ನವದೆಹಲಿ, ಸೆ. 7: ಎಲ್‌ಪಿಜಿ (LPG) ಪೂರೈಕೆ ಪರಿಸ್ಥಿತಿ ಸುಧಾರಿಸಿರುವ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದ್ದು, ಇನ್ಮುಂದೆ ನಗರ ಹಾಗೂ ಗ್ರಾಮೀಣ ಪ್ರದೇಶಗಳ ಎಲ್ಲಾ ಗೃಹಬಳಕೆ ಎಲ್‌ಪಿಜಿ ಗ್ರಾಹಕರು 25 ದಿನಗಳ ಅಂತರದಲ್ಲಿ ಸಿಲಿಂಡರ್ ರಿಫಿಲ್ ಬುಕ್ ಮಾಡಬಹುದು. ಮಧ್ಯಪ್ರಾಚ್ಯ ಸಂಘರ್ಷದ ಹಿನ್ನೆಲೆಯಲ್ಲಿ ಎಲ್‌ಪಿಜಿ ಪೂರೈಕೆಯ ಮೇಲೆ ಒತ್ತಡ ಉಂಟಾಗಿದ್ದರಿಂದ ಈ ಹಿಂದೆ ನಗರ ಪ್ರದೇಶಗಳಲ್ಲಿ 25 ದಿನ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ 45 ದಿನಗಳ ಅಂತರದಲ್ಲಿ ಮಾತ್ರ ಸಿಲಿಂಡರ್ ಬುಕಿಂಗ್‌ಗೆ ಅವಕಾಶ ನೀಡಲಾಗಿತ್ತು.
ಪ್ರಸ್ತುತ ಎಲ್‌ಪಿಜಿ ಪೂರೈಕೆ ಸುಧಾರಿಸಿದ್ದು, ರಿಫಿಲ್‌ಗಳ ಬಾಕಿ ಬೇಡಿಕೆಯೂ ಗಣನೀಯವಾಗಿ ಕಡಿಮೆಯಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ವಿಧಿಸಲಾಗಿದ್ದ 45 ದಿನಗಳ ಬುಕಿಂಗ್ ಅಂತರವನ್ನು 25 ದಿನಗಳಿಗೆ ಇಳಿಸಲಾಗಿದೆ.
LPG Gas Price: ಗುಡ್‌ನ್ಯೂಸ್... ಗುಡ್‌ನ್ಯೂಸ್! LPG ಗ್ಯಾಸ್ ಮತ್ತಷ್ಟು ಅಗ್ಗ!
ಕೇಂದ್ರ ಪೆಟ್ರೋಲಿಯಂ, ನೈಸರ್ಗಿಕ ಅನಿಲ ಮತ್ತು ಪ್ರವಾಸೋದ್ಯಮ ರಾಜ್ಯ ಸಚಿವ ಸುರೇಶ್ ಗೋಪಿ ಸೋಮವಾರ ಈ ಮಾಹಿತಿ ಹಂಚಿಕೊಂಡಿದ್ದಾರೆ. ಈ ಬದಲಾವಣೆಯನ್ನು ತಕ್ಷಣದಿಂದಲೇ ಜಾರಿಗೆ ತರುವಂತೆ ಪೆಟ್ರೋಲಿಯಂ ಸಚಿವಾಲಯವು ತೈಲ ಮಾರುಕಟ್ಟೆ ಕಂಪನಿಗಳಿಗೆ (OMCs) ಸೂಚನೆ ನೀಡಿದೆ.
ಇದರಿಂದ ದೇಶಾದ್ಯಂತ ನಗರ–ಗ್ರಾಮೀಣ ಎಂಬ ಭೇದವಿಲ್ಲದೆ ಎಲ್ಲಾ ಗೃಹಬಳಕೆ LPG ಗ್ರಾಹಕರಿಗೂ 25 ದಿನಗಳ ಅಂತರದಲ್ಲಿ ರೀಫಿಲ್ ಬುಕ್ ಮಾಡುವ ಅವಕಾಶ ಲಭ್ಯವಾಗಲಿದೆ.