Kodagu DCCB Recruitment: ಕೊಡಗು DCC ಬ್ಯಾಂಕ್‌ನಲ್ಲಿ ಜೂನಿಯರ್ ಅಸಿಸ್ಟೆಂಟ್ ಹುದ್ದೆ ಖಾಲಿ; ಅರ್ಜಿ ಸಲ್ಲಿಕೆಗೆ ಜ. 16 ಕೊನೆಯ ದಿನ
Kodagu DCCB Recruitment ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Kodagu DCCB Recruitment) ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿಯಿದ್ದು ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಹಾಕಬಹುದು.
Pushpa Kumari
Dec 24, 2024 9:54 PM
ಕೊಡಗು: ಕೊಡಗು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್ (Kodagu DCCB Recruitment) ನಲ್ಲಿ ಒಟ್ಟು 32 ಕಿರಿಯ ಸಹಾಯಕ ಹುದ್ದೆಗಳು ಖಾಲಿಯಿದ್ದು ಅರ್ಹ ಅಭ್ಯರ್ಥಿಗಳು ಅನ್ ಲೈನ್ ಮೂಲಕ ಅರ್ಜಿ ಹಾಕಬಹುದು. ಪದವಿ, ವಾಣಿಜ್ಯ ಪದವಿ ಪಾಸಾದವರು ಜನವರಿ 16 ರೊಳಗೆ ಅರ್ಜಿ ಸಲ್ಲಿಸಬಹುದು.
ಅರ್ಹತೆ ಏನು?:
*ಅರ್ಜಿ ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಶೇ 55% ಕನಿಷ್ಠ ಅಂಕ ಪಡೆದಿರಬೇಕು
*ವಾಣಿಜ್ಯ ಪದವಿ, ಡಿಪ್ಲೊಮೋ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಅಥವಾ ಸ್ನಾತಕೋತ್ತರ ಪದವಿಯನ್ನು ಪಡೆದಿರಬೇಕು.
*ಕನಿಷ್ಠ 6 ತಿಂಗಳ ಡಿಪ್ಲೊಮೋ ಇನ್ ಕಂಪ್ಯೂಟರ್ ಆಪರೇಷನ್ ಮತ್ತು ಅಪ್ಲಿಕೇಶನ್ಸ್ ಸರ್ಟಿಫಿಕೇಟ್ ಕೋರ್ಸ್ ಕಡ್ಡಾಯವಾಗಿ ಮಾಡಿರಬೇಕು.ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡ ಲಾಗುತ್ತದೆ.
ಈ ವಯೋಮಿತಿ ಅರ್ಹತೆ ಇರಲಿದೆ!
*ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಪೂರೈಸಿರಬೇಕು.
*ಸಾಮಾನ್ಯ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ನಿಗದಿಪಡಿಸಲಾಗಿದೆ.
*2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳ ಗರಿಷ್ಠ ವಯಸ್ಸು 38 ಆಗಿದೆ
*SC/ ST / ಪ್ರವರ್ಗ-1 ಅಭ್ಯರ್ಥಿಗಳಿಗೆ 40 ವರ್ಷ ಗರಿಷ್ಠ ವಯಸ್ಸು ನಿಗದಿಪಡಿಸಲಾಗಿದೆ.
ಹೀಗೆ ಅರ್ಜಿ ಸಲ್ಲಿಕೆ ಮಾಡಿ!
ಅರ್ಜಿ ಸಲ್ಲಿಕೆ ಮಾಡಲು ಅನ್ ಲೈನ್ ಲಿಂಕ್ https://www.kodagudccbank.com ಇಲ್ಲಿ Apply Here ಆಪ್ಚನ್ ಕ್ಲಿಕ್ ಮಾಡಿ. ಬಳಿಕ ಇಮೇಲ್ ಐಡಿ, ಪಾಸ್‌ವರ್ಡ್ ನೀಡಿ ಲಾಗಿನ್ ಆಗಿ.ನಂತರ ಅಗತ್ಯ ದಾಖಲೆಗಳನ್ನು ಸ್ಕ್ಯಾನ್ ಮಾಡಿ ಅಪ್‌ಲೋಡ್ ಮಾಡಿ. ಅರ್ಜಿ ಶುಲ್ಕ ಪಾವತಿಸಲು ಇದ್ದರೆ ಆನ್ಲೈನ್ ನಲ್ಲಿ ಶುಲ್ಕ ಪಾವತಿಸಿದರೆ ಅರ್ಜಿ ಸಲ್ಲಿಕೆ ಪೂರ್ಣಗೊಳ್ಳುತ್ತದೆ.
ಇದನ್ನು ಓದಿ:PM Internship Scheme: ಇಂಟರ್ನ್‌ಶಿಫ್ ಯೋಜನೆಗೆ ಒಂದೇ ದಿನದಲ್ಲಿ 1.5ಲಕ್ಷಕ್ಕೂ ಅಧಿಕ ಅರ್ಜಿ ಸಲ್ಲಿಕೆ