ಮಧ್ಯ ಪ್ರದೇಶ ರಾಜ್ಯಸಭಾ ಉಪಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ಹರ್ದೀಪ್ ಪುರಿ ಆಯ್ಕೆ
ಮುಂಬರುವ ರಾಜ್ಯ ಸಭಾ ಉಪಚುನಾವಣೆಗೆ ಮಧ್ಯಪ್ರದೇಶದಿಂದ ಬಿಜೆಪಿ ಅಭ್ಯರ್ಥಿಯಾಗಿ ಹರ್ದೀಪ್ ಪುರಿ ಅವರನ್ನು ಆಯ್ಕೆ ಮಾಡಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಂಪುಟದಲ್ಲಿರುವ ಏಕೈಕ ಸಿಖ್ ಸಚಿವರಾದ ಹರ್ದೀಪ್ ಪುರಿ ಅವರು ಈ ಹಿಂದೆ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು.
ಸಂಗ್ರಹ ಚಿತ್ರ -
ಮಧ್ಯಪ್ರದೇಶ: ಕೇಂದ್ರ ಸಚಿವ ಹರ್ದೀಪ್ ಪುರಿ (Union Minister Hardeep Puri) ಅವರನ್ನು ಮುಂಬರುವ ಮಧ್ಯಪ್ರದೇಶದ (Rajya Sabha election) ರಾಜ್ಯಸಭಾ ಚುನಾವಣೆಗೆ (Rajya Sabha Bypoll) ಅಭ್ಯರ್ಥಿಯನ್ನಾಗಿ ಬಿಜೆಪಿ (BJP) ಬುಧವಾರ ಘೋಷಿಸಿದೆ. ಈ ಮೂಲಕ ಕಳೆದ ಕೆಲವು ದಿನಗಳಿಂದ ಸಚಿವರ ಭವಿಷ್ಯದ ಕುರಿತುಇದ್ದ ಅನಿಶ್ಚಿತತೆಗೆ ತೆರೆ ಬಿದ್ದಿದೆ. ಲೇಖಕರು, ಮಾಜಿ ರಾಜತಾಂತ್ರಿಕರು ಆಗಿರುವ ಹರ್ದೀಪ್ ಸಿಂಗ್ ಪುರಿ ಅವರು 2017ರಿಂದ ಸಚಿವ ಸ್ಥಾನದಲ್ಲಿದ್ದು, ವಸತಿ ಹಾಗೂ ನಗರ ವ್ಯವಹಾರ, ನಾಗರಿಕ ವಿಮಾನಯಾನ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿ ಕಾರ್ಯನಿರ್ವಹಿಸಿದ್ದಾರೆ.
ಕೇಂದ್ರದ ಮಾಜಿ ಸಚಿವ ಎಲ್. ಮುರುಗನ್ ಅವರ ರಾಜೀನಾಮೆಯಿಂದ ತೆರವಾದ ಮಧ್ಯಪ್ರದೇಶದ ಏಕೈಕ ರಾಜ್ಯಸಭಾ ಸ್ಥಾನಕ್ಕೆ ನಡೆಯಲಿರುವ ಉಪಚುನಾವಣೆಗೆ ಹರ್ದೀಪ್ ಪುರಿ ಅವರ ಹೆಸರನ್ನು ಬಿಜೆಪಿಯ ಕೇಂದ್ರ ಚುನಾವಣಾ ಸಮಿತಿಯು ಅನುಮೋದಿಸಿದೆ.
ಕುಕ್ಕೆಯಲ್ಲಿ ಆಶ್ಲೇಷ ಬಲಿ ಪೂಜೆ ದಿಟ್ಟಂ ಬದಲಾವಣೆಗೆ ವಿರೋಧ
ಪ್ರಧಾನಿ ನರೇಂದ್ರ ಮೋದಿ ಅವರ ನೇತೃತ್ವದ ಸಂಪುಟದಲ್ಲಿರುವ ಏಕೈಕ ಸಿಖ್ ಸಚಿವರಾದ ಹರ್ದೀಪ್ ಪುರಿ ಅವರು ಈ ಹಿಂದೆ ಉತ್ತರ ಪ್ರದೇಶದಿಂದ ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆಯಾಗಿದ್ದರು. ಅವರ ಪ್ರಸ್ತುತ ರಾಜ್ಯಸಭಾ ಅವಧಿಯು ನವೆಂಬರ್ನಲ್ಲಿ ಕೊನೆಗೊಳ್ಳಲಿದೆ. ಈ ಹಿಂದೆ ಉತ್ತರ ಪ್ರದೇಶದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆಗಾಗಿ ಬಿಜೆಪಿ ಎಂಟು ಅಭ್ಯರ್ಥಿಗಳ ಹೆಸರನ್ನು ಪ್ರಕಟಿಸಿದಾಗ ಅದರಲ್ಲಿ ಹರ್ದೀಪ್ ಪುರಿ ಅವರ ಹೆಸರಿರಲಿಲ್ಲ.ಪ್ರಸ್ತುತ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿರುವ ಅವರನ್ನು ಬಿಜೆಪಿ ಈ ಹಿಂದೆ ಎರಡು ಬಾರಿ ರಾಜ್ಯಸಭೆಗೆ ಕಳುಹಿಸಿತ್ತು. ಅವರು ಲೋಕಸಭಾ ಚುನಾವಣೆಯಲ್ಲೂ ಸ್ಪರ್ಧಿಸಿ ಸೋತಿದ್ದರು.
ಹರ್ದೀಪ್ ಪುರಿ ಅವರು 2017 ರಲ್ಲಿ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ರಾಜ್ಯ ಸಚಿವರಾಗಿ ಕೇಂದ್ರ ಸಚಿವ ಸಂಪುಟವನ್ನು ಸೇರಿಕೊಂಡರು. 2019ರಲ್ಲಿ ಅವರಿಗೆ ನಾಗರಿಕ ವಿಮಾನಯಾನ ಸಚಿವಾಲಯದ ಜವಾಬ್ದಾರಿ ನೀಡಲಾಯಿತು. ಇದರೊಂದಿಗೆ ವಾಣಿಜ್ಯ ಮತ್ತು ಕೈಗಾರಿಕಾ ಸಚಿವಾಲಯದ ರಾಜ್ಯ ಸಚಿವರಾಗಿಯೂ ಕಾರ್ಯ ನಿರ್ವಹಿಸಿದರು.
2021ರಲ್ಲಿ ಅವರು ಕೇಂದ್ರ ಸಚಿವರಾಗಿ ವಸತಿ ಹಾಗೂ ನಗರ ವ್ಯವಹಾರ ಹಾಗೂ ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವಾಲಯದ ಜವಾಬ್ದಾರಿ ವಹಿಸಿಕೊಂಡರು. 2024ರ ಬಳಿಕ ಅವರು ಪೆಟ್ರೋಲಿಯಂ ಮತ್ತು ನೈಸರ್ಗಿಕ ಅನಿಲ ಸಚಿವರಾಗಿದ್ದಾರೆ.
1974 ರ ಬ್ಯಾಚ್ನ ಭಾರತೀಯ ವಿದೇಶಾಂಗ ಸೇವೆಯ ಅಧಿಕಾರಿಯಾಗಿರುವ ಅವರು ಜಿನೀವಾ, ನ್ಯೂಯಾರ್ಕ್ನಲ್ಲಿರುವ ವಿಶ್ವಸಂಸ್ಥೆಯಲ್ಲಿ ಭಾರತದ ಖಾಯಂ ಪ್ರತಿನಿಧಿಯಾಗಿದ್ದಾರೆ.
ಪರಿಷತ್ ಚುನಾವಣೆ ಫಲಿತಾಂಶ, ಜನರ ಸಂದೇಶವನ್ನು ಕೂಲಂಕಷವಾಗಿ ಅಧ್ಯಯನ ಮಾಡುತ್ತೇವೆ: ಸಿಎಂ ಡಿ ಕೆ ಶಿವಕುಮಾರ್
ರಾಜ್ಯಸಭಾ ಉಪಚುನಾವಣೆಗೆ ನಾಮಪತ್ರ ಸಲ್ಲಿಸಲು ನವೆಂಬರ್ 2 ಕೊನೆಯ ದಿನಾಂಕವಾಗಿದ್ದು, ನವೆಂಬರ್ 3 ರಂದು ನಾಮಪತ್ರಗಳ ಪರಿಶೀಲನೆ ನಡೆಯಲಿದೆ. ಉಮೇದುವಾರಿಕೆಯನ್ನು ಹಿಂಪಡೆಯಲು ನವೆಂಬರ್ 5 ಅನ್ನು ಕೊನೆಯ ದಿನವಾಗಿದೆ. ನವೆಂಬರ್ 12ರಂದು ಬೆಳಗ್ಗೆ 9 ರಿಂದ ಸಂಜೆ 4 ಗಂಟೆವರೆಗೆ ಮತದಾನ ನಡೆಯಲಿದೆ. ಅದೇ ದಿನ ಸಂಜೆ 5 ಗಂಟೆಗೆ ಮತ ಎಣಿಕೆ ಕಾರ್ಯ ನಡೆಯಲಿದೆ.