Vijay's Rally Stampede: ಕರೂರು ಕಾಲ್ತುಳಿತ; ಮೃತರ ಕುಟುಂಬಕ್ಕೆ 20 ಲಕ್ಷ ರೂ. ಪರಿಹಾರ ಘೋಷಿಸಿದ ವಿಜಯ್
ಕರೂರಿನಲ್ಲಿ ನಡೆದ ದುರಂತ ಘಟನೆಯ ನಂತರ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್ ಸಂತಾಪ ಸೂಚಿಸಿದ್ದಾರೆ. ನನ್ನ ಹೃದಯ ಮುರಿದುಹೋಗಿದೆ; ನಾನು ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿದ್ದೇನೆ ಎಂದು ಹೇಳಿದ್ದಾರೆ.

-

ಚೆನ್ನೈ: ಕರೂರಿನಲ್ಲಿ ನಡೆದ ದುರಂತ ಘಟನೆಯ ನಂತರ ನಟ ಮತ್ತು ತಮಿಳಗ ವೆಟ್ರಿ ಕಳಗಂ (ಟಿವಿಕೆ) ನಾಯಕ ವಿಜಯ್ ಸಂತಾಪ ಸೂಚಿಸಿದ್ದಾರೆ. ನನ್ನ (Vijay's Rally Stampede) ಹೃದಯ (Tamilnadu) ಮುರಿದುಹೋಗಿದೆ; ನಾನು ಅಸಹನೀಯ, ವರ್ಣನಾತೀತ ನೋವು ಮತ್ತು ದುಃಖದಲ್ಲಿದ್ದೇನೆ. ಕರೂರಿನಲ್ಲಿ ಪ್ರಾಣ ಕಳೆದುಕೊಂಡ ನನ್ನ ಪ್ರೀತಿಯ ಸಹೋದರ ಸಹೋದರಿಯರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪ ಮತ್ತು ಸಂತಾಪವನ್ನು ವ್ಯಕ್ತಪಡಿಸುತ್ತೇನೆ ಎಂದು ಅವರು ಹೇಳಿದ್ದಾರೆ. ಕಾಲ್ತುಳಿತದಲ್ಲಿ ಒಟ್ಟು 39 ಜನರು ಮೃತಪಟ್ಟಿದ್ದಾರೆ. ಮೃತರಲ್ಲಿ ಒಂಬತ್ತು ಮಕ್ಕಳು ಮತ್ತು 17 ಮಹಿಳೆಯರು ಸೇರಿದ್ದು, 60 ಕ್ಕೂ ಮಂದಿಗೆ ಗಂಭೀರ ಗಾಯಗಳಾಗಿವೆ.
ವಿಜಯ್ ಟ್ವೀಟ್ ಮಾಡಿ ಮೃತರಿಗೆ ಸಂತಾಪ ಸೂಚಿಸಿದ್ದಾರೆ. ತಾವು ಭೇಟಿಯಾದ ಅನೇಕ ಜನರ ಮುಖಗಳನ್ನು ನೆನಪಿಸಿಕೊಂಡ ಅವರು, ಅವರ ವಾತ್ಸಲ್ಯ ಮತ್ತು ಕಾಳಜಿಯ ನೆನಪುಗಳು ತಮ್ಮ ಮನಸ್ಸಿನಲ್ಲಿ ಮಿನುಗುತ್ತಲೇ ಇರುತ್ತವೆ, ನಷ್ಟದ ನೋವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು. ಯಾವುದೇ ಸಾಂತ್ವನದ ಮಾತುಗಳು ಪ್ರೀತಿಪಾತ್ರರನ್ನು ಕಳೆದುಕೊಳ್ಳುವ ನೋವನ್ನು ಕಡಿಮೆ ಮಾಡಲು ಸಾಧ್ಯವಿಲ್ಲ ಎಂದು ನನಗೆ ತಿಳಿದಿದೆ. ನಿಮ್ಮ ದುಃಖಕ್ಕೆ ನಾನು ನಿಮ್ಮೊಂದಿಗಿದ್ದೇನೆ ಎಂದು ಹೇಳಿದರು.
ಬೆಂಬಲದ ಸಂಕೇತವಾಗಿ, ಪ್ರೀತಿಪಾತ್ರರನ್ನು ಕಳೆದುಕೊಂಡ ಪ್ರತಿ ಕುಟುಂಬಕ್ಕೆ 20 ಲಕ್ಷ ರೂ.ಗಳನ್ನು ಮತ್ತು ಗಾಯಗೊಂಡು ವೈದ್ಯಕೀಯ ಚಿಕಿತ್ಸೆ ಪಡೆಯುತ್ತಿರುವವರಿಗೆ 2 ಲಕ್ಷ ರೂ.ಗಳನ್ನು ನೀಡುವುದಾಗಿ ವಿಜಯ್ ಘೋಷಿಸಿದರು. ಅಂತಹ ನಷ್ಟವನ್ನು ಯಾವುದೇ ಹಣವು ಸರಿದೂಗಿಸಲು ಸಾಧ್ಯವಿಲ್ಲ ಆದರೂ ನನ್ನ ಕರ್ತವ್ಯ ಇದು ಎಂದು ಹೇಳಿದರು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಈ ಕಾಲ್ತುಳಿತ ದುರಂತಕ್ಕೆ ಆಘಾತ ವ್ಯಕ್ತಪಡಿಸಿದ್ದಾರೆ. ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಘೋಷಿಸಿದ್ದಾರೆ. ಘಟನೆ ಬಗ್ಗೆ ತಮಿಳುನಾಡು ಸಿಎಂ ಎಂ.ಕೆ.ಸ್ಟ್ಯಾಲಿನ್ ಪ್ರತಿಕ್ರಿಯಿಸಿದ್ದು, ಕರೂರಿನಿಂದ ಬರುತ್ತಿರುವ ಸುದ್ದಿ ಆತಂಕಕಾರಿಯಾಗಿದೆ. ಗಾಯಾಳುಗಳಿಗೆ ತಕ್ಷಣ ಚಿಕಿತ್ಸೆ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿದ್ದೇನೆ. ಹತ್ತಿರದ ತಿರುಚ್ಚಿ ಜಿಲ್ಲೆಯ ಸಚಿವ ಅನ್ಬಿಲ್ ಮಹೇಶ್ ಅವರಿಗೂ ಯುದ್ಧೋಪಾದಿಯಲ್ಲಿ ಅಗತ್ಯ ಸಹಾಯ ನೀಡುವಂತೆ ಆದೇಶಿಸಿದ್ದೇನೆ ಎಂದರು.
ಈ ಘಟನೆಗೆ ಪ್ರಧಾನಿ ನರೇಂದ್ರ ಮೋದಿ (Narendra Modi) ಸಂತಾಪ ಸೂಚಿಸಿದ್ದಾರೆ. ʼʼತಮಿಳುನಾಡಿನ ಕರೂರಿನಲ್ಲಿ ಆಯೋಜಿಸಿದ್ದ ರಾಜಕೀಯ ರ‍್ಯಾಲಿಯಲ್ಲಿ ನಡೆದ ಘಟನೆ ತಿಳಿದು ದುಃಖವಾಗಿದೆ. ಪ್ರೀತಿಪಾತ್ರರನ್ನು ಕಳೆದುಕೊಂಡ ಕುಟುಂಬದ ಜತೆಗೆ ನಾವಿದ್ದೇವೆ ಎಂದು ಹೇಳಿದ್ದಾರೆ.