ಚೌತಿ ಹಬ್ಬ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Justice Yashwant Varma: ನ್ಯಾಯಮೂರ್ತಿ ಯಶವಂತ್ ವರ್ಮಾ ಪ್ರಕರಣ; ಹಗರಣದ ತನಿಖೆಗೆ ಸಮಿತಿ ರಚಿಸಿದ ಲೋಕಸಭಾ ಸ್ಪೀಕರ್

ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಇಂದು ತ್ರಿಸದಸ್ಯ ಸಮಿತಿಯನ್ನು ಘೋಷಿಸಿದ್ದಾರೆ. ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ಸಭಾಪತಿ ಓಂ ಬಿರ್ಲಾ ತಿಳಿಸಿದ್ದಾರೆ.

ಯಶವಂತ್ ವರ್ಮಾ ಪ್ರಕರಣ; ತನಿಖೆಗೆ ಸಮಿತಿ ರಚನೆ

-

Vishakha Bhat Vishakha Bhat Aug 12, 2025 4:15 PM

ನವದೆಹಲಿ: ಅಕ್ರಮ ಹಣಕ್ಕೆ ಸಂಬಂಧಿಸಿದಂತೆ ನ್ಯಾಯಮೂರ್ತಿ ಯಶವಂತ್ ವರ್ಮಾ (Justice Yashwant Varma) ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ಲೋಕಸಭಾ ಸ್ಪೀಕರ್ ಓಂ ಬಿರ್ಲಾ (Om Birla) ಇಂದು ತ್ರಿಸದಸ್ಯ ಸಮಿತಿಯನ್ನು ಘೋಷಿಸಿದ್ದಾರೆ. ಈ ವರ್ಷದ ಮಾರ್ಚ್‌ನಲ್ಲಿ ವರ್ಮಾ ಅವರ ಅಪಾರ ಪ್ರಮಾಣದ ಸುಟ್ಟುಹೋದ ಮತ್ತು ಭಾಗಶಃ ಸುಟ್ಟುಹೋದ ನಗದು ಪತ್ತೆಯಾಗಿದ್ದವು. ಹೀಗಾಗಿ ಅವರನ್ನು ದೋಷಾರೋಪಣೆ ಮಾಡುವ ಕ್ರಮ ವೇಗ ಪಡೆದುಕೊಂಡಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ವಿರುದ್ಧದ ಆರೋಪಗಳ ತನಿಖೆಗಾಗಿ ತ್ರಿಸದಸ್ಯ ಸಮಿತಿಯನ್ನು ರಚಿಸಲಾಗಿದೆ ಎಂದು ಸಭಾಪತಿ ಓಂ ಬಿರ್ಲಾ ತಿಳಿಸಿದ್ದಾರೆ.

ಸಮಿತಿಯಲ್ಲಿ ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ ಅರವಿಂದ್ ಕುಮಾರ್, ಮದ್ರಾಸ್ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿ ನ್ಯಾಯಮೂರ್ತಿ ಮಣೀಂದರ್ ಮೋಹನ್ ಮತ್ತು ಹಿರಿಯ ವಕೀಲ ಬಿ.ವಿ. ಆಚಾರ್ಯ ಇದ್ದಾರೆ. ನ್ಯಾಯಮೂರ್ತಿಗಳ ವಿರುದ್ಧದ ದೋಷಾರೋಪಣೆಗೆ 146 ಸಂಸದರು ಸಹಿ ಮಾಡಿದ ಪ್ರಸ್ತಾವನೆಯನ್ನು ಅಂಗೀಕರಿಸಿದ ಸ್ಪೀಕರ್, “ಈ ಸಮಿತಿಯು ಸಾಧ್ಯವಾದಷ್ಟು ಬೇಗ ತನ್ನ ವರದಿಯನ್ನು ಸಲ್ಲಿಸುತ್ತದೆ. ವರದಿ ಬರುವವರೆಗೆ ಪ್ರಸ್ತಾವನೆ ಬಾಕಿ ಇರುತ್ತದೆ ಎಂದು ತಿಳಿಸಿದ್ದಾರೆ. ನ್ಯಾಯಾಧೀಶರ ವಿರುದ್ಧದ ದೋಷಾರೋಪಣೆಗೆ ಕಾರ್ಯವಿಧಾನವನ್ನು ಸಂವಿಧಾನದ 124(4)ನೇ ವಿಧಿಯ ಅಡಿಯಲ್ಲಿ ನಿಗದಿಪಡಿಸಲಾಗಿದೆ. ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ಆಂತರಿಕ ತನಿಖಾ ವರದಿಯನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಮತ್ತು ಅವರನ್ನು ಪದಚ್ಯುತಗೊಳಿಸಲು ಆಗಿನ ಸಿಜೆಐ ರಾಷ್ಟ್ರಪತಿಗಳಿಗೆ ನೀಡಿದ ಶಿಫಾರಸನ್ನು ಸುಪ್ರೀಂ ಕೋರ್ಟ್ ವಜಾಗೊಳಿಸಿದ ಕೆಲವು ದಿನಗಳ ನಂತರ ಈ ಸಮಿತಿ ರಚನೆಯಾಗಿದೆ.

ಈ ಸುದ್ದಿಯನ್ನೂ ಓದಿ: Justice Varma Case: ಜಡ್ಜ್‌ ಮನೆಯಲ್ಲಿ ಕಂತೆ ಕಂತೆ ನೋಟು ಪ್ರಕರಣ; ಜಸ್ಟಿಸ್‌ ವರ್ಮಾಗೆ ನೋ ರಿಲೀಫ್‌

ಏನಿದು ಪ್ರಕರಣ?

ದೆಹಲಿ ಹೈಕೋರ್ಟ್ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರ ಮನೆಯಲ್ಲಿ ಕಂತೆ ಕಂತೆ ಲೆಕ್ಕಕ್ಕೆ ಸಿಗದ ನೋಟುಗಳು ಪತ್ತೆಯಾಗಿದ್ದವು. ಅದರ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದವು. ಅದರಲ್ಲಿ ವರ್ಮಾ ನಿವಾಸದಲ್ಲಿ ಬೆಂಕಿಯಲ್ಲಿ ಸುಟ್ಟು ಹೋಗಿರುವ ಕಂತೆ ಕಂತೆ ನೋಟುಗಳು ಕಾಣಿಸುತ್ತದೆ. ವರ್ಮಾ ಊರಿನಿಂದ ಹೊರಗಿದ್ದಾಗ ಅವರ ಮನೆಯಲ್ಲಿ ಬೆಂಕಿ ಕಾಣಿಸಿಕೊಂಡಿತ್ತು. ತಕ್ಷಣ ಅವರ ಕುಟುಂಬದ ಸದಸ್ಯರು ಅಗ್ನಿಶಾಮಕ ದಳಕ್ಕೆ ಮಾಹಿತಿ ನೀಡಿದರು. ಅವರು ಬೆಂಕಿಯನ್ನು ನಂದಿಸಿದ ನಂತರ ರೂಂಗಳಲ್ಲಿ ನಗದು ಪತ್ತೆಯಾಗಿತ್ತು.