Physical Abuse: ಶಿಕ್ಷಕನಿಂದಲೇ ವಿದ್ಯಾರ್ಥಿನಿಯ ಮೇಲೆ ಲೈಗಿಂಕ ದೌರ್ಜನ್ಯ ; ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ವೈರಲ್
ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಕಸಯಾ ಪ್ರದೇಶದ ಮಲ್ಲುಡೀ ಕೃಷಕ್ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.


ಲಖನೌ: ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಶಿಕ್ಷಕನೇ ವಿದ್ಯಾರ್ಥಿನಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾನೆ. ಉತ್ತರ ಪ್ರದೇಶದ ಕುಶಿನಗರ ಜಿಲ್ಲೆಯ ಕಸಯಾ ಪ್ರದೇಶದ ಮಲ್ಲುಡೀ ಕೃಷಕ್ ಇಂಟರ್ ಕಾಲೇಜಿನಲ್ಲಿ ಈ ಘಟನೆ ನಡೆದಿದೆ. ಶಿಕ್ಷಕ ವಿದ್ಯಾರ್ಥಿಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ (Physical Assault) ಆಗಿದೆ. ಶಿಕ್ಷಕನ ಈ ನಡೆಯನ್ನು ಜನರು ಖಂಡಿಸಿದ್ದಾರೆ. ಆರೋಪಿಯನ್ನು , ಮೈನುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಆತನ ವಿರುದ್ಧ ದೂರು ದಾಖಲಿಸಲಾಗಿದೆ. ಆತ ಹಿಂದೂ ಹುಡುಗಿಯರನ್ನು ತನ್ನ ಕಚೇರಿಗೆ ಕರೆಸಿ ಲೈಂಗಿಕ ದೌರ್ಜನ್ಯ ಎಸಗುತ್ತಿದ್ದ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.
ಸಾಮಾಜಿಕ ಮಾಧ್ಯಮಗಳಲ್ಲಿ ವಿಡಿಯೋ ವೈರಲ್ ಆದ ನಂತರ, ಕೋಪಗೊಂಡ ಸ್ಥಳೀಯರು ಕಾಲೇಜು ಆವರಣದಲ್ಲಿ ಜಮಾಯಿಸಿ ಶಿಕ್ಷಕನ ದುಷ್ಕೃತ್ಯವನ್ನು ಖಂಡಿಸಿ ಪ್ರತಿಭಟಿಸಿದರು. ಪೊಲೀಸರು ಈಗ ಈ ಪ್ರಕರಣದಲ್ಲಿ ಕ್ರಮ ಕೈಗೊಂಡು ಆರೋಪಿ ಶಿಕ್ಷಕನನ್ನು ಬಂಧಿಸಿದ್ದಾರೆ. ಸಾಮಾಜಿಕ ಮಾಧ್ಯಮದ ಮೂಲಕ ವ್ಯಕ್ತಿಯೊಬ್ಬ ಬಾಲಕಿಯೊಂದಿಗೆ ಅನುಚಿತವಾಗಿ ಮತ್ತು ಅಶ್ಲೀಲವಾಗಿ ವರ್ತಿಸುತ್ತಿರುವ ವೀಡಿಯೊ ನಮ್ಮ ಗಮನಕ್ಕೆ ಬಂದಿತು. ವೀಡಿಯೊದ ತನಿಖೆಯ ನಂತರ, ಅದು ಕುಶಿನಗರ ಜಿಲ್ಲೆಯ ಕಸ್ಯ ಪೊಲೀಸ್ ಠಾಣೆ ಪ್ರದೇಶದ ಮಲ್ಲುಡೀಹ್‌ನಲ್ಲಿರುವ ಕೃಷಕ್ ಇಂಟರ್ ಕಾಲೇಜಿನಿಂದ ಬಂದಿದೆ ಎಂದು ತಿಳಿದುಬಂದಿದೆ" ಎಂದು ಕಶ್ಯದ ಪೊಲೀಸ್ ವೃತ್ತ ಅಧಿಕಾರಿ ಕುಂದನ್ ಕುಮಾರ್ ಸಿಂಗ್ ಘಟನೆಯನ್ನು ದೃಢಪಡಿಸಿದರು.
थाना कसया क्षेत्रान्तर्गत स्थित एक इंटर कालेज में उसी कालेज के शिक्षक द्वारा एक लड़की के साथ गलत एवं अश्लील हरकत करने की घटना के संबंध में थाना कसया पर सुसंगत धाराओं में अभियोग पंजीकृत कर आरोपी को पुलिस हिरासत में ले गिया गया है।प्रकरण के संबंध में क्षेत्राधिकारी कसया की बाईट:- pic.twitter.com/JssvSEOP1a
— Kushinagar Police (@kushinagarpol) April 7, 2025
ವೀಡಿಯೊದಲ್ಲಿ ಕಾಣುವ ವ್ಯಕ್ತಿಯನ್ನು ಮೈನುದ್ದೀನ್ ಅನ್ಸಾರಿ ಎಂದು ಗುರುತಿಸಲಾಗಿದ್ದು, ಈತ ಕುಶಿನಗರ ಜಿಲ್ಲೆಯ ಕಸ್ಯ ಪೊಲೀಸ್ ಠಾಣೆ ಪ್ರದೇಶದ ಧನ್ಹಾ ಅಲಿಯಾಸ್ ಮಲ್ಲುಡೀಹ್ ನಿವಾಸಿ ಹದಿಶ್ ಅನ್ಸಾರಿ ಎಂಬವರ ಪುತ್ರನಾಗಿದ್ದು, ಅದೇ ಕಾಲೇಜಿನಲ್ಲಿ ಸಹಾಯಕ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದಾನೆ ಎಂದು ಅಧಿಕಾರಿ ತಿಳಿಸಿದ್ದಾರೆ. ಬಾಲಕಿಯ ಕುಟುಂಬ ಸದಸ್ಯರು ನೀಡಿದ ದೂರಿನ ಆಧಾರದ ಮೇಲೆ, ಆರೋಪಿ ಮೈನುದ್ದೀನ್ ಅನ್ಸಾರಿಯನ್ನು ಪೊಲೀಸ್ ವಶಕ್ಕೆ ತೆಗೆದುಕೊಳ್ಳಲಾಗಿದ್ದು, ಮುಂದಿನ ಕಾನೂನು ಕ್ರಮಗಳು ನಡೆಯುತ್ತಿವೆ. ಈ ಘಟನೆ ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶಕ್ಕೆ ಕಾರಣವಾಗಿದ್ದು, ಆರೋಪಿ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿದೆ.
ಈ ಸುದ್ದಿಯನ್ನೂ ಓದಿ: Physical abuse: ಬಾಲಕಿ ಮೇಲೆ ಬ್ಯಾಡ್ಮಿಂಟನ್ ಕೋಚ್ ಲೈಂಗಿಕ ದೌರ್ಜನ್ಯ; ಫೋನ್‌ನಲ್ಲಿ ಹಲವು ಹುಡುಗಿಯರ ವಿಡಿಯೊ!
ಕಳೆದ ತಿಂಗಳು ತಮಿಳುನಾಡಿನ ಕೃಷ್ಣಗಿರಿ ಜಿಲ್ಲೆಯಲ್ಲಿ ಪ್ರೌಢಶಾಲಾ ವಿದ್ಯಾರ್ಥಿನಿಯೊಬ್ಬಳ ಮೇಲೆ ಶಾಲೆಯ ಮೂವರು ಶಿಕ್ಷಕರು ಅತ್ಯಾಚಾರವೆಸಗಿರುವ ಘಟನೆ ನಡೆದಿದೆ. ಸಾರ್ವಜನಿಕರು ಖಂಡಿಸಿದ್ದು, ಕಠಿಣ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಸದ್ಯ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಲಾಗಿದ್ದು, ಬಾಲಕಿಯ ತಾಯಿಯ ದೂರಿನ ಆಧಾರದ ಮೇಲೆ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ. ದೂರು ದಾಖಲಾಗುತ್ತಿದ್ದಂತೆ ಮೂವರು ಆರೋಪಿಗಳನ್ನು ಅರೆಸ್ಟ್ ಮಾಡಲಾಗಿದೆ.