ನವದೆಹಲಿ: ಲಂಡನ್ ನ ಹೀಥ್ರೂಗೆ ತೆರಳುತ್ತಿದ್ದ ಏರ್ ಇಂಡಿಯಾದ A350 ವಿಮಾನವು ಸುಮಾರು ಏಳು ಗಂಟೆಗಳ ಕಾಲ ಹಾರಾಟ ನಡೆಸಿದ ನಂತರ (Air India) ಗುರುವಾರ ಮಧ್ಯಾಹ್ನ ತಾಂತ್ರಿಕ ಸಮಸ್ಯೆಯಿಂದಾಗಿ ದೆಹಲಿಗೆ ಮರಳಿದೆ ಎಂದು ವರದಿಯಾಗಿದೆ. ಹೀಥ್ರೂ ಗುರುವಾರ ಬೆಳಿಗ್ಗೆ 6.13 ಕ್ಕೆ ದೆಹಲಿಯಿಂದ ಲಂಡನ್‌ಗೆ ತೆರಳುತ್ತಿದ್ದ ವಿಮಾನವು ಮಧ್ಯಾಹ್ನ 1.20 ರ ಸುಮಾರಿಗೆ ಮರಳಿದೆ ಎಂದು ತಿಳಿದು ಬಂದಿದೆ.
ಇದೇ A350-900 VT-JRF ವಿಮಾನ ಮಾರ್ಚ್ 15 ರಂದು ತಾಂತ್ರಿಕ ಸಮಸ್ಯೆ ಎದುರಿಸಿತ್ತು. ನಂತರ ನ್ಯೂಯಾರ್ಕ್‌ನಿಂದ ದೆಹಲಿಗೆ ಹಾರಾಟ ನಡೆಸುತ್ತಿದ್ದ ಈ ವಿಮಾನವನ್ನು ಐರಿಶ್ ನಗರ ಶಾನನ್‌ಗೆ ತಿರುಗಿಸಲಾಗಿತ್ತು ಎಂದು ಮೂಲಗಳು ತಿಳಿಸಿವೆ. ಏರ್ ಇಂಡಿಯಾ ವಿಮಾನವು ಸುಮಾರು 3,300 ಕಿ.ಮೀ. ಹಾರಾಟ ನಡೆಸಿ, ನಂತರ ಮಧ್ಯರಾತ್ರಿಯೇ ಹಿಂತಿರುಗಿದೆ ಎಂದು ಡೇಟಾ ತೋರಿಸುತ್ತದೆ. ಸೌದಿ ಅರೇಬಿಯಾದಿಂದ ಲಂಡನ್ ತಲುಪಲು ಸುಮಾರು 6-7 ಗಂಟೆಗಳು ಬೇಕಾಗುತ್ತದೆ. ದೆಹಲಿಗೆ ಹಿಂತಿರುಗಲು ನಿರ್ಧರಿಸಿದ್ದಕ್ಕೆ ಏರ್ ಇಂಡಿಯಾ ಇದುವರೆಗೆ ಯಾವುದೇ ಕಾರಣವನ್ನು ತಿಳಿಸಿಲ್ಲ.
ವಿಮಾನವು ಸುರಕ್ಷಿತವಾಗಿ ಲ್ಯಾಂಡ್ ಆಗಿದೆ ಮತ್ತು ಏರ್ ಇಂಡಿಯಾದ ಉನ್ನತ ಸುರಕ್ಷತಾ ಮಾನದಂಡಗಳಿಗೆ ಅನುಗುಣವಾಗಿದೆ. ಇದು ಪ್ರಸ್ತುತ ವ್ಯಾಪಕವಾದ ತಾಂತ್ರಿಕ ಮೌಲ್ಯಮಾಪನಗಳಿಗೆ ಒಳಪಟ್ಟಿರುತ್ತದೆ ಮತ್ತು ಪೂರ್ಣಗೊಳ್ಳಲು ಹೆಚ್ಚುವರಿ ಸಮಯ ಬೇಕಾಗುತ್ತದೆ ಎಂದು ಏರ್ ಇಂಡಿಯಾದ ವಕ್ತಾರರು ತಿಳಿಸಿದ್ದಾರೆ. ಅನಿರೀಕ್ಷಿತ ಪರಿಸ್ಥಿತಿಯಿಂದ ಪ್ರಯಾಣಿಕರಿಗಾದ ಅನಾನುಕೂಲತೆಗೆ ಏರ್ ಇಂಡಿಯಾ ವಿಷಾದ ವ್ಯಕ್ತಪಡಿಸಿದೆ. ವಿಮಾನದಲ್ಲಿ ಎಷ್ಟು ಪ್ರಯಾಣಿಕರಿದ್ದರು ಎಂಬುದು ಇದುವರೆಗೂ ತಿಳಿದು ಬಂದಿಲ್ಲ.
ಸೌದಿಯಲ್ಲಿ ತುರ್ತು ಲ್ಯಾಂಡಿಂಗ್
ಸೋಮವಾರ (M.24) ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಲಂಡನ್‌ಗೆ ಹೊರಟಿದ್ದ ಏರ್ ಇಂಡಿಯಾ ವಿಮಾನವೊಂದು ತಾಂತ್ರಿಕ ದೋಷದ ಕಾರಣದಿಂದಾಗಿ ಸೌದಿ ಅರೇಬಿಯಾದ ಜೆಡ್ಡಾದಲ್ಲಿ ತುರ್ತು ಲ್ಯಾಂಡಿಂಗ್ ಮಾಡಿತ್ತು. ಬೆಂಗಳೂರಿನಿಂದ ಲಂಡನ್ ಹೀಥ್ರೂ ವಿಮಾನ ನಿಲ್ದಾಣಕ್ಕೆ ಹೊರಟಿದ್ದ AI 133 ವಿಮಾನವು ಸುಮಾರು ಆರು ಗಂಟೆಗಳ ಕಾಲ ಹಾರಾಟ ನಡೆಸಿದ ನಂತರ ತಾಂತ್ರಿಕ ಸಮಸ್ಯೆ ಎದುರಿಸಿತು. ಸುರಕ್ಷತೆಯ ದೃಷ್ಟಿಯಿಂದ ವಿಮಾನದ ಪಥವನ್ನು ಬದಲಿಸಿದ ಪೈಲಟ್‌ಗಳು, ಹತ್ತಿರದ ಜೆಡ್ಡಾ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಿಮಾನವನ್ನು ಇಳಿಸಲು ಅನುಮತಿ ಕೋರಿದರು. ಭಾರತೀಯ ಕಾಲಮಾನ ರಾತ್ರಿ ಸುಮಾರು 7:58ಕ್ಕೆ ವಿಮಾನವು ಜೆಡ್ಡಾದಲ್ಲಿ ಸುರಕ್ಷಿತವಾಗಿ ಇಳಿಯಿತು.