ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ವಿಧಾನ ಸಭಾ ಚುನಾವಣೆ: ಪಶ್ಚಿಮ ಬಂಗಾಳದ 152, ತಮಿಳುನಾಡಿನ 234 ಕ್ಷೇತ್ರಗಳಿಗೆ ಮತದಾನ

ಪಶ್ಚಿಮ ಬಂಗಾಳ ಮತ್ತು ತಮಿಳುನಾಡಿನಲ್ಲಿ ಇಂದು ಮತದಾನ ಬೆಳಗ್ಗೆ 7 ಗಂಟೆಯಿಂದ ಪ್ರಾರಂಭವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದಲ್ಲಿ ನಡೆಯುವ ಚುನಾವಣೆಯಲ್ಲಿ ಒಟ್ಟು 152 ವಿಧಾನ ಸಭಾ ಕ್ಷೇತ್ರಗಳಿಗೆ ಹಾಗೂ ತಮಿಳುನಾಡಿನ ರಾಜ್ಯಾದ್ಯಂತ ನಡೆಯುವ ಒಂದೇ ಹಂತದ ಮತದಾನದಲ್ಲಿ ಒಟ್ಟು 234 ಕ್ಷೇತ್ರಗಳಿಗೆ ಮತದಾನ ನಡೆಯಲಿದೆ.

ಪಶ್ಚಿಮ ಬಂಗಾಳ, ತಮಿಳುನಾಡಿನಲ್ಲಿ ಇಂದು ಮತದಾನ

ಸಂಗ್ರಹ ಚಿತ್ರ -

ಬೆಂಗಳೂರು: ಪಶ್ಚಿಮ ಬಂಗಾಳ (West bengal) ಮತ್ತು ತಮಿಳುನಾಡಿನಲ್ಲಿ (tamil nadu) ಗುರುವಾರ ಬೆಳಗ್ಗೆ 7 ಗಂಟೆಯಿಂದ ಮತದಾನ (Voting) ಆರಂಭವಾಗಿದೆ. ಪಶ್ಚಿಮ ಬಂಗಾಳದಲ್ಲಿ ಮೊದಲ ಹಂತದ ಮತದಾನದಲ್ಲಿ (First phase of voting) ಒಟ್ಟು 152 ವಿಧಾನಸಭಾ ಕ್ಷೇತ್ರಗಳಿಗೆ ಹಾಗೂ ತಮಿಳುನಾಡಿನ ರಾಜ್ಯಾದ್ಯಂತ ನಡೆಯುವ ಒಂದೇ ಹಂತದ ಮತದಾನದಲ್ಲಿ ಒಟ್ಟು 234 ಕ್ಷೇತ್ರಗಳಿಗೆ ಮತದಾನ ಗುರುವಾರ ಮತದಾನ ನಡೆಯಲಿದೆ. ಪಶ್ಚಿಮ ಬಂಗಾಳದಲ್ಲಿ ಒಟ್ಟು 5.24 ಕೋಟಿ ಹಾಗೂ ತಮಿಳುನಾಡಿನ ಒಟ್ಟು 5.73 ಕೋಟಿ ಮತದಾರರು ಇಂದು ಮತ ಚಲಾವಣೆ ಮಾಡಲಿದ್ದಾರೆ.

ಪಶ್ಚಿಮ ಬಂಗಾಳದ16 ಜಿಲ್ಲೆಗಳಲ್ಲಿ ನಡೆಯುವ ಮೊದಲ ಹಂತದಲ್ಲಿ 2,958 ಸಹಾಯಕ ಮತಗಟ್ಟೆಗಳು ಸೇರಿದಂತೆ ಒಟ್ಟು 44,376 ಮತಗಟ್ಟೆಗಳಲ್ಲಿ ಮತದಾನ ನಡೆಯಲಿದೆ. ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಒಟ್ಟು 2,407 ತುಕಡಿಗಳನ್ನು ನಿಯೋಜಿಸಲಾಗಿದೆ. ಎಲ್ಲಾ ಮತಗಟ್ಟೆಗಳಲ್ಲಿ ವೆಬ್‌ಕಾಸ್ಟಿಂಗ್ ಮಾಡಲಾಗುತ್ತದೆ. ಶಾಂತಿಯುತ ಮತದಾನಕ್ಕೆ ಮುನ್ನೆಚ್ಚರಿಕೆ ಕ್ರಮವಾಗಿ, ಶಂಕಿತ ವ್ಯಕ್ತಿಗಳನ್ನು ಬಂಧಿಸಲಾಗಿದೆ ಮತ್ತು ಗಡಿ ಪ್ರದೇಶಗಳಲ್ಲಿ ಕಣ್ಗಾವಲು ಬಿಗಿಗೊಳಿಸಲಾಗಿದೆ. ಕ್ವಿಕ್ ರೆಸ್ಪಾನ್ಸ್ ಟೀಮ್ ಕ್ಯೂಆರ್‌ಟಿಗಳನ್ನು ಸಹ ನಿಯೋಜಿಸಲಾಗಿದೆ.

ತಮಿಳುನಾಡು ಚುನಾವಣೆ: ಮತದಾನಕ್ಕೆ ಸಜ್ಜಾದ 5 ಕೋಟಿಗಿಂತಲೂ ಹೆಚ್ಚು ಮತದಾರರು

ಎಲ್ಲಾ ಮತಗಟ್ಟೆಗಳಲ್ಲಿ ಮೂಲ ಸೌಕರ್ಯಗಳು ಮತ್ತು ಮತದಾರರಿಗೆ ಸಹಾಯವನ್ನು ಒದಗಿಸಲಾಗುವುದು. ಮತದಾರರಿಗೆ ಎಲ್ಲಾ ಮತಗಟ್ಟೆಯ ಪ್ರವೇಶ ದ್ವಾರದ ಹೊರಗೆ ಮೊಬೈಲ್ ಫೋನ್ ಠೇವಣಿ ಸೌಲಭ್ಯವನ್ನು ಒದಗಿಸಲಾಗಿದೆ.

ತಮಿಳುನಾಡು ವಿಧಾನಸಭಾ ಚುನಾವಣೆಗೆ ಮುನ್ನವೇ ರಾಜ್ಯಾದ್ಯಂತ ಒಟ್ಟು 4,18,541 ಅಂಚೆ ಮತಗಳು ದಾಖಲಾಗಿವೆ ಎಂದು ಮುಖ್ಯ ಚುನಾವಣಾಧಿಕಾರಿ ಅರ್ಚನಾ ಪಟ್ನಾಯಕ್ ತಿಳಿಸಿದ್ದಾರೆ. ಚೆನ್ನೈನ ಸಚಿವಾಲಯದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಗುರುವಾರ ನಡೆಯುವ ಒಂದೇ ಹಂತದ ಮತದಾನಕ್ಕೆ ರಾಜ್ಯದಲ್ಲಿ ಸುಗಮ, ಕ್ರಮಬದ್ಧ ಮತ್ತು ಶಾಂತಿಯುತ ಮತದಾನವನ್ನು ಖಚಿತಪಡಿಸಿಕೊಳ್ಳಲು ಭಾರತದ ಚುನಾವಣಾ ಆಯೋಗವು ಮಾಡಿರುವ ವ್ಯಾಪಕ, ಬಹು-ಹಂತದ ಮತ್ತು ಸಮಗ್ರ ವ್ಯವಸ್ಥೆಗಳ ಬಗ್ಗೆ ಮಾಹಿತಿ ನೀಡಿದರು.

ತಮಿಳುನಾಡಿನಾದ್ಯಂತ ಸುಮಾರು 5.73 ಕೋಟಿ ಮತದಾರರು ಗುರುವಾರ ಮತದಾನ ಮಾಡಲಿದ್ದಾರೆ. ಎಲ್ಲಾ 234 ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯಲಿದ್ದು, ರಾಜ್ಯದಾದ್ಯಂತ 75,064 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಮತದಾನ ಪ್ರಕ್ರಿಯೆಯನ್ನು ಪರಿಣಾಮಕಾರಿಯಾಗಿ ಮತ್ತು ಸುಗಮವಾಗಿ ನಡೆಸಲು 1,06,418 ಎಲೆಕ್ಟ್ರಾನಿಕ್ ಮತಯಂತ್ರಗಳನ್ನು ನಿಯೋಜಿಸಲಾಗಿದ್ದು, ಯಾವುದೇ ತಾಂತ್ರಿಕ ಅಡಚಣೆಯಾದರೆ ಬ್ಯಾಕಪ್ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ.

ಶಾಂತಿಯುತ ಮತದಾನಕ್ಕಾಗಿ ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ರಾಜ್ಯಾದ್ಯಂತ ಮತದಾನ ಕೇಂದ್ರಗಳು, ಸ್ಟ್ರಾಂಗ್ ರೂಮ್‌ಗಳು ಮತ್ತು ಇತರ ಸೂಕ್ಷ್ಮ ಸ್ಥಳಗಳಲ್ಲಿ ಸುಮಾರು 83,875 ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ. ರಾಜ್ಯ ಪೊಲೀಸ್ ಜೊತೆಗೆ ಕೇಂದ್ರ ಮೀಸಲು ಪೊಲೀಸ್ ಪಡೆ ಸಿಬ್ಬಂದಿ ಸೇರಿದಂತೆ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಗಳ ಒಟ್ಟು 300 ಕಂಪೆನಿಗಳನ್ನು ಸೂಕ್ಷ್ಮ ಮತ್ತು ದುರ್ಬಲ ಪ್ರದೇಶಗಳಲ್ಲಿ ನಿಯೋಜಿಸಲಾಗಿದೆ.

ಪಶ್ಚಿಮ ಬಂಗಾಳ ಚುನಾವಣೆ: ನಾಳೆ ಮೊದಲ ಹಂತದ ಮತದಾನ; ಮತದಾರರ ಚಿತ್ತ ಟಿಎಂಸಿ ಕಡೆಗೊ ಬಿಜೆಪಿಯತ್ತಲೊ?

ಫ್ಲೈಯಿಂಗ್ ಸ್ಕ್ವಾಡ್‌ಗಳು, ಕಣ್ಗಾವಲು ತಂಡಗಳು ಮತ್ತು ಸ್ಟ್ಯಾಟಿಕ್ ಮಾನಿಟರಿಂಗ್ ಘಟಕಗಳನ್ನು ಸಕ್ರಿಯವಾಗಿ ನಿಯೋಜಿಸಲಾಗಿದೆ. ಮಾದರಿ ನೀತಿ ಸಂಹಿತೆಯ ಉಲ್ಲಂಘನೆಯನ್ನು ಪರಿಶೀಲಿಸಲು ಮತ್ತು ಯಾವುದೇ ದೂರುಗಳಿಗೆ ತ್ವರಿತವಾಗಿ ಪ್ರತಿಕ್ರಿಯಿಸಲು ತಂಡವು ಜಿಲ್ಲೆಗಳಾದ್ಯಂತ ನಿರಂತರವಾಗಿ ಕಾರ್ಯನಿರ್ವಹಿಸುತ್ತದೆ.

ಮತಗಟ್ಟೆಗಳ ಒಳಗೆ ಮೊಬೈಲ್ ಫೋನ್‌ಗಳನ್ನು ಅನುಮತಿಸಲಾಗುವುದಿಲ್ಲ. ಮತದಾರರು ಮತ ಚಲಾಯಿಸಲು ಮತದಾನದ ಆವರಣಕ್ಕೆ ಪ್ರವೇಶಿಸುವ ಮೊದಲು ತಮ್ಮ ಸಾಧನಗಳನ್ನು ಸುರಕ್ಷಿತವಾಗಿ ಠೇವಣಿ ಇಡಲು ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆಗಳನ್ನು ಮಾಡಲಾಗಿದೆ.