ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಸೋನಿಯಾ ಗಾಂಧಿ ವಿರುದ್ಧ ವಿವಾದಾತ್ಮಕ ಪೋಸ್ಟ್; ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್‌

Kangana Ranaut: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ, ರಾಜೀವ್‌ ಗಾಂಧಿ ಮತ್ತು ಸಂಜಯ್‌ ಗಾಂಧಿ ಅವರ ದುರಂತ ಸಾವುಗಳನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ವಿವಾದಾತ್ಮಕ ಪೋಸ್ಟ್ ಮಾಡಿದ್ದ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ ವಿರುದ್ಧ ಶಿಮ್ಲಾ ಪೊಲೀಸರು ಎಫ್‌ಐಆರ್‌ ದಾಖಲಿಸಿದ್ದಾರೆ.

ಬಿಜೆಪಿ ಸಂಸದೆ ಕಂಗನಾ ರಣಾವತ್ ವಿರುದ್ಧ ಎಫ್‌ಐಆರ್‌

BJP MP Kangana Ranaut -

Profile
Jyoti S Nov 14, 2026 10:32 AM

ಶಿಮ್ಲಾ, ನ.14: ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ (Sonia Gandhi), ರಾಜೀವ್ ಗಾಂಧಿ ಮತ್ತು ಸಂಜಯ್ ಗಾಂಧಿ ಅವರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪ್ರಚೋದನಕಾರಿ ಪೋಸ್ಟ್‌ ಮಾಡಿದ ಆರೋಪದ ಮೇಲೆ ಬಿಜೆಪಿ ಸಂಸದೆ ಮತ್ತು ನಟಿ ಕಂಗನಾ ರಣಾವತ್ (Kangana Ranaut) ವಿರುದ್ಧ ಹಿಮಾಚಲ ಪ್ರದೇಶದ ಪೊಲೀಸರು ಎಫ್‌ಐಆರ್‌ ( FIR) ದಾಖಲಿಸಿದ್ದಾರೆ. ಶಿಮ್ಲಾದ ಬೋಯ್ಲಿಯೋಗಂಜ್ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ ಎಂದು ಶಿಮ್ಲಾ ಪೊಲೀಸ್ ವರಿಷ್ಠಾಧಿಕಾರಿ ಗೌರವ್ ಸಿಂಗ್ ಹೇಳಿದ್ದಾರೆ.

ಕಂಗನಾ ಅವರು ಗಾಂಧಿ ಕುಟುಂಬವನ್ನು ಗುರಿಯಾಗಿಸಿಕೊಂಡು ತಮ್ಮ ಸಾಮಾಜಿಕ ಜಾಲತಾಣದಲ್ಲಿ 'ನಿಗೂಢ ವಿದೇಶಿ ಮಹಿಳೆ' ಎಂದು ಪೋಸ್ಟ್‌ ಮಾಡಿದ್ದರು. ಈ ಪೋಸ್ಟ್‌ ವಿರುದ್ಧ ಶಿಮ್ಲಾ ನಿವೃತ್ತ ಸೇನಾಧಿಕಾರಿ ಕ್ಯಾಪ್ಟನ್ ಅತುಲ್ ಶರ್ಮಾ ಅವರು ನೀಡಿದ ಅಧಿಕೃತ ದೂರಿನ ಆಧಾರದ ಮೇಲೆ ಪೊಲೀಸರು ಈ ಕ್ರಮ ಕೈಗೊಂಡಿದ್ದಾರೆ. ಭಾರತೀಯ ನ್ಯಾಯ ಸಂಹಿತೆ 2023ರ ಸೆಕ್ಷನ್ 196 (ಗುಂಪುಗಳ ನಡುವೆ ದ್ವೇಷ ಹರಡುವುದು), ಸೆಕ್ಷನ್ 353 (ಸುಳ್ಳು ಮಾಹಿತಿಯ ಮೂಲಕ ಸಾರ್ವಜನಿಕ ಶಾಂತಿಗೆ ಭಂಗ ತರುವುದು) ಮತ್ತು ಸೆಕ್ಷನ್ 356 (ಮಾನನಷ್ಟ) ಅಡಿಯಲ್ಲಿ ಕಂಗನಾ ವಿರುದ್ಧ ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಲಾಗಿದೆ.

ಪ್ರಧಾನಿ ಹುದ್ದೆ ಬಿಟ್ಟು ಕೊಟ್ಟು ಸೋನಿಯಾ ಗಾಂಧಿ ಸೂಪರ್‌ ಪಿಎಂ ಆಗಿದ್ದರು: ಬಿಜೆಪಿ ವ್ಯಂಗ್ಯ

ಕಂಗನಾ ರಣಾವತ್ ಪೋಸ್ಟ್‌ನಲ್ಲಿ ಏನಿದೆ?

ಕಂಗನಾ ಅವರು ನ.10 ರಂದು ತಮ್ಮ ಎಕ್ಸ್‌ ಖಾತೆಯಲ್ಲಿ ವಿವಾದಾತ್ಮಕ ಪೋಸ್ಟ್‌ಗಳನ್ನು ಪ್ರಕಟಿಸಿದ್ದರು. ಪೋಸ್ಟ್‌ನಲ್ಲಿ ಇಂದಿರಾ ಗಾಂಧಿ, ಸಂಜಯ್ ಗಾಂಧಿ ಮತ್ತು ರಾಜೀವ್ ಗಾಂಧಿಯವರ ಸಾವಿನ ಸುತ್ತಲಿನ ಸಂದರ್ಭಗಳ ಬಗ್ಗೆ ಅನುಮಾನ ಮೂಡಿಸಲು ಅವರು ಯತ್ನಿಸಿದ್ದಾರೆ ಎಂದು ಶರ್ಮಾ ಆರೋಪಿಸಿದ್ದಾರೆ. ಸೋನಿಯಾ ಗಾಂಧಿಯವರನ್ನು "ನಿಗೂಢ ವಿದೇಶಿ ಪ್ರಜೆ" ಎಂದು ಬರೆದುಕೊಂಡಿದ್ದು, ಅವರು ಗಾಂಧಿ ಕುಟುಂಬಕ್ಕೆ ಪ್ರವೇಶಿಸಿದ ಮೇಲೆ ಒಬ್ಬರ ಹಿಂದೆ ಒಬ್ಬರಂತೆ ಕುಟುಂಬದ ಸದಸ್ಯರು ಹತ್ಯೆಯಾದರು. ಸಂಜಯ್ ಗಾಂಧಿ ಮರಣದ ನಂತರ ಮನೇಕಾ ಗಾಂಧಿ ಅವರನ್ನು ಕುಟುಂಬದ ನಿವಾಸದಿಂದ ಹೊರಹಾಕಲಾಯಿತು ಎಂದು ಬರೆದುಕೊಂಡಿದ್ದರು.

ಇಂತಹ ಆರೋಪಗಳು ರಾಜಕೀಯ ಟೀಕೆಯ ಎಲ್ಲೆಯನ್ನು ಮೀರಿದ್ದು, ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಹುಟ್ಟುಹಾಕುವ ಅಪಾಯವಿದೆ ಎಂದು ದೂರುದಾರರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.