ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಭೂಕುಸಿತ: ಮುಂಬೈನ ಕುರ್ಲಾದಲ್ಲಿ ಇಬ್ಬರು ಸಾವು, ನಾಲ್ಕೈದು ಮಂದಿ ಅವಶೇಷಗಳಡಿ ಸಿಲುಕಿರುವ ಶಂಕೆ

ಮುಂಬೈನ ಕುರ್ಲದಲ್ಲಿ ಬುಧವಾರ ಬೆಳಗ್ಗೆ ಭೂಕುಸಿತ ಉಂಟಾಗಿ ಇಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಸುಮಾರು ನಾಲ್ಕೈದು ಮಂದಿ ಒಳಗೆ ಸಿಲುಕಿರುವ ಶಂಕೆ ಇದ್ದು ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಘಾಟ್ಕೋಪರ್‌ನ ಚಿರಾಗ್ ನಗರದ ಗೌಶಿಯಾ ಚಾಲ್‌ನಲ್ಲಿ ಭೂಕುಸಿತ ಸಂಭವಿಸಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಅಗ್ನಿಶಾಮಕ ದಳ ತಿಳಿಸಿದೆ.

ಭೂಕುಸಿತದಿಂದ ಮುಂಬೈನಲ್ಲಿ ಇಬ್ಬರು ಸಾವು

ಸಂಗ್ರಹ ಚಿತ್ರ -

ಮುಂಬೈ: ಬೆಳ್ಳಂಬೆಳಗ್ಗೆ ಸಂಭವಿಸಿದ ಭೂಕುಸಿತದಿಂದಾಗಿ (Landslide) ಇಬ್ಬರು ಸಾವನ್ನಪ್ಪಿರುವ ಘಟನೆ ಮುಂಬೈನ (Mumbai) ಕುರ್ಲಾದಲ್ಲಿ (kurla) ನಡೆದಿದೆ. ಹಲವಾರು ಮಂದಿ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇದೆ ಎನ್ನಲಾಗಿದೆ. ಬುಧವಾರ ಬೆಳಗ್ಗೆ ಸುಮಾರು 3:48ಕ್ಕೆ ಈ ಘಟನೆ ಘಾಟ್ಕೋಪರ್‌ನ ಚಿರಾಗ್ ನಗರದ ಗೌಶಿಯಾ ಚಾಲ್‌ನಲ್ಲಿ ಸಂಭವಿಸಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳನ್ನು ಆರಂಭಿಸಲಾಗಿದೆ. ಸುತ್ತಮುತ್ತಲಿನ ಜನರನ್ನು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲಾಗುತ್ತಿದೆ ಎಂದು ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಅಗ್ನಿಶಾಮಕ ದಳ ತಿಳಿಸಿದೆ.

ಕುರ್ಲಾದ ಘಾಟ್ಕೋಪರ್‌ನ ಚಿರಾಗ್ ನಗರದ ಗೌಶಿಯಾ ಚಾಲ್‌ನಲ್ಲಿ ಬುಧವಾರ ಬೆಳಗ್ಗೆ ಸಂಭವಿಸಿದ ಭೂಕುಸಿತದಲ್ಲಿ ಸುಮಾರು ನಾಲ್ಕರಿಂದ ಐದು ಮಂದಿ ಒಳಗೆ ಸಿಲುಕಿರುವ ಸಾಧ್ಯತೆ ಇದೆ. ಅವಶೇಷಗಳ ಅಡಿಯಲ್ಲಿ ಸಿಲುಕಿರುವವರನ್ನು ಪತ್ತೆಹಚ್ಚಲು ಮತ್ತು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಿಸಲು ಬಹು ಸಂಸ್ಥೆಗಳು ಕಾರ್ಯನಿರ್ವಹಿಸುತ್ತಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.



ಮ.ಪ್ರ.ದಲ್ಲಿ ವನ್ಯ ಸಂಘರ್ಷ, 8 ತಿಂಗಳಲ್ಲಿ 50 ಜನ, 45 ಹುಲಿಗಳ ಸಾವು

ಈ ಕುರಿತು ಸಾಮಾಜಿಕ ಮಾಧ್ಯಮದ ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಬೃಹನ್ಮುಂಬೈ ಮುನ್ಸಿಪಲ್ ಕಾರ್ಪೊರೇಷನ್ (ಬಿಎಂಸಿ) ಮುಂಬೈ ಅಗ್ನಿಶಾಮಕ ದಳ, ಬುಧವಾರ ಬೆಳಗಿನ ಜಾವ 3.48ರ ಸುಮಾರಿಗೆ ಈ ಘಟನೆ ನಡೆದಿದೆ. ಗೌಶಿಯಾ ಚಾಲ್‌ನ ಬೆಟ್ಟದ ಇಳಿಜಾರಿನ ಒಂದು ಭಾಗ ಕುಸಿದಿದ್ದು ಒಳಗೆ ಐದರಿಂದ ಆರು ಮಂದಿ ಸಿಲುಕಿದ್ದಾರೆ. ಸುಮಾರು ಎರಡರಿಂದ ಮೂರು ಮನೆಗಳ ಮೇಲೆ ಅವಶೇಷಗಳು ಬಿದ್ದಿದ್ದು, ಇದರ ತೆರವು ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ಹೇಳಿದೆ.

ಸ್ಥಳಕ್ಕೆ ಭೇಟಿ ನೀಡಿದ ಬಿಎಂಸಿ ಮೇಯರ್ ರಿತು ತಾವ್ಡೆ ಮತ್ತು ಹೆಚ್ಚುವರಿ ಪುರಸಭೆ ಆಯುಕ್ತ (ಪೂರ್ವ ಉಪನಗರ) ಅವಿನಾಶ್ ಧಕ್ನೆ ಅವರು ಪರಿಸ್ಥಿತಿಯನ್ನು ಪರಿಶೀಲನೆ ನಡೆಸಿ ತುರ್ತು ರಕ್ಷಣಾ ತಂಡಗಳೊಂದಿಗೆ ಮಾತುಕತೆ ನಡೆಸಿದರು. ಸ್ಥಳದಲ್ಲಿರುವವರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಿಕೊಡಲು ಸ್ಥಳೀಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.



ಈ ಕುರಿತು ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಡಿಸಿಪಿ ಗಣೇಶ್ ಶಿಂಧೆ, ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ತುರ್ತು ಪ್ರತಿಕ್ರಿಯೆ ತಂಡಗಳು ಮತ್ತು ಸ್ಥಳೀಯ ಅಧಿಕಾರಿಗಳು ಸ್ಥಳದಲ್ಲೇ ಇದ್ದು, ಪರಿಸ್ಥಿತಿಯ ಮೇಲ್ವಿಚಾರಣೆ ನಡೆಸುತ್ತಿದ್ದಾರೆ. ಸಾವಿನ ನಿಖರ ಸಂಖ್ಯೆಯನ್ನು ಈಗ ಖಚಿತಪಡಿಸಲು ಸಾಧ್ಯವಿಲ್ಲ. ಭೂಕುಸಿತದಲ್ಲಿ ಪ್ರಾಣ ಕಳೆದುಕೊಂಡವರ ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಕಳುಹಿಸಲಾಗಿದೆ. ಘಾಟ್ಕೋಪರ್ ಪೊಲೀಸರು ಅಗತ್ಯ ಕಾನೂನು ಕ್ರಮ ಕೈಗೊಳ್ಳುತ್ತಾರೆ ಎಂದು ಹೇಳಿದರು.

ಪಶ್ಚಿಮ ಬಂಗಾಳದಲ್ಲಿ ವಿಚಿತ್ರ ಸಮಸ್ಯೆಯಿಂದ ಬಾಲಕ ಕಂಗಾಲು; ನೀರಿನಿಂದ ಹೊರಬಂದರೆ ಉರಿ ಅನುಭವ: ಊಟ, ಆಟ ಎಲ್ಲ ಕೆರೆಯಲ್ಲೇ!

ಘಟನೆಯಲ್ಲಿ ಗಾಯಗೊಂಡ ಇಬ್ಬರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುಗಳನ್ನು ಸೋಹೆಲ್ ಅನ್ಸಾರಿ (18), ಮೊಹಮ್ಮದ್ ಅನ್ಸಾರಿ (14) ಎಂದು ಗುರುತಿಸಲಾಗಿದ್ದು ಇಬ್ಬರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ ಎಂದು ಅವರು ತಿಳಿಸಿದರು.