ಎಲ್‌ಇಟಿ) ಯ ಒಂದು ಅಂಗವಾದ ರೆಸಿಸ್ಟೆನ್ಸ್ ಫ್ರಂಟ್ (ಟಿಆರ್‌ಎಫ್) ಪಹಲ್ಗಾಮ್ ದಾಳಿಯ ಹೊಣೆಯನ್ನು ಹೊತ್ತುಕೊಂಡಿತು.

ಈ ಸುದ್ದಿಯನ್ನೂ ಓದಿ: Operation Sindoor: ನ್ಯೂಕ್ಲಿಯರ್‌ ದಾಳಿ ಬೆದರಿಕೆಗೆ ಭಾರತ ಹೆದರಲ್ಲ; ಪಾಕಿಸ್ತಾನವನ್ನು ಉಗ್ರ ಪೋಷಕ ಎಂದ ಮೋದಿ

ಈ ದಾಳಿಯ ಪ್ರತೀಕಾರವಾಗಿ ಭಾರತ ಮೇ 9 ರಂದು ಆಪರೇಷನ್‌ ಸಿಂದೂರ್‌ ಕಾರ್ಯಾರಣೆಯನ್ನು ನಡೆಸಿ ಉಗ್ರರ ನೆಲೆಗಳನ್ನು ಧ್ವಂಸ ಮಾಡಿದೆ. ಈ ದಾಳಿಯಲ್ಲಿ 100 ಕ್ಕೂ ಹೆಚ್ಚು ಉಗ್ರರು ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಪ್ರಧಾನಿ ನರೇಂದ್ರ ಮೋದಿ ಪಾಕಿಸ್ತಾನ ಹಾಗೂ ಉಗ್ರರಿಗೆ ಖಡಕ್‌ ಎಚ್ಚರಿಕೆ ನೀಡಿದ್ದಾರೆ. ಭಾರತದ ತಂಟೆಗೆ ಬಂದವರ ಗತಿ ಏನಾಗಿದೆ ಎಂದು ಇದೀಗ ಅವರಿಗೆ ಮನವರಿಕೆ ಆಗಿದೆ ಎಂದು ಅವರು ಹೇಳಿದ್ದಾರೆ.