ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಕೇರಳ ವಿಧಾನಸಭಾ ಚುನಾವಣೆ; ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ನೆಮೊಮ್‌ನಿಂದ ರಾಜೀವ್ ಚಂದ್ರಶೇಖರ್ ಕಣಕ್ಕೆ

Kerala polls: ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿ ವಿಧಾನಸಭೆಗಳಿಗೆ ಏಪ್ರಿಲ್ 9ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ ಎಂದು ಚುನಾವಣಾ ಆಯೋಗ ತಿಲಿಸಿದೆ. ಇದೀಗ ಬಿಜೆಪಿ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರಿದ್ದಾರೆ.

ರಾಜೀವ್‌ ಚಂದ್ರಶೇಖರ್‌ (ಸಂಗ್ರಹ ಚಿತ್ರ)

ತಿರುವನಂತಪುರಂ, ಮಾ.16: ಕೇಂದ್ರ ಚುನಾವಣಾ ಆಯೋಗವು ಬಹುನಿರೀಕ್ಷಿತ ಪಂಚ ರಾಜ್ಯಗಳ ಚುನಾವಣಾ ದಿನಾಂಕವನ್ನು ಈಗಾಗಲೇ ಘೋಷಿಸಿದೆ. ಅಸ್ಸಾಂ, ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಹಾಗೂ ಕೇಂದ್ರಾಡಳಿತ ಪ್ರದೇಶ ಪುದುಚೇರಿ ವಿಧಾನಸಭೆಗಳಿಗೆ ಏಪ್ರಿಲ್ 9ರಿಂದ ಮತದಾನ ಪ್ರಕ್ರಿಯೆ ಆರಂಭವಾಗಲಿದ್ದು, ಮೇ 4ರಂದು ಮತ ಎಣಿಕೆ ನಡೆಯಲಿದೆ ಎಂದು ತಿಳಿಸಿದೆ. ಇದೀಗ ಬಿಜೆಪಿ 47 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಹಲವು ಪ್ರಭಾವಿ ನಾಯಕರಿದ್ದಾರೆ.

ರಾಜ್ಯ ಬಿಜೆಪಿ ಮುಖ್ಯಸ್ಥ ಮತ್ತು ಮಾಜಿ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರ ಹೆಸರು ಈ ಪಟ್ಟಿಯಲ್ಲಿ ಕಂಡು ಬಂದಿದೆ. ಅವರು ತಿರುವನಂತಪುರಂನ ನೆಮೊಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ.

ಮಾಜಿ ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ಅವರನ್ನು ಮಂಜೇಶ್ವರದಿಂದ, ಮಾಜಿ ಕೇಂದ್ರ ಸಚಿವ (ವಿದೇಶಾಂಗ ವ್ಯವಹಾರ) ವಿ. ಮುರಳೀಧರನ್ ಅವರನ್ನು ಕಜಕೂಟಂನಿಂದ, ಪ್ರಸ್ತುತ ರಾಜ್ಯ ಸಚಿವ (ಮೀನುಗಾರಿಕೆ ಮತ್ತು ಅಲ್ಪಸಂಖ್ಯಾತ ವ್ಯವಹಾರ) ಜಾರ್ಜ್ ಕುರಿಯನ್ ಅವರನ್ನು ಕಾಂಜಿರ ಪಳ್ಳಿಯಿಂದ ಮತ್ತು ರಾಜ್ಯ ಪ್ರಧಾನ ಕಾರ್ಯದರ್ಶಿ ಶೋಭಾ ಸುರೇಂದ್ರನ್ ಅವರನ್ನು ಪಾಲಕ್ಕಾಡ್‌ನಿಂದ ಕಣಕ್ಕಿಳಿಸಲಾಗಿದೆ.

ನೆಮೊಮ್ ವಿಧಾನಸಭಾ ಕ್ಷೇತ್ರದಿಂದ ಸ್ಪರ್ಧಿಸಲಿರುವ ರಾಜೀವ್ ಚಂದ್ರಶೇಖರ್:



ಚಂದ್ರಶೇಖರ್ ಅವರ ಆಪ್ತ ರಾಜ್ಯ ಪ್ರಧಾನ ಕಾರ್ಯದರ್ಶಿ ಅನೂಪ್ ಆ್ಯಂಟನಿ ಅವರನ್ನು ತಿರುವಲ್ಲಾದಿಂದ ಕಣಕ್ಕಿಳಿಸಲಾಗಿದೆ. ಮಹಿಳಾ ಅಭ್ಯರ್ಥಿಗಳಲ್ಲಿ ವಟ್ಟಿಯೂರ್ಕಾವುನಲ್ಲಿ ಮಾಜಿ ಡಿಜಿಪಿ ಮತ್ತು ಪ್ರಸ್ತುತ ತಿರುವನಂತಪುರಂ ಪುರಸಭೆ ಸದಸ್ಯೆ ಆರ್. ಶ್ರೀಲೇಖಾ, ತ್ರಿಶೂರ್ ಕ್ಷೇತ್ರದಲ್ಲಿ ದಿವಂಗತ ಕಾಂಗ್ರೆಸ್ ಸಿಎಂ ಕೆ. ಕರುಣಾಕರನ್ ಅವರ ಪುತ್ರಿ ಪದ್ಮಜಾ ವೇಣುಗೋಪಾಲ್ ಮತ್ತು ಕೋಝಿಕ್ಕೋಡ್ ಉತ್ತರದಲ್ಲಿ ಮಹಿಳಾ ಮೋರ್ಚಾ ರಾಜ್ಯ ಅಧ್ಯಕ್ಷೆ ನವ್ಯ ಹರಿದಾಸ್ ಅದೃಷ್ಟ ಪರೀಕ್ಷೆಗೆ ಇಳಿಯಲಿದ್ದಾರೆ.

5 ರಾಜ್ಯಗಳ ಚುನಾವಣಾ ವೇಳಾಪಟ್ಟಿ ಅಂತಿಮಗೊಳಿಸಲು ಕೇಂದ್ರ ಚುನಾವಣಾ ಆಯೋಗದ ಮಹತ್ವದ ಸಭೆ

ಕೇರಳದಲ್ಲಿ ವಿಧಾನಸಭಾ ಚುನಾವಣೆಗೆ ರಾಜಕೀಯ ಪಕ್ಷಗಳು ಸಜ್ಜಾಗುತ್ತಿದ್ದಂತೆ ಈ ಲಿಸ್ಟ್ ಬಿಡುಗಡೆಯಾಗಿದೆ.‌ ಕೇರಳದ ಒಟ್ಟು 140 ಸ್ಥಾನಗಳಿಗೆ ಏಪ್ರಿಲ್ 9ರಂದು ಒಂದೇ ಹಂತದ ಮೂಲಕ ಚುನಾವಣೆ ನಡೆಯಲಿದೆ.