ಕೇತನ್ ಅಗರ್ವಾಲ್ ಹತ್ಯೆ ಪ್ರಕರಣ: ವಕೀಲರಾಗಲು ಉಜ್ವಲ್ ನಿಕಂಗೆ ಸಿಎಂ ದೇವೇಂದ್ರ ಫಡ್ನವೀಸ್ ಕರೆ
ಹಿರಿಯ ವಕೀಲ, 26/11 ಮುಂಬೈ ಭಯೋತ್ಪಾದಕ ದಾಳಿ ವಿಚಾರಣೆಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಉಜ್ವಲ್ ನಿಕಂ ಅವರಿಗೆ ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ವಕೀಲರಾಗಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಕರೆ ಮಾಡಿದ್ದಾರೆ. ಕೇತನ್ ಅಗರ್ವಾಲ್ ಅವರ ಕುಟುಂಬವು ಫಡ್ನವೀಸ್ ಅವರನ್ನು ಭೇಟಿ ಮಾಡಿ ಪ್ರಾಸಿಕ್ಯೂಷನ್ ನಿರ್ವಹಿಸಲು ನಿಕಂ ಅವರನ್ನು ನೇಮಿಸುವಂತೆ ವಿನಂತಿ ಮಾಡಿತ್ತು ಎನ್ನಲಾಗಿದೆ.
ಸಂಗ್ರಹ ಚಿತ್ರ -
ಮಹಾರಾಷ್ಟ್ರ: ರಿಯಾಲ್ಟರ್ ಕೇತನ್ ಅಗರ್ವಾಲ್ (Ketan Agarwal) ಹತ್ಯೆ (Murder case) ಪ್ರಕರಣಕ್ಕೆ ವಕೀಲರಾಗಿ ಕಾರ್ಯನಿರ್ವಹಿಸಲು ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ( CM Devendra Fadnavis) ಅವರು ಹಿರಿಯ ವಕೀಲ, 26/11 ಮುಂಬೈ ಭಯೋತ್ಪಾದಕ ದಾಳಿ ವಿಚಾರಣೆಯಲ್ಲಿ ವಿಶೇಷ ಸಾರ್ವಜನಿಕ ಅಭಿಯೋಜಕರಾಗಿದ್ದ ಉಜ್ವಲ್ ನಿಕಂ (lawyer ujjwal nikam) ಅವರಿಗೆ ಅಹ್ವಾನ ನೀಡಿದ್ದಾರೆ. ಕೇತನ್ ಅಗರ್ವಾಲ್ ಅವರ ಕುಟುಂಬವು ಮುಖ್ಯಮಂತ್ರಿ ಫಡ್ನವೀಸ್ ಅವರನ್ನು ಭೇಟಿ ಮಾಡಿ ವಕೀಲರಾಗಿ ಕಾರ್ಯನಿರ್ವಹಿಸಲು ನಿಕಂ ಅವರನ್ನು ನೇಮಿಸುವಂತೆ ವಿನಂತಿ ಮಾಡಿದ ಹಿನ್ನೆಲೆಯಲ್ಲಿ ಫಡ್ನವೀಸ್ ಅವರಿಗೆ ಕರೆ ಮಾಡಿದ್ದಾರೆ ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿದ ಉಜ್ವಲ್ ನಿಕಂ, ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರು ಶುಕ್ರವಾರ ಮಧ್ಯಾಹ್ನ ತಮ್ಮನ್ನು ವೈಯಕ್ತಿಕವಾಗಿ ಕರೆದು ಕೇತನ್ ಅಗರ್ವಾಲ್ ಹತ್ಯೆ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ ವಹಿಸಿಕೊಳ್ಳುವಂತೆ ತಿಳಿಸಿದ್ದಾರೆ ಎಂದು ಹೇಳಿದರು.
ಪುಣೆ ಉದ್ಯಮಿ ಕೊಲೆ ಕೇಸ್; ಸಿಕ್ಕಿಬಿದ್ದ ಬಳಿಕ ಮೂಡಿತಾ ಬಿರುಕು? ಸಿಯಾ - ಚೇತನ್ ಪರಸ್ಪರ ಆರೋಪ
ಮುಖ್ಯಮಂತ್ರಿಗಳು ಪ್ರಕರಣದ ಕುರಿತು ಸ್ವಲ್ಪ ವಿವರಣೆಯನ್ನು ನೀಡಿದ್ದಾರೆ. ಕೇತನ್ ಅಗರ್ವಾಲ್ ಅವರ ಕುಟುಂಬವು ಫಡ್ನವೀಸ್ ಅವರನ್ನು ಭೇಟಿ ಮಾಡಿ ಪ್ರಾಸಿಕ್ಯೂಷನ್ ನಿರ್ವಹಿಸಲು ನನ್ನನ್ನೇ ನೇಮಕ ಮಾಡುವಂತೆ ವಿನಂತಿಸಿತ್ತು. ಹೀಗಾಗಿ ಸಿಎಂ ಫಡ್ನವೀಸ್ ನನಗೆ ಕರೆ ಮಾಡಿದ್ದರು ಎಂದು ತಿಳಿಸಿದರು.
ಕೇತನ್ ಅಗರ್ವಾಲ್ ಹತ್ಯೆಯು ರಾಜ್ಯಕ್ಕೆ ಒಂದು ಸವಾಲು ಮತ್ತು ಇದೊಂದು ಪೂರ್ವ ಯೋಜಿತ ಕೊಲೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ. ಅವರು ನನ್ನ ಮೇಲೆ ವಿಶ್ವಾಸ ವ್ಯಕ್ತಪಡಿಸಿದ ಅನಂತರ ಮೌಖಿಕ ಒಪ್ಪಿಗೆ ನೀಡಿರುವುದಾಗಿ ತಿಳಿಸಿದರು.
ಪ್ರಕರಣದ ಕುರಿತು ಸಂಪೂರ್ಣ ಮಾಹಿತಿ ನನಗೆ ಗೊತ್ತಿಲ್ಲ. ಪೊಲೀಸರು ಇನ್ನೂ ಈ ಕುರಿತು ತನಿಖೆ ನಡೆಸುತ್ತಿದ್ದಾರೆ. ಅವರು ಆರೋಪ ಪಟ್ಟಿಯನ್ನು ಸಲ್ಲಿಸಿಯಾದ ಬಳಿಕವೇ ವಕೀಲರ ಪಾತ್ರ ಆರಂಭವಾಗುತ್ತದೆ. ಹೀಗಾಗಿ ಈ ಬಗ್ಗೆ ಈಗ ಯಾವುದೇ ಪ್ರತಿಕ್ರಿಯೆ ನೀಡುವುದು ಸರಿಯಲ್ಲ. ಆರೋಪ ಪಟ್ಟಿ ಸಲ್ಲಿಸಿದ ಮೇಲೆಯೇ ಈ ಬಗ್ಗೆ ನಾನು ಬಹಿರಂಗವಾಗಿ ಹೇಳಿಕೆ ನೀಡಲು ಸಾಧ್ಯವಾಗುತ್ತದೆ ಎಂದು ನಿಕಮ್ ತಿಳಿಸಿದರು.
ಕೇತನ್ ಅಗರ್ವಾಲ್ ಅವರ ತಂದೆ ವಿಶಾಲ್ ಅಗರ್ವಾಲ್ ಅವರನ್ನು ಪುಣೆಯಲ್ಲಿ ಭೇಟಿಯಾದ ಫಡ್ನವೀಸ್ ಅವರು ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ವಿಧಿಸಲಾಗುವುದು. ಕುಟುಂಬಕ್ಕೆ ನ್ಯಾಯ ಒದಗಿಸಲಾಗುವುದು ಎಂದು ಭರವಸೆ ನೀಡಿದರು.
ಈ ಕುರಿತು ಮುಖ್ಯಮಂತ್ರಿ ಕಚೇರಿಯು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, ಕೇತನ್ ಕುಟುಂಬವು ತ್ವರಿತ ನ್ಯಾಯಕ್ಕಾಗಿ ನಿಕಮ್ ಅವರನ್ನು ವಿಶೇಷ ಸಾರ್ವಜನಿಕ ಅಭಿಯೋಜಕರನ್ನಾಗಿ ನೇಮಿಸಬೇಕೆಂದು ಒತ್ತಾಯಿಸಿದೆ. ಅವರ ಬೇಡಿಕೆಗಳನ್ನು ಅಂಗೀಕರಿಸಲಾಗಿದೆ ಎಂದು ಹೇಳಿದೆ.
"ನನ್ನ ಮಗಳು ತಪ್ಪು ಮಾಡಿದ್ದರೆ ಅದೇ ಕೋಟೆಯಿಂದ ಆಕೆಯನ್ನು ತಳ್ಳಿ ಬಿಡಿ"; ಕಣ್ಣೀರು ಹಾಕಿದ ಆರೋಪಿ ಸಿಯಾ ತಂದೆ
ಜೂನ್ 18ರಂದು ಕೇತನ್ ಅಗರ್ವಾಲ್ ಅವರನ್ನು ಅವರ ಭಾವಿ ಪತ್ನಿ ಸಿಯಾ ಗೋಯಲ್ ಮತ್ತು ಆಕೆಯ ಪ್ರೇಮಿ ಚೇತನ್ ಬಾಬುಲಾಲ್ ಚೌಧರಿ ಹತ್ಯೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.