ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಪಶ್ಚಿಮ ಬಂಗಾಳದಲ್ಲಿ ಅರಳಿದ ಕಮಲ: ತನ್ನದೇ ಭದ್ರಕೋಟೆಯಲ್ಲಿ ಟಿಎಂಸಿಗೆ ಹೀನಾಯ ಸೋಲು; ಗೆಲುವನ್ನು ಪ್ರಧಾನಿ ನರೇಂದ್ರ ಮೋದಿ ಸಂಭ್ರಮಿಸಿದ್ದು ಹೀಗೆ...

Lotus blooms in West Bengal: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಜಯೋತ್ಸವದ ಘೋಷಣೆ ಮಾಡಿದ್ದಾರೆ. ತನ್ನದೇ ಭದ್ರಕೋಟೆಯಲ್ಲಿ ಮಮತಾ ಬ್ಯಾನರ್ಜಿ ನೇತೃತ್ವದ ಟಿಎಂಸಿ ಹೀನಾಯವಾಗಿ ಸೋಲು ಕಾಣುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ. ಬಿಜೆಪಿಯು 200ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಹಿಡಿಯುವತ್ತ ಸಾಗಿದೆ.

ಪ್ರಧಾನಿ ನರೇಂದ್ರ ಮೋದಿ ಭಾವಚಿತ್ರಕ್ಕೆ ತಿಲಕ ಇಟ್ಟ ಅಬಿಮಾನಿ

ಕೋಲ್ಕತ್ತಾ, ಮೇ 4: ಪಶ್ಚಿಮ ಬಂಗಾಳದಲ್ಲಿ ಕಮಲ ಅರಳಿದೆ ಎಂದು ಪ್ರಧಾನಿ ನರೇಂದ್ರ ಮೋದಿ (PM Narendra Modi) ವಿಜಯೋತ್ಸವದ ಘೋಷಣೆ ಮಾಡಿದ್ದಾರೆ. ತನ್ನದೇ ಭದ್ರಕೋಟೆಯಲ್ಲಿ ಮಮತಾ ಬ್ಯಾನರ್ಜಿ (Mamatha Banerjee) ನೇತೃತ್ವದ ಟಿಎಂಸಿ ಹೀನಾಯವಾಗಿ ಸೋಲು ಕಾಣುತ್ತಿದೆ ಎಂದು ಅವರು ಬಣ್ಣಿಸಿದ್ದಾರೆ. ಸತತ ಮೂರು ಅವಧಿಗೆ ಅಧಿಕಾರದಲ್ಲಿದ್ದ ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (TMC) ವಿರುದ್ಧ ಬಿಜೆಪಿ 200ಕ್ಕೂ ಹೆಚ್ಚು ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಈ ಐತಿಹಾಸಿಕ ಜಯ ದಾಖಲಿಸಿದೆ.

ಚುನಾವಣಾ ಆಯೋಗವು ಚುನಾವಣೆಗಳ ಮತ ಎಣಿಕೆಯನ್ನು ಪ್ರಾರಂಭಿಸಿದ ಕೆಲವೇ ನಿಮಿಷಗಳಲ್ಲಿ, ಬಿಜೆಪಿ ಆರಂಭಿಕ ಮುನ್ನಡೆ ಸಾಧಿಸಿತು. ನಂತರ ತೃಣಮೂಲ ಕಾಂಗ್ರೆಸ್ (TMC) ವಿರುದ್ಧದ ಅಂತರವನ್ನು ಇನ್ನಷ್ಟು ಹೆಚ್ಚಿಸಿಕೊಂಡಿತು. ಬಿಜೆಪಿಯು 200ಕ್ಕೂ ಅಧಿಕ ಸ್ಥಾನಗಳಲ್ಲಿ ಮುನ್ನಡೆ ಸಾಧಿಸುವ ಮೂಲಕ ಬಂಗಾಳದಲ್ಲಿ ಮೊದಲ ಬಾರಿಗೆ ಅಧಿಕಾರ ಹಿಡಿಯುವತ್ತ ಸಾಗಿದೆ.

ಪ್ರಧಾನಿ ಮೋದಿ ಅವರ ಎಕ್ಸ್‌ ಪೋಸ್ಟ್‌:



ಈ ಕುರಿತು ಪ್ರಧಾನಿ ಮೋದಿ ಎಕ್ಸ್‌ನಲ್ಲಿ ಸಂತೋಷ ಹಂಚಿಕೊಂಡಿದ್ದಾರೆ. “2026ರ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯು ಶಾಶ್ವತವಾಗಿ ನೆನಪಿನಲ್ಲಿ ಉಳಿಯುತ್ತದೆ. ಜನರ ಶಕ್ತಿ ಮೇಲುಗೈ ಸಾಧಿಸಿದೆ ಮತ್ತು ಬಿಜೆಪಿಯ ಉತ್ತಮ ಆಡಳಿತದ ರಾಜಕೀಯವು ಜಯಗಳಿಸಿದೆ. ಪಶ್ಚಿಮ ಬಂಗಾಳದ ಪ್ರತಿಯೊಬ್ಬ ವ್ಯಕ್ತಿಗೂ ನಾನು ನಮಸ್ಕರಿಸುತ್ತೇನೆ” ಎಂದು ಅವರು ಬರೆದುಕೊಂಡಿದ್ದಾರೆ.

ರಾಜಕೀಯ ಗುರು ಮಮತಾ ಬ್ಯಾನರ್ಜಿ ವಿರುದ್ಧವೇ ತೊಡೆ ತಟ್ಟಿದ ಸುವೇಂದು ಅಧಿಕಾರಿ

“ಜನರು ಬಿಜೆಪಿಗೆ ಅದ್ಭುತವಾದ ಜನಾದೇಶವನ್ನು ನೀಡಿದ್ದಾರೆ. ಪಶ್ಚಿಮ ಬಂಗಾಳದ ಜನರ ಕನಸುಗಳು ಮತ್ತು ಆಕಾಂಕ್ಷೆಗಳನ್ನು ಈಡೇರಿಸಲು ನಮ್ಮ ಪಕ್ಷವು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತದೆ ಎಂದು ನಾನು ಅವರಿಗೆ ಭರವಸೆ ನೀಡುತ್ತೇನೆ. ಸಮಾಜದ ಎಲ್ಲ ವರ್ಗಗಳಿಗೆ ಅವಕಾಶ ಮತ್ತು ಘನತೆಯನ್ನು ಖಾತ್ರಿಪಡಿಸುವ ಸರ್ಕಾರವನ್ನು ನಾವು ಒದಗಿಸುತ್ತೇವೆ” ಎಂದು ಅವರು ಹೇಳಿದ್ದಾರೆ.

ಕಾರ್ಯಕರ್ತರಿಗೆ ಮಮತಾ ತುರ್ತು ಸಂದೇಶ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ತೃಣಮೂಲ ಕಾಂಗ್ರೆಸ್ (TMC) ಕಾರ್ಯಕರ್ತರು ಮತ್ತು ಪಕ್ಷದ ಬೆಂಬಲಿಗರಿಗೆ ತುರ್ತು ಸಂದೇಶ ರವಾನಿಸಿದ್ದು, ಎಣಿಕೆ ಕೇಂದ್ರಗಳನ್ನು ಬಿಟ್ಟು ಹೊರಬರದಂತೆ ಮನವಿ ಮಾಡಿದ್ದಾರೆ. ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಅವರು, ಬಿಜೆಪಿಯು ಚುನಾವಣಾ ಆಯೋಗ ಮತ್ತು ಕೇಂದ್ರ ಪಡೆಗಳೊಂದಿಗೆ ಸೇರಿಕೊಂಡು ಚುನಾವಣೆಯಲ್ಲಿ ಅಕ್ರಮ ಎಸಗುತ್ತಿದೆ ಎಂದು ಆರೋಪಿಸಿದ್ದಾರೆ.