MEA : ಕಾಶ್ಮೀರ ನಮ್ಮದು ಎಂದ ಪಾಕ್‌ಗೆ ಮುಟ್ಟಿ ನೋಡಿಕೊಳ್ಳುವ ಉತ್ತರ ಕೊಟ್ಟ ವಿದೇಶಾಂಗ ಇಲಾಖೆ; ವಿಡಿಯೋ ನೋಡಿ
ಇಸ್ಲಾಮಾಬಾದ್ನಲ್ಲಿ ನಡೆದ ಮೊದಲ ಸಾಗರೋತ್ತರ ಪಾಕಿಸ್ತಾನಿ ಸಮ್ಮೇಳನದಲ್ಲಿ ಭಾಗವಹಿಸಿ ಭಾರತ ಕುರಿತು ಕಿಡಿ ಕಾರಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನೀಡಿದ್ದ ಹೇಳಿಕೆಗೆ ಭಾರತ ಪ್ರತಿಕ್ರಿಯೆ ನೀಡಿದೆ. ಕಾಶ್ಮೀರ ಇಸ್ಲಾಮಾಬಾದ್‌ನ "ಕತ್ತಿನ ರಕ್ತನಾಳ" ಎಂದು ಹೇಳಿದ್ದ ಪಾಕಿಸ್ತಾನಿ ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ.


ನವದೆಹಲಿ: ಇಸ್ಲಾಮಾಬಾದ್ನಲ್ಲಿ ನಡೆದ ಮೊದಲ ಸಾಗರೋತ್ತರ ಪಾಕಿಸ್ತಾನಿ ಸಮ್ಮೇಳನದಲ್ಲಿ ಭಾಗವಹಿಸಿ ಭಾರತ ಕುರಿತು ಕಿಡಿ ಕಾರಿದ್ದ ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್ ನೀಡಿದ್ದ ಹೇಳಿಕೆಗೆ ಭಾರತ ಪ್ರತಿಕ್ರಿಯೆ ನೀಡಿದೆ. ಕಾಶ್ಮೀರ ಇಸ್ಲಾಮಾಬಾದ್‌ನ "ಕತ್ತಿನ ರಕ್ತನಾಳ" ಎಂದು ಹೇಳಿದ್ದ ಪಾಕಿಸ್ತಾನಿ ಸೇನಾ ಮುಖ್ಯಸ್ಥರ ಹೇಳಿಕೆಯನ್ನು ಭಾರತ ತಳ್ಳಿಹಾಕಿದೆ. ಪಾಕಿಸ್ತಾನದ "ಕಾಶ್ಮೀರದೊಂದಿಗಿನ ಏಕೈಕ ಸಂಬಂಧ" ಅಕ್ರಮವಾಗಿ ಆಕ್ರಮಿಸಿಕೊಂಡಿರುವ ಪ್ರದೇಶವನ್ನು ಖಾಲಿ ಮಾಡುವುದು ಮಾತ್ರ ಎಂದು ತಿಳಿಸಿದೆ. ವಿದೇಶಾಂಗ ಸಚಿವಾಲಯದ ( MEA) ವಕ್ತಾರ ರಣಧೀರ್ ಜೈಸ್ವಾಲ್ ಪಾಕಿಸ್ತಾನದ ಅಸಂಬದ್ಧ ಹೇಳಿಕೆಗೆ ತಿರುಗೇಟು ನೀಡಿದ್ದಾರೆ.
Pakistan needs to vacate Pakistan occupied Kashmir, says MEA Spox in response to remarks by Pakistan Army chief pic.twitter.com/bVR7sNWCNM
— Sidhant Sibal (@sidhant) April 17, 2025
ಪಾಕಿಸ್ತಾನ ಸೇನಾ ಮುಖ್ಯಸ್ಥ ಜನರಲ್ ಅಸಿಮ್ ಮುನೀರ್(Asim Munir) ಭಾರತ ಹಾಗೂ ಹಿಂದೂ ಧರ್ಮದ ಕುರಿತು ಕಿಡಿ ಕಾರಿದ್ದಾರೆ. ವಿದೇಶಗಳಲ್ಲಿ ನೆಲೆಸಿರುವ ಪಾಕಿಸ್ತಾನಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಜನರಲ್ ಮುನೀರ್, ದೇಶದ ರಾಯಭಾರಿಗಳು ಉನ್ನತ ಸಿದ್ಧಾಂತ ಮತ್ತು ಸಂಸ್ಕೃತಿ"ಗೆ ಸೇರಿದವರು ಎಂಬುದನ್ನು ಮರೆಯಬಾರದು ಎಂದು ಹೇಳಿದ್ದರು. ಭಾರತದ ಕುರಿತು ಕಿಡಿ ಕಾರಿದ್ದ ಅವರು ಭಾರತ ಮತ್ತು ಪಾಕಿಸ್ತಾನ ಹಂಚಿಕೊಳ್ಳುವ ಸಾಮಾನ್ಯ ಇತಿಹಾಸ ಮತ್ತು ಪರಂಪರೆಯ ಕಲ್ಪನೆಗೆ ವಿರುದ್ಧವಾಗಿದೆ ಮತ್ತು ಜಾತ್ಯತೀತತೆಯ ತತ್ವಗಳಿಗೆ ವಿರುದ್ಧವಾಗಿದೆ ಎಂದು ಹೇಳಿದ್ದಾರೆ. , ಭಾರತ ಮತ್ತು ಪಾಕಿಸ್ತಾನ ಎರಡು ರಾಷ್ಟ್ರಗಳು ಎಂದು ಹೇಳಿದರು. "ನಾವು ಒಂದೇ ರಾಷ್ಟ್ರವಲ್ಲ. ಅದಕ್ಕಾಗಿಯೇ ನಮ್ಮ ಪೂರ್ವಜರು ಈ ದೇಶವನ್ನು ರಚಿಸಲು ಹೋರಾಡಿದರು. ನಮ್ಮ ಪೂರ್ವಜರು ಮತ್ತು ನಾವು ಈ ದೇಶದ ಸೃಷ್ಟಿಗೆ ಸಾಕಷ್ಟು ತ್ಯಾಗ ಮಾಡಿದ್ದೇವೆ. ಅದನ್ನು ಹೇಗೆ ರಕ್ಷಿಸಿಕೊಳ್ಳಬೇಕೆಂದು ನಮಗೆ ತಿಳಿದಿದೆ ಎಂದು ಹೇಳಿದ್ದರು.
ಈ ಸುದ್ದಿಯನ್ನೂ ಓದಿ: The Balochistan Story: ಪಾಕ್-ಬಲೂಚ್ ಬಿಕ್ಕಟ್ಟಿನ ಹಿಂದಿದೆ 174 ಲಕ್ಷ ಕೋಟಿ ರೂ. ಮೌಲ್ಯದ ಚಿನ್ನದ ರಹಸ್ಯ!
ಕಾಶ್ಮೀರದ ಬಗ್ಗೆ ಮಾತನಾಡಿದ ಜನರಲ್ ಮುನೀರ್, "ನಮ್ಮ ನಿಲುವು ಸಂಪೂರ್ಣವಾಗಿ ಸ್ಪಷ್ಟವಾಗಿದೆ, ಅದು ನಮ್ಮ ಕುತ್ತಿಗೆಯ ರಕ್ತನಾಳವಾಗಿತ್ತು, ಅದು ನಮ್ಮ ಕುತ್ತಿಗೆಯ ರಕ್ತನಾಳವಾಗಿರುತ್ತದೆ, ನಾವು ಅದನ್ನು ಮರೆಯುವುದಿಲ್ಲ. ಅದನ್ನು ಯಾರಿಗೂ ಬಿಟ್ಟು ಕೊಡಲು ಸಾಧ್ಯವಿಲ್ಲ ಎಂದು ಹೇಳಿದ್ದರು. ಇದೀಗ ಭಾರತ ಪಾಕ್‌ಗೆ ತಕ್ಕ ಪ್ರತ್ಯುತ್ತರವನ್ನು ನೀಡಿದೆ.