#ದೆಹಲಿರಿಸಲ್ಟ್​ ಧಾರ್ಮಿಕ ವಿಶ್ವವಾಣಿ ಕ್ಲಬ್‌ ಹೌಸ್‌ ರಾಜಕೀಯ ಸಂಪಾದಕೀಯ ಫ್ಯಾಷನ್‌ ಲೋಕ ಉದ್ಯೋಗ

Mallikarjun Kharge: ಸೋನಿಯಾ ಗಾಂಧಿ ಹೇಳಿಕೆಯನ್ನು ತಿರುಚಲಾಗಿದೆ; ಇದು ಬಿಜೆಪಿ ಕುತಂತ್ರ-ಖರ್ಗೆ ವಾಗ್ದಾಳಿ!

ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ಸಂಸತ್​ನಲ್ಲಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ ನೀಡಿದ ಪ್ರತಿಕ್ರಿಯೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಈ ಬಗ್ಗೆ ಕಾಂಗ್ರೆಸ್ ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಈ ಹಿನ್ನೆಲೆಯಲ್ಲಿ ಕಾಂಗ್ರೆಸ್‌ನ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರು ಸೋನಿಯಾ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಕಿಡಿಕಾರಿದ್ದಾರೆ.

ಸೋನಿಯಾ ಗಾಂಧಿ ಹೇಳಿಕೆಯನ್ನು ಬಿಜೆಪಿ ತಿರುಚಿದೆ; ಖರ್ಗೆ ಕಿಡಿ!

Mallikarjun Kharge

Profile Deekshith Nair Jan 31, 2025 9:45 PM

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು(Droupadi Murmu) ಇಂದು(ಜ.31) ಸಂಸತ್​ನಲ್ಲಿ ಮಾಡಿದ ಭಾಷಣದ ಬಗ್ಗೆ ಕಾಂಗ್ರೆಸ್‌ ನಾಯಕಿ ಸೋನಿಯಾ ಗಾಂಧಿ(Sonia Gandhi) ನೀಡಿದ ಪ್ರತಿಕ್ರಿಯೆಗೆ ವ್ಯಾಪಕ ವಿರೋಧ ವ್ಯಕ್ತವಾಗಿದೆ. ಬಿಜೆಪಿ ಈ ಬಗ್ಗೆ ಕಾಂಗ್ರೆಸ್ ಪಕ್ಷವು ಕ್ಷಮೆ ಯಾಚಿಸಬೇಕೆಂದು ಒತ್ತಾಯಿಸಿದೆ. ಈ ಮಧ್ಯೆ ಕಾಂಗ್ರೆಸ್‌ನ ರಾಷ್ಟ್ರೀಯ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ(Mallikarjun Kharge) ವಿವಾದದ ಕುರಿತು ಸ್ಪಷ್ಟನೆ ನೀಡಿದ್ದು, ಸೋನಿಯಾ ಗಾಂಧಿ ಅವರ ಹೇಳಿಕೆಯನ್ನು ಬಿಜೆಪಿ ತಿರುಚಿದೆ ಎಂದು ಕಿಡಿಕಾರಿದ್ದಾರೆ.

ರಾಷ್ಟ್ರಪತಿ ದ್ರೌಪದಿ ಮುರ್ಮು ಸಂಸತ್​ನಲ್ಲಿ ಮಾಡಿದ ಭಾಷಣದ ಬಗ್ಗೆ ಪ್ರತಿಕ್ರಿಯಿಸುವಾಗ ಸೋನಿಯಾ ಗಾಂಧಿ ರಾಷ್ಟ್ರಪತಿಯನ್ನು 'ಪೂರ್ ಲೇಡಿ' ಅವರಿಗೆ ಮಾತನಾಡಲೂ ಕಷ್ಟವಾಗುತ್ತಿತ್ತು, ಬಹಳ ಸುಸ್ತಾಗಿದ್ದರು ಎಂದು ಹೇಳಿದ್ದರು. ಸೋನಿಯಾ ಹೇಳಿಕೆಯಿಂದಾಗಿ ವಿವಾದ ಭುಗಿಲೆದ್ದಿತು. ಬಿಜೆಪಿ ನಾಯಕರು ತೀವ್ರ ತರಾಟೆಗೆ ತೆಗೆದುಕೊಂಡಿದ್ದು, ಸೋನಿಯಾ ಗಾಂಧಿ ಮತ್ತು ಕಾಂಗ್ರೆಸ್‌ ಪಕ್ಷವನ್ನು ಟೀಕಿಸಿದ್ದಾರೆ. ಈ ಕೂಡಲೇ ರಾಷ್ಟ್ರಪತಿ ಅವರಲ್ಲಿ ಕ್ಷಮೆ ಕೇಳಬೇಕೆಂದು ಆಗ್ರಹಿಸಿದ್ದಾರೆ.



ಸೋನಿಯಾ ಗಾಂಧಿ ರಾಷ್ಟ್ರಪತಿಗಳ ಬಗ್ಗೆ ನೀಡಿದ ಹೇಳಿಕೆಗೆ ವ್ಯಕ್ತವಾದ ವಿರೋಧದ ನಡುವೆಯೇ ಮಲ್ಲಿಕಾರ್ಜುನ ಖರ್ಗೆ ಪ್ರತಿಕ್ರಿಯಿಸಿದ್ದಾರೆ. ಕಾಂಗ್ರೆಸ್ ಪಕ್ಷವು ರಾಷ್ಟ್ರಪತಿ ಅಥವಾ ಯಾವುದೇ ನಾಗರಿಕರನ್ನು ಎಂದಿಗೂ ಅವಮಾನಿಸಲು ಸಾಧ್ಯವಿಲ್ಲ. ಬಿಜೆಪಿ ಪಕ್ಷವು ಸೋನಿಯಾ ಗಾಂಧಿಯ ಹೇಳಿಕೆಯನ್ನು ತಿರುಚಿದೆ ಎಂದು ಹೇಳಿದ್ದಾರೆ. ಇದು ಅವರ ಕುತಂತ್ರ ಎಂದು ವಾಗ್ದಾಳಿ ನಡೆಸಿದ್ದಾರೆ. ಭಾರತೀಯ ರಾಷ್ಟ್ರೀಯ ಕಾಂಗ್ರೆಸ್ ಮತ್ತು ನಮ್ಮ ನಾಯಕರು ಎಂದಿಗೂ ರಾಷ್ಟ್ರಪತಿ ಅವರನ್ನು ಅವಮಾನಿಸಿಲ್ಲ. ಇದು ನಮ್ಮ ಸಂಸ್ಕೃತಿಯಲ್ಲ ಎಂದು ಖರ್ಗೆ ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ:Sonia Gandhi: ರಾಷ್ಟ್ರಪತಿಗಳನ್ನು ಟೀಕಿಸುವ ಭರದಲ್ಲಿ ಸೋನಿಯಾ ಗಾಂಧಿ ಎಡವಟ್ಟು

ಹೊಸ ಸಂಸತ್ತಿನ ಉದ್ಘಾಟನಾ ಸಮಾರಂಭಕ್ಕೆ ರಾಷ್ಟ್ರಪತಿಯನ್ನು ಆಹ್ವಾನಿಸದ ದಿನವೇ ಮೋದಿ ಸರ್ಕಾರವು ರಾಷ್ಟ್ರಪತಿ ಅವರನ್ನು ಅವಮಾನಿಸಿತು. ಬಿಜೆಪಿ ಉದ್ದೇಶಪೂರ್ವಕವಾಗಿ ನಮ್ಮ ಈಗಿನ ರಾಷ್ಟ್ರಪತಿ ಮತ್ತು ಹಿಂದಿನ ರಾಷ್ಟ್ರಪತಿ ಅವರನ್ನು ಸಂಸತ್‌ ಭವನ ಮತ್ತು ರಾಮ ಮಂದಿರ ಎರಡರಿಂದಲೂ ದೂರವಿಟ್ಟಿತ್ತು ಎಂದು ಅವರು ಟೀಕಿಸಿದ್ದಾರೆ.

ತಾಯಿಯನ್ನು ಸಮರ್ಥಿಸಿಕೊಂಡ ಪ್ರಿಯಾಂಕಾ

ಕಾಂಗ್ರೆಸ್ ಸಂಸದೆ ಪ್ರಿಯಾಂಕಾ ಗಾಂಧಿ ವಾದ್ರಾ ತಮ್ಮ ತಾಯಿ ಸೋನಿಯಾ ಗಾಂಧಿ ಅವರನ್ನು ಸಮರ್ಥಿಸಿಕೊಂಡಿದ್ದಾರೆ. ನನ್ನ ತಾಯಿ 78 ವರ್ಷದ ಮಹಿಳೆ, ಅವರು ರಾಷ್ಟ್ರಪತಿ ಸುದೀರ್ಘ ಭಾಷಣವನ್ನು ಓದಿದರು ಅದರಿಂದಾಗಿ ಅವರಿಗೆ ಸುಸ್ತಾಗಿರಬೇಕು ಎಂದು ಹೇಳಿದ್ದಾರೆ ಅಷ್ಟೇ. ಅವರು ಭಾರತದ ರಾಷ್ಟ್ರಪತಿಯನ್ನು ಸಂಪೂರ್ಣವಾಗಿ ಗೌರವಿಸುತ್ತಾರೆ. ಈ ರೀತಿಯ ವಿಷಯವನ್ನು ಮಾಧ್ಯಮಗಳು ತಿರುಚುತ್ತಿರುವುದು ಅತ್ಯಂತ ದುರದೃಷ್ಟಕರ ಎಂದು ನಾನು ಭಾವಿಸುತ್ತೇನೆ. ಇಬ್ಬರೂ ಗೌರವಾನ್ವಿತ ವ್ಯಕ್ತಿಗಳು ಮತ್ತು ನಮಗಿಂತ ಹಿರಿಯರು. ಅವರಿಗೆ ಯಾವುದೇ ಅಗೌರವ ತೋರಿಲ್ಲ. ನಾವು ಕ್ಷಮೆ ಯಾಚಿಸುವುದಿಲ್ಲ. ನಮ್ಮದೇನೂ ತಪ್ಪಿಲ್ಲ ಅಪಪ್ರಚಾರಕ್ಕೆ ಬಿಜೆಪಿ ಕ್ಷಮೆಯಾಚಿಸಬೇಕು ಎಂದು ಪ್ರಿಯಾಂಕಾ ಹೇಳಿದರು.