ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಗೋಹತ್ಯೆಯು ಬಕ್ರೀದ್ ಹಬ್ಬದ ಅತ್ಯಗತ್ಯ ಆಚರಣೆಯಲ್ಲ: ಮದ್ರಾಸ್ ಹೈಕೋರ್ಟ್ ಮಹತ್ವದ ತೀರ್ಪು

Madras High Court" ಬಕ್ರೀದ್ ಹಬ್ಬದ ವೇಳೆ ಗೋಹತ್ಯೆ ಇಸ್ಲಾಂ ಧರ್ಮದ ಅತ್ಯಗತ್ಯ ಆಚರಣೆಯಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದ್ದು, ತಮಿಳುನಾಡಿನಲ್ಲಿ ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆ ಮತ್ತು ಅನಧಿಕೃತ ಪ್ರಾಣಿ ವಧೆ ತಡೆಯಲು ಸರ್ಕಾರಕ್ಕೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಸಾಂದರ್ಭಿಕ ಚಿತ್ರ

ಚೆನ್ನೈ, ಮೇ 28: ಬಕ್ರೀದ್ ಹಬ್ಬದ ಸಂದರ್ಭದಲ್ಲಿ ಅಥವಾ ಇನ್ಯಾವುದೇ ದಿನಗಳಲ್ಲಿ ತಮಿಳುನಾಡಿನಲ್ಲಿ ಯಾವುದೇ ಹಸು ಅಥವಾ ಕರುಗಳನ್ನು ಕೊಲ್ಲದಂತೆ ನೋಡಿಕೊಳ್ಳಬೇಕು ಎಂದು ಮದ್ರಾಸ್ ಹೈಕೋರ್ಟ್ (Madras High Court) ತಮಿಳುನಾಡು ಸರ್ಕಾರಕ್ಕೆ (Tamil Nadu Government) ಕಡಕ್ ನಿರ್ದೇಶನ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಗೋಹತ್ಯೆ ತಡೆಯಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕೋರಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜಿ.ಆರ್. ಸ್ವಾಮಿನಾಥನ್ (GR Swaminathan) ಮತ್ತು ನ್ಯಾಯಮೂರ್ತಿ ವಿ. ಲಕ್ಷ್ಮೀನಾರಾಯಣ್ (V Lakshminarayanan) ಅವರಿದ್ದ ವಿಭಾಗೀಯ ಪೀಠವು ಈ ಆದೇಶ ಹೊರಡಿಸಿದೆ. ಈ ತೀರ್ಪು ರಾಜ್ಯದಾದ್ಯಂತ ಕಾನೂನು ಸುವ್ಯವಸ್ಥೆಯನ್ನು ಕಾಪಾಡಲು ಮತ್ತು ಅನಧಿಕೃತವಾಗಿ ನಡೆಯುವ ಪ್ರಾಣಿ ಹಿಂಸೆಯನ್ನು ತಡೆಯಲು ಅತ್ಯಂತ ನಿರ್ಣಾಯಕ ಎಂದು ಕಾನೂನು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯದ ಈ ಆದೇಶವನ್ನು ಸಂಪೂರ್ಣವಾಗಿ ಪಾಲಿಸುವಂತೆ ಮಾಡಲು ಸರ್ಕಾರದ ಮುಖ್ಯ ಕಾರ್ಯದರ್ಶಿ ಮತ್ತು ಕಾನೂನು ಸುವ್ಯವಸ್ಥೆ ವಿಭಾಗದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕರು ಸೇರಿ ಹಿರಿಯ ಅಧಿಕಾರಿಗಳು ಸಂಬಂಧಪಟ್ಟ ಸಿಬ್ಬಂದಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು ಎಂದು ಕೋರ್ಟ್ ಹೇಳಿದೆ. ಪ್ರಾಣಿ ವಧೆಯನ್ನು ಎಲ್ಲೆಂದರಲ್ಲಿ ಅಥವಾ ತಾತ್ಕಾಲಿಕ ಜಾಗಗಳಲ್ಲಿ ಮಾಡುವಂತಿಲ್ಲ. ಕಾನೂನುಬದ್ಧವಾಗಿ ಅನುಮತಿ ಪಡೆದ ಕಸಾಯಿಖಾನೆಗಳಲ್ಲಿ ಮಾತ್ರವೇ ಇದನ್ನು ಮಾಡಬೇಕು ಎಂದು ಪೀಠವು ಒತ್ತಿ ಹೇಳಿದೆ.

ವಿಚಾರಣೆಯ ವೇಳೆ, ಬಕ್ರೀದ್‌ಗಾಗಿ ತಾತ್ಕಾಲಿಕವಾಗಿ ಪ್ರಾಣಿ ವಧೆ ಮಾಡುವ ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಸಲ್ಲಿಸಿದ್ದ ಅಫಿಡವಿಟ್‌ಗೆ ಹೈಕೋರ್ಟ್ ತೀವ್ರ ಅಸಮಾಧಾನ ವ್ಯಕ್ತಪಡಿಸಿತು. ಇಂತಹ ವ್ಯವಸ್ಥೆಗಳ ಸಿಂಧುತ್ವವನ್ನು ಪ್ರಶ್ನಿಸಿದ ನ್ಯಾಯಾಧೀಶರು, ಸ್ವತಂತ್ರವಾಗಿ ಕಸಾಯಿಖಾನೆ ವಲಯಗಳನ್ನು ಗುರುತಿಸಲು ಕಾನೂನು ಜಾರಿ ಸಂಸ್ಥೆಗಳಿಗೆ ಯಾವುದೇ ಅಧಿಕಾರವಿಲ್ಲ ಎಂದು ಅಭಿಪ್ರಾಯಪಟ್ಟರು. ಮುನ್ಸಿಪಲ್ ಮತ್ತು ಶಾಸನಬದ್ಧ ಚೌಕಟ್ಟಿನಡಿಯಲ್ಲಿ ಅಧಿಕಾರ ಹೊಂದಿರುವ ಸಂಸ್ಥೆಗಳು ಮಾತ್ರ ಕಾನೂನುಬದ್ಧ ಸ್ಥಳವನ್ನು ಗುರುತಿಸಬಲ್ಲವು ಎಂದರು.

ಬಕ್ರೀದ್‌ಗೆ ಬಲಿ ಕೊಡದೆ ಬಾಂಗ್ಲಾದೇಶ ಮೃಗಾಲಯಕ್ಕೆ "ಡೊನಾಲ್ಡ್ ಟ್ರಂಪ್" ಸ್ಥಳಾಂತರ!

ಸಂವಿಧಾನದ 48ನೇ ವಿಧಿಯನ್ನು ಉಲ್ಲೇಖಿಸಿದ ನ್ಯಾಯಾಧೀಶರು, ಹಸುಗಳು ಮತ್ತು ಕರುಗಳ ಹತ್ಯೆಯನ್ನು ನಿಷೇಧಿಸಲು ಸರ್ಕಾರ ಶ್ರಮಿಸಬೇಕು ಎಂದು ನೆನಪಿಸಿದರು. ಬಕ್ರೀದ್ ಸಮಯದಲ್ಲಿ ಗೋವುಗಳನ್ನು ಬಲಿ ನೀಡುವುದು ಇಸ್ಲಾಂ ಧರ್ಮದಲ್ಲಿ ಅತ್ಯಗತ್ಯವಾದ ಧಾರ್ಮಿಕ ಆಚರಣೆಯಲ್ಲ ಎಂದು ಸುಪ್ರೀಂ ಕೋರ್ಟ್‌ನ ಈ ಹಿಂದಿನ ತೀರ್ಪುಗಳನ್ನು ಹೈಕೋರ್ಟ್ ಪುನರುಚ್ಚರಿಸಿದೆ.

ತಮಿಳುನಾಡು ಪ್ರಾಣಿ ಸಂರಕ್ಷಣಾ ಕಾಯ್ದೆಯ ಪ್ರಕಾರ, 10 ವರ್ಷ ಮೇಲ್ಪಟ್ಟ, ಸಂತಾನೋತ್ಪತ್ತಿಗೆ ಅಸಮರ್ಥವಾದ ಅಥವಾ ಕಾಯಿಲೆಯಿಂದ ಬಳಲುತ್ತಿರುವ ಹಸುಗಳನ್ನು ಮಾತ್ರ ಕೊಲ್ಲಲು ಅವಕಾಶವಿದೆ. ಆದರೆ ಇದು ಸಂವಿಧಾನದ ಆಶಯಕ್ಕೆ ವಿರುದ್ಧವಾಗಿರುವುದರಿಂದ ಈ ನಿಯಮವನ್ನು ಕಟ್ಟುನಿಟ್ಟಾಗಿ ಮರುಪರಿಶೀಲಿಸಬೇಕು ಎಂದು ನ್ಯಾಯಾಲಯ ಹೇಳಿದೆ. ಗ್ರಾಮೀಣ ಆರ್ಥಿಕತೆ ಮತ್ತು ಹಾಲಿನ ಉತ್ಪಾದನೆಯ ಹಿತದೃಷ್ಟಿಯಿಂದ ಗೋಹತ್ಯೆ ನಿಷೇಧಿಸುವ ಸರ್ಕಾರದ ಆದೇಶವು ಕಾನೂನಿನ ಬಲವನ್ನು ಹೊಂದಿದೆ ಎಂದು ಕೋರ್ಟ್ ಸ್ಪಷ್ಟಪಡಿಸಿದೆ.