ಕೊಲ್ಲೂರು: ಕೇರಳದ ನೂತನ ಮುಖ್ಯಮಂತ್ರಿಯಾಗಿ (Kerala Chief Minister) ಅಧಿಕಾರ ಸ್ವೀಕಾರ ಮಾಡಿದ ಬಳಿಕ ಮೊದಲ ಬಾರಿಗೆ ವಿ.ಡಿ. ಸತೀಶನ್ (cm V.D. Satheesan) ಅವರು ಕೊಲ್ಲೂರು (kerala) ಶ್ರೀ ಮೂಕಾಂಬಿಕಾ ದೇವಾಲಯಕ್ಕೆ (Kollur Mookambika Temple) ಭೇಟಿ ನೀಡಿದ್ದಾರೆ. ಉಡುಪಿ (Udupi) ಜಿಲ್ಲೆಯ ಬೈಂದೂರು ತಾಲೂಕಿನಲ್ಲಿರುವ ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಶುಕ್ರವಾರ ರಾತ್ರಿ ಅವರು ಆಗಮಿಸಿದ್ದರು. ಶನಿವಾರ ಬೆಳಗ್ಗೆ ದೇವಾಲಯದಲ್ಲಿ ಗಣಹೋಮದಲ್ಲಿ ಭಾಗಿಯಾದ ಅವರು ಬಳಿಕ ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ತಿರುವನಂತಪುರಂನಿಂದ ಶುಕ್ರವಾರ ರಾತ್ರಿ ಮಂಗಳೂರಿಗೆ ಏರ್ ಇಂಡಿಯಾ ವಿಮಾನದಲ್ಲಿ ಆಗಮಿಸಿದ ಅವರು ರಸ್ತೆ ಮೂಲಕ ಕೊಲ್ಲೂರಿಗೆ ಆಗಮಿಸಿದ್ದರು. ಬಳಿಕ ಖಾಸಗಿ ಹೋಟೆಲ್‌ನಲ್ಲಿ ತಂಗಿದ್ದರು. ಶನಿವಾರ ಬೆಳಗ್ಗೆ ದೇವಾಲಯದಲ್ಲಿ ಗಣಹೋಮದಲ್ಲಿ ಭಾಗಿಯಾದ ಅವರು ಬಳಿಕ ದೇವಿಗೆ ಪ್ರಾರ್ಥನೆ ಸಲ್ಲಿಸಿದರು.
ಮೋದಿಯವರಿಂದ ಇಂಡೊನೇಷಿಯಾ ಜತೆ 100 ಟನ್ ಬೀಜ ಪೂರೈಕೆ ಒಪ್ಪಂದ
ಕೇರಳ ಮುಖ್ಯಮಂತ್ರಿಯವರ ಆಗಮನದ ಹಿನ್ನೆಲೆಯಲ್ಲಿ ದೇವಸ್ಥಾನದಲ್ಲಿ ಝೆಡ್ ಪ್ಲಸ್ ಭದ್ರತೆಯನ್ನು ಒದಗಿಸಲಾಗಿತ್ತು. ಕ್ಷೇತ್ರದ ಸುತ್ತಮುತ್ತ ಬಿಗಿ ಭದ್ರತೆಯನ್ನು ಕಲ್ಪಿಸಲಾಗಿದ್ದು, ಯಾವುದೇ ರೀತಿಯಲ್ಲಿ ಸಾರ್ವಜನಿಕರಿಗೆ ತೊಂದರೆಯಾಗದಂತೆ ನಿಗಾ ವಹಿಸಲಾಗಿತ್ತು. ದೇವಾಲಯದ ಆಡಳಿತ ಮಂಡಳಿ ವತಿಯಿಂದ ಮುಖ್ಯಮಂತ್ರಿ ಸತೀಶನ್ ಅವರನ್ನು ಸಮ್ಮಾನಿಸಿ ಗೌರವ ಸಲ್ಲಿಸಲಾಯಿತು.
ಬಳಿಕ ಅವರು ದೇವಾಲಯದಿಂದ ರಸ್ತೆ ಮೂಲಕ ಮಂಗಳೂರಿಗೆ ಹೊರಟಿದ್ದು, ಅಲ್ಲಿಂದ ಕೊಚ್ಚಿಗೆ ತೆರಳಲಿದ್ದಾರೆ. ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ನೇರವಾಗಿ ಕೊಚ್ಚಿಗೆ ವಿಮಾನ ಸೌಲಭ್ಯ ಇಲ್ಲದೇ ಇರುವುದರಿಂದ ಅವರು ಬೆಂಗಳೂರಿಗೆ ತೆರಳಿ ಅಲ್ಲಿಂದ ಕೊಚ್ಚಿಗೆ ತೆರಳಲಿದ್ದಾರೆ ಎನ್ನಲಾಗಿದೆ.
ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನಕ್ಕೆ ಇತ್ತೀಚೆಗೆ ತಮಿಳುನಾಡು ಮುಖ್ಯಮಂತ್ರಿ ಜೋಸೆಫ್ ವಿಜಯ್ ಅವರು ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರು ದೇವಿಯ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿ, ದೇವಿಗೆ ಬೆಳ್ಳಿಯ ಖಡ್ಗ ಅರ್ಪಿಸಿದ್ದರು.
Roopa Gururaj Column: ತಿರುಪತಿಯ ತಿಮ್ಮಪ್ಪನಿಗೆ ಕೂದಲು ಕೊಡುವ ಪದ್ದತಿ
ಅವರ ಬಳಿಕ ರಿಲಯನ್ಸ್ ಇಂಡಸ್ಟ್ರೀಸ್‌ನ ಅಧ್ಯಕ್ಷರು ಮತ್ತು ವ್ಯವಸ್ಥಾಪಕ ನಿರ್ದೇಶಕರಾಗಿರುವ ಮುಖೇಶ್ ಅಂಬಾನಿ ಅವರ ಪುತ್ರ ಅನಂತ್ ಅಂಬಾನಿ ಅವರು ಭೇಟಿ ನೀಡಿದ್ದರು. ಅವರ ಜೊತೆ ಅವರ ಕುಟುಂಬದ ಗುರೂಜಿ ಕೂಡ ದೇವಿಯ ದರ್ಶನಕ್ಕೆ ಆಗಮಿಸಿದ್ದರು. ಕೊಲ್ಲೂರು ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ ಅನಂತ್ ಅಂಬಾನಿ ಮಂಗಳಾರತಿ ಮತ್ತು ಪವಿತ್ರ ಪ್ರಸಾದವನ್ನು ಸ್ವೀಕರಿಸಿದ್ದರು.