ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

New Delhi Stampede: ಅತಿ ಹೆಚ್ಚು ಟಿಕಟ್‌ ಮಾರಾಟವೇ ಕಾಲ್ತುಳಿತ ದುರಂತಕ್ಕೆ ಕಾರಣ-ತನಿಖಾ ವರದಿ ಹೇಳೋದೇನು?

ನಿನ್ನೆ(ಫೆ.15) ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತದಿಂದಾಗಿ 18 ಜನರು ದುರಂತವಾಗಿ ಸಾವನ್ನಪ್ಪಿದ್ದು,10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅತಿಹೆಚ್ಚು ಟಿಕಟ್‌ ಮಾರಾಟವೇ ಈ ದುರಂತ ಘಟನೆಗೆ ಕಾರಣವೆಂದು ಹೇಳಲಾಗಿದ್ದು,ರೈಲ್ವೆ ಅಧಿಕಾರಿಗಳು ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ವಿಫಲರಾಗಿದ್ದಾರೆ.

ಸಾವಿರಾರು ಪ್ರಯಾಣಿಕರು ರೈಲು ಹತ್ತುವ ವೇಳೆ ನೂಕು ನುಗ್ಗಲಾಗಿದ್ದು,ದುರಂತ ಸಂಭವಿಸಿದೆ

ನವದೆಹಲಿ: ನವದೆಹಲಿಯ ರೈಲ್ವೆ ನಿಲ್ದಾಣದಲ್ಲಿ ಶನಿವಾರ(ಫೆ.15) ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ(New Delhi Stampede) 18 ಪ್ರಯಾಣಿಕರು ದಾರುಣವಾಗಿ ಮೃತಪಟ್ಟಿದ್ದಾರೆ. 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಸಾವಿರಾರು ಜನರು ಮಹಾ ಕುಂಭಮೇಳಕ್ಕೆ(Mahakumbh) ಹೋಗುತ್ತಿದ್ದರು ಎಂದು ಹೇಳಲಾಗುತ್ತಿದೆ. ಹೆಚ್ಚಿನ ಜನಸಂದಣಿಯಿಂದಾಗಿ ಈ ದುರಂತ ಸಂಭವಿಸಿದ್ದು ನಂತರ ಗಲಾಟೆ ಗಲಭೆಗಳು ನಡೆದಿವೆ. ಈ ಮಧ್ಯೆ ತನಿಖಾ ವರದಿ ಹೊರಬಿದ್ದಿದ್ದು, ಅತಿ ಹೆಚ್ಚು ಟಿಕೆಟ್ ಮಾರಾಟವೇ ಈ ಕಾಲ್ತುಳಿತಕ್ಕೆ ಕಾರಣ ಎನ್ನಲಾಗಿದೆ. ಜನರನ್ನು ನಿಯಂತ್ರಿಸುವಲ್ಲಿ ರೈಲ್ವೆ ಇಲಾಖೆ ವಿಫಲವಾಗಿದೆ ಎಂದು ಪ್ರಯಾಣಿಕರು ದೂರಿದ್ದಾರೆ.

ನಿನ್ನೆ ರಾತ್ರಿ ನವದೆಹಲಿ ರೈಲ್ವೆ ನಿಲ್ದಾಣದಿಂದ ಪ್ರಯಾಗ್‌ರಾಜ್‌ನಲ್ಲಿ ನಡೆಯುತ್ತಿರುವ ಮಹಾ ಕುಂಭಮೇಳಕ್ಕೆ ಸಾವಿರಾರು ಭಕ್ತರು ಹೊರಟಿದ್ದಾರೆ. ಅತಿ ಹೆಚ್ಚಿನ ಜನ ಸಂದಣಿಯಿಂದಾಗಿ ನೂಕು ನುಗ್ಗಲಾಗಿ ಕಾಲ್ತುಳಿತ ಸಂಭವಿಸಿದೆ. ಇನ್ನು ಘಟನೆಯ ಬಗ್ಗೆ ತನಿಖೆಯಾಗಿದ್ದು, ರೈಲ್ವೆ ಪ್ರತಿ ಗಂಟೆಗೆ 1,500 ಸಾಮಾನ್ಯ ಟಿಕೆಟ್‌ಗಳನ್ನು ಮಾರಾಟ ಮಾಡುತ್ತಿದೆ, ಇದರಿಂದಾಗಿ ನಿಲ್ದಾಣದಲ್ಲಿ ಜನಸಂದಣಿ ಹೆಚ್ಚಾಗಿ ಪರಿಸ್ಥಿತಿ ನಿಯಂತ್ರಿಸಲು ಕಷ್ಟವಾಗಿದೆ ಎಂದು ಹೇಳಿದೆ. ಪ್ಲಾಟ್‌ಫಾರ್ಮ್ ಸಂಖ್ಯೆ 14 ಮತ್ತು ಪ್ಲಾಟ್‌ಫಾರ್ಮ್ ಸಂಖ್ಯೆ 16 ರ ಬಳಿಯ ಎಸ್ಕಲೇಟರ್ ಬಳಿ ಕಾಲ್ತುಳಿತ ಸಂಭವಿಸಿದೆ.



ರೈಲ್ವೆ ಇಲಾಖೆಯಿಂದ 10 ಲಕ್ಷ ರೂ ಪರಿಹಾರ ಘೋಷಣೆ

ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತೀಯ ರೈಲ್ವೆ ಇಲಾಖೆಯು ಪರಿಹಾರ ಘೋಷಣೆ ಮಾಡಿದ್ದು, ತಲಾ 10 ಲಕ್ಷ ರೂ ನೀಡುವುದಾಗಿ ಘೋಷಣೆ ಮಾಡಿದ್ದಾರೆ. ದೆಹಲಿ ರೈಲು ನಿಲ್ದಾಣದಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತ ಪ್ರಕರಣದಲ್ಲಿ 18 ಮಂದಿ ಮೃತಪಟ್ಟಿದ್ದು, ಹಲವಾರು ಮಂದಿ ಗಾಯಗೊಂಡಿದ್ದಾರೆ. ಇನ್ನು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯೆ ನೀಡಿರುವ ರೈಲ್ವೆ ಇಲಾಖೆ ಸದ್ಯಕ್ಕೆ ಪರಿಸ್ಥಿತಿ ನಿಯಂತ್ರಣದಲ್ಲಿದ್ದು, ಪ್ರಯಾಣಿಕರ ರಕ್ಷಣೆಗೆ ಎಲ್ಲ ರೀತಿಯ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದೆ.

ಈ ಸುದ್ದಿಯನ್ನೂ ಓದಿ:Modi Trump Meeting: 'ನಾವು ನಿಮ್ಮನ್ನು ಮಿಸ್ ಮಾಡಿಕೊಂಡೆವು....ʼ ಮೋದಿಯನ್ನು ಕಂಡೊಡನೆ ಅಪ್ಪಿಕೊಂಡ ಟ್ರಂಪ್‌

ಭಾರತೀಯ ರೈಲ್ವೆ ಇಲಾಖೆ ಸಂತ್ರಸ್ತರಿಗೆ ಪರಿಹಾರ ನೀಡುವುದಾಗಿ ಭರವಸೆ ನೀಡಿದ್ದು, ಮೃತರ ಕುಟುಂಬಕ್ಕೆ 10 ಲಕ್ಷ ರೂ. ಗಂಭೀರವಾಗಿ ಗಾಯಗೊಂಡವರಿಗೆ 2.5 ಲಕ್ಷ ರೂ. ಮತ್ತು ಸಣ್ಣಪುಟ್ಟ ಗಾಯಗಳಾದವರಿಗೆ 1 ಲಕ್ಷ ರೂ. ಪರಿಹಾರ ನೀಡುವುದಾಗಿ ತಿಳಿಸಿದೆ.