ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ನಿಂತಿದ್ದ ಲಾರಿಗೆ ಕಾರು ಡಿಕ್ಕಿ: 8 ಮಂದಿ ಎಂಜಿನಿಯರಿಂಗ್ ವಿದ್ಯಾರ್ಥಿಗಳ ದುರ್ಮರಣ

Kerala road accident: ಶುಕ್ರವಾರ ರಾತ್ರಿ 11.40 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಗೆ ಸಮೀಪದ ಕೈಪಮಂಗಲಂನ ಪಣಂಬಿಕ್ಕುನ್ನು ಎಂಬಲ್ಲಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಯುವಕರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಎಂಟು ಮಂದಿಯೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

Kerala road accident

ತ್ರಿಶೂರ್, ಸೆ.5: ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನೆರೆಯ ತಮಿಳುನಾಡಿನ ಎಂಟು ಎಂಜಿನಿಯರಿಂಗ್ ವಿದ್ಯಾರ್ಥಿಗಳು ಮೃತಪಟ್ಟಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಶುಕ್ರವಾರ ರಾತ್ರಿ 11.40 ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇಲ್ಲಿಗೆ ಸಮೀಪದ ಕೈಪಮಂಗಲಂನ ಪಣಂಬಿಕ್ಕುನ್ನು ಎಂಬಲ್ಲಿ ಹೆದ್ದಾರಿಯಲ್ಲಿ ನಿಲ್ಲಿಸಿದ್ದ ಲಾರಿಗೆ ಯುವಕರು ಪ್ರಯಾಣಿಸುತ್ತಿದ್ದ ಕಾರು ಡಿಕ್ಕಿ ಹೊಡೆದಿದೆ. ಕಾರಿನಲ್ಲಿದ್ದ ಎಂಟು ಮಂದಿಯೂ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.



ಸ್ಥಳೀಯರು, ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ ಮತ್ತು ಪೊಲೀಸರು ನಡೆಸಿದ ರಕ್ಷಣಾ ಕಾರ್ಯಾಚರಣೆಯಲ್ಲಿ ಯುವಕರನ್ನು ಕಾರಿನಿಂದ ಹೊರತೆಗೆಯಲಾಯಿತು. ಶವಗಳನ್ನು ಇಲ್ಲಿನ ತ್ರಿಶೂರ್ ವೈದ್ಯಕೀಯ ಕಾಲೇಜಿನ ಶವಾಗಾರಕ್ಕೆ ಕೊಂಡೊಯ್ಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಪಘಾತಕ್ಕೀಡಾದ ವಾಹನವು ತಮಿಳುನಾಡು ನೋಂದಣಿಯನ್ನು ಹೊಂದಿತ್ತು.

ಕಾರು ಗುರುವಾಯೂರು ಕಡೆಯಿಂದ ಕೊಡುಂಗಲ್ಲೂರು ಕಡೆಗೆ ಪ್ರಯಾಣಿಸುತ್ತಿತ್ತು ಎಂದು ವರದಿಯಾಗಿದೆ.