ಫೋಟೋ ಗ್ಯಾಲರಿ ವಿಶ್ವವಾಣಿ ಪ್ರಾಪರ್ಟಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Hijab Row: ಹಿಜಾಬ್‌ ಧರಿಸಿ ಶಾಲೆಗೆ ಬರಲಿ... ಮುಸ್ಲಿಂ ಬಾಲಕಿಯ ಪರ ನಿಂತ ಶಿಕ್ಷಣ ಸಚಿವ

Kerala Education Minister: ಹಿಜಾಬ್‌ ಇಲ್ಲದೇ ಶಾಲೆಗೆ ಬರುವುದಿಲ್ಲ ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಆಕೆಯ ಬೆಂಬಲಕ್ಕೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ ನಿಂತಿದ್ದಾರೆ. ಕ್ರಿಶ್ಚಿಯನ್‌ ಶಾಲೆಯಲ್ಲಿ ಓದುತ್ತಿರುವ ಹುಡುಗಿಗೆ ಹಿಜಾಬ್‌ ಧರಿಸಿ ಶಿಕ್ಷಣ ಮುಂದುವರಿಸಲು ಅವಕಾಶ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ತಿರುವನಂತಪುರಂ: ಕೇರಳದಲ್ಲಿ ಭುಗಿಲೆದ್ದಿರುವ ಹಿಜಾಬ್‌ ವಿವಾದ(Hijab Row) ಇದೀಗ ಮತ್ತೊಂದು ಟ್ವಿಸ್ಟ್‌ ಪಡೆದುಕೊಂಡಿದೆ. ಹಿಜಾಬ್‌ ಇಲ್ಲದೇ ಶಾಲೆಗೆ ಬರುವುದಿಲ್ಲ ಎಂದು ಪಟ್ಟು ಹಿಡಿದಿರುವ ಬೆನ್ನಲ್ಲೇ ಆಕೆಯ ಬೆಂಬಲಕ್ಕೆ ಕೇರಳ ಶಿಕ್ಷಣ ಸಚಿವ ವಿ. ಶಿವನ್‌ಕುಟ್ಟಿ(Kerala Education Minister) ನಿಂತಿದ್ದಾರೆ. ಕ್ರಿಶ್ಚಿಯನ್‌ ಶಾಲೆಯಲ್ಲಿ ಓದುತ್ತಿರುವ ಹುಡುಗಿಗೆ ಹಿಜಾಬ್‌ ಧರಿಸಿ ಶಿಕ್ಷಣ ಮುಂದುವರಿಸಲು ಅವಕಾಶ ನೀಡುವಂತೆ ಆದೇಶ ಹೊರಡಿಸಿದ್ದಾರೆ.

ಘಟನೆ ಬಗ್ಗೆ ಶಿವನ್‌ಕುಟ್ಟಿ ಅವರು ಶಾಲಾ ಅಧಿಕಾರಿಗಳಿಂದ ವರದಿಯನ್ನು ಪಡೆದಿದ್ದು, ಬಳಿಕ ಫೇಸ್‌ಬುಕ್‌ನಲ್ಲಿ ಪೋಸ್ಟ್‌ವೊಂದನ್ನು ಮಾಡಿದ್ದಾರೆ. ಶಿಕ್ಷಣ ಉಪ ನಿರ್ದೇಶಕರ ತನಿಖೆಯಲ್ಲಿ ಶಾಲೆಯ ಕಡೆಯಿಂದ ಗಂಭೀರ ಲೋಪಗಳು ಕಂಡುಬಂದಿವೆ. ಹಿಜಾಬ್‌ ಧರಿಸಿದ ಕಾರಣಕ್ಕೆ ವಿದ್ಯಾರ್ಥಿನಿಯನ್ನು ತರಗತಿಯಿಂದ ತೆಗೆದುಹಾಕುವುದು ಕರ್ತವ್ಯದ ಗಂಭೀರ ಉಲ್ಲಂಘನೆ ಮತ್ತು ಶಿಕ್ಷಣ ಹಕ್ಕು ಕಾಯ್ದೆಯ ಉಲ್ಲಂಘನೆಯಾಗಿದೆ ಎಂದು ಹೇಳಿದರು.

ಶಾಲೆಯ ಆಡಳಿತ ಮಂಡಳಿಯ ಈ ಕ್ರಮವು ಭಾರತೀಯ ಸಂವಿಧಾನದ ಅಡಿಯಲ್ಲಿ ನಾಗರಿಕರಿಗೆ ಖಾತರಿಪಡಿಸಿದ ಮೂಲಭೂತ ಧಾರ್ಮಿಕ ಸ್ವಾತಂತ್ರ್ಯಗಳಿಗೆ ವಿರುದ್ಧವಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ. ಜಾತ್ಯತೀತ ಮೌಲ್ಯಗಳನ್ನು ಎತ್ತಿಹಿಡಿಯುವ ಕೇರಳದಲ್ಲಿ ಯಾವುದೇ ವಿದ್ಯಾರ್ಥಿಯು ಅಂತಹ ಕಷ್ಟವನ್ನು ಎದುರಿಸಬಾರದು ಎಂದು ಸಚಿವರು ಸ್ಪಷ್ಟಪಡಿಸಿದರು.

ಇದಕ್ಕೂ ಮೊದಲು, ಎರ್ನಾಕುಲಂನ ಕಾಂಗ್ರೆಸ್ ಸಂಸದ ಹೈಬಿ ಈಡನ್ ಕೂಡ ಈ ಬಗ್ಗೆ ಪ್ರತಿಕ್ರಿಯಿಸಿದ್ದು,"ಈ ವಿಷಯದ ಬಗ್ಗೆ ಸಮಾಜದಲ್ಲಿ ಕೋಮು ವಿಭಜನೆಯನ್ನು ಸೃಷ್ಟಿಸಲು ಪ್ರಯತ್ನಗಳು ನಡೆಯುತ್ತಿವೆ. ಹೊರಗಿನ ಜನರು ಮಧ್ಯಪ್ರವೇಶಿಸುತ್ತಿದ್ದಾರೆ ಮತ್ತು ಬಿಜೆಪಿ ಪರಿಸ್ಥಿತಿಯನ್ನು ದುರ್ಬಳಕೆ ಮಾಡಿಕೊಳ್ಳಲು ನಾವು ಬಿಡುವುದಿಲ್ಲ. ಸಾಮಾಜಿಕ ಮಾಧ್ಯಮದಲ್ಲಿನ ಕೆಲವು ಸಂಘಟನೆಗಳು ಈ ವಿಷಯವನ್ನು ಕ್ರಿಶ್ಚಿಯನ್-ಮುಸ್ಲಿಂ ಸಮಸ್ಯೆಯಾಗಿ ಬಿಂಬಿಸುತ್ತಿವೆ ಎಂದು ಹೇಳಿದರು.

ಈ ಸುದ್ದಿಯನ್ನೂ ಓದಿ: Deepika Padukone: ಜಾಹೀರಾತಿಗಾಗಿ ಹಿಜಾಬ್‌ ಧರಿಸಿದ ದೀಪಿಕಾ ಪಡುಕೋಣೆ; ನೆಟ್ಟಿಗರಿಂದ ಭಾರಿ ವಿರೋಧ

ಏನಿದು ವಿವಾದ?

ಕೊಚ್ಚಿಯ ಪಲ್ಲೂರುತಿಯಲ್ಲಿರುವ ಕ್ರಿಶ್ಚಿಯನ್ ಆಡಳಿತ ಮಂಡಳಿ ನಡೆಸುತ್ತಿರುವ ಖಾಸಗಿ ಶಾಲೆಯಲ್ಲಿ ಎಂಟನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹಿಜಾಬ್ ಧರಿಸಿ ತರಗತಿಗೆ ಪ್ರವೇಶಿಸಿದ್ದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ನಂತರ ವಿವಾದ ಭುಗಿಲೆದ್ದಿತ್ತು. ಇದು ಶಾಲಾ ಆಡಳಿತ ಮಂಡಳಿ ಮತ್ತು ಪೋಷಕರ ನಡುವೆ ಜಗಳಕ್ಕೆ ಕಾರಣವಾಗಿತ್ತು. ಪೋಷಕರ ಬೆಂಬಲಕ್ಕೆ ಬಂದ ಇಸ್ಲಾಮಿಸ್ಟ್ ಪರ ರಾಜಕೀಯ ಸಂಘಟನೆಯಾದ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್ ಇಂಡಿಯಾ (SDPI), ಸದಸ್ಯರು ಶಾಲಾ ಅಧಿಕಾರಿಗಳೊಂದಿಗೆ ಅನುಚಿತವಾಗಿ ವರ್ತಿಸಿದ್ದಾರೆ ಎಂದು ಅಧಿಕಾರಿಯೊಬ್ಬರು ಆರೋಪಿಸಿದ್ದಾರೆ. ಸೇಂಟ್ ರೀಟಾ ಪಬ್ಲಿಕ್ ಶಾಲೆಯ ಪ್ರಾಂಶುಪಾಲರಾದ ಸಿಸ್ಟರ್ ಹೆಲೀನಾ ಆರ್‌ಸಿ ಅವರು ಸೋಮವಾರ ಮತ್ತು ಮಂಗಳವಾರ ರಜೆ ಘೋಷಿಸಿ ಸಾಮಾಜಿಕ ಮಾಧ್ಯಮದಲ್ಲಿ ಪತ್ರ ಪ್ರಕಟಿಸಿದ ನಂತರ ಈ ವಿಷಯ ಕೇರಳ ರಾಜ್ಯದ್ಯಂತ ಬೆಳಕಿಗೆ ಬಂದಿದೆ.