ಟಿಇಟಿ ಪ್ರಶ್ನೆಪತ್ರಿಕೆ ಸೋರಿಕೆ: ಪರೀಕ್ಷೆ ಮುಂದೂಡಿಕೆ, ಮೂವರು ಬಂಧನ
ಮಹಾರಾಷ್ಟ್ರದಲ್ಲಿ ಜೂನ್ 28ರಂದು ನಡೆಯಬೇಕಿದ್ದ ಟಿಇಟಿ-2026 (ಶಿಕ್ಷಕರ ಅರ್ಹತಾ ಪರೀಕ್ಷೆ) ಪ್ರಶ್ನೆಪತ್ರಿಕೆ ಸೋರಿಕೆಯ ಆರೋಪದ ಹಿನ್ನೆಲೆಯಲ್ಲಿ ಕೊನೆಯ ಕ್ಷಣದಲ್ಲಿ ಪರೀಕ್ಷೆಯನ್ನು ಮುಂದೂಡಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು, ಪ್ರಶ್ನೆಪತ್ರಿಕೆ ಸೋರಿಕೆಯ ಜಾಲವನ್ನು ಪತ್ತೆಹಚ್ಚಲು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (ಎಸ್‌ಐಟಿ) ರಚಿಸಿದೆ. ಸುಮಾರು 6 ಲಕ್ಷ ಅಭ್ಯರ್ಥಿಗಳ ಮೇಲೆ ಈ ಬೆಳವಣಿಗೆ ಪರಿಣಾಮ ಬೀರಿದ್ದು, ಹೊಸ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಪರೀಕ್ಷಾ ಮಂಡಳಿ ತಿಳಿಸಿದೆ.
ಸಾಂದರ್ಭಿಕ ಚಿತ್ರ -
ಮುಂಬೈ: ಮಹಾರಾಷ್ಟ್ರ (Maharashtra)ದಲ್ಲಿ ಭಾನುವಾರ (ಜೂನ್ 28) ನಡೆಯಬೇಕಿದ್ದ ಶಿಕ್ಷಕರ ಅರ್ಹತಾ ಪರೀಕ್ಷೆ (Teacher Eligibility Test - TET 2026) ಪ್ರಶ್ನೆಪತ್ರಿಕೆ ಸೋರಿಕೆ (Paper Leak) ಆರೋಪದ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಕೊನೆಯ ಕ್ಷಣದಲ್ಲಿ ಮುಂದೂಡಲಾಗಿದೆ (Postponed). ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರನ್ನು ಬಂಧಿಸಲಾಗಿದ್ದು ರಾಜ್ಯ ಸರ್ಕಾರ ವಿಶೇಷ ತನಿಖಾ ತಂಡ (SIT) ರಚಿಸಿದೆ.
ಪೊಲೀಸರ ಮಾಹಿತಿ ಪ್ರಕಾರ, ಥಾಣೆ ಜಿಲ್ಲೆಯ ಭಿವಂಡಿಯಲ್ಲಿ ರಹಸ್ಯ ಮಾಹಿತಿ ಆಧರಿಸಿ ದಾಳಿ ನಡೆಸಿದ ವೇಳೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ. ಅವರಿಂದ ಮೂಲ ಪ್ರಶ್ನೆಪತ್ರಿಕೆಯ ಪ್ರತಿಗಳು ವಶಪಡಿಸಿಕೊಳ್ಳಲಾಗಿದ್ದು, ಶಿಕ್ಷಣ ಇಲಾಖೆ ಪರಿಶೀಲನೆಯ ಬಳಿಕ ಅವು ನಿಜವಾದ ಪ್ರಶ್ನೆಪತ್ರಿಕೆಗಳೇ ಎಂಬುದು ದೃಢಪಟ್ಟಿದೆ. ಬಂಧಿತರು ಅಂತರರಾಜ್ಯ ಮಟ್ಟದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಜಾಲದ ಸದಸ್ಯರು ಎಂದು ಶಂಕಿಸಲಾಗಿದೆ.
ಪ್ರಕರಣದ ತನಿಖೆಗಾಗಿ ಪವನ್ ಬನ್ಸೋಡ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಮೂಲ ಪತ್ತೆಹಚ್ಚಲು ಹಾಗೂ ಪ್ರಮುಖ ಆರೋಪಿಗಳನ್ನು ಬಂಧಿಸಲು ವಿವಿಧ ರಾಜ್ಯಗಳಿಗೆ ವಿಶೇಷ ಪೊಲೀಸ್ ತಂಡಗಳನ್ನು ಕಳುಹಿಸಲಾಗಿದೆ.
''ರಕ್ಷಕರೇ ಭಕ್ಷಕರಾದರುʼʼ: ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಬಗ್ಗೆ ಮೌನ ಮುರಿದ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್; ವಿದ್ಯಾರ್ಥಿಗಳ ಆತ್ಮಹತ್ಯೆ ಬಗ್ಗೆ ಹೇಳಿದ್ದೇನು?
ಪ್ರಕರಣದ ತನಿಖೆಗಾಗಿ ಪವನ್ ಬನ್ಸೋಡ್ ನೇತೃತ್ವದಲ್ಲಿ ವಿಶೇಷ ತನಿಖಾ ತಂಡವನ್ನು ರಚಿಸಲಾಗಿದೆ. ಪ್ರಶ್ನೆಪತ್ರಿಕೆ ಸೋರಿಕೆಯ ಮೂಲ ಪತ್ತೆಹಚ್ಚಲು ಹಾಗೂ ಪ್ರಮುಖ ಆರೋಪಿಗಳನ್ನು ಬಂಧಿಸಲು ವಿವಿಧ ರಾಜ್ಯಗಳಿಗೆ ವಿಶೇಷ ಪೊಲೀಸ್ ತಂಡಗಳನ್ನು ಕಳುಹಿಸಲಾಗಿದೆ.
ಈ ಬಾರಿ ಟಿಇಟಿ ಪರೀಕ್ಷೆಗೆ ರಾಜ್ಯದ 37 ಸ್ಥಳಗಳಲ್ಲಿನ 1,728 ಕೇಂದ್ರಗಳಲ್ಲಿ ಸುಮಾರು 6 ಲಕ್ಷ ಅಭ್ಯರ್ಥಿಗಳು ಹಾಜರಾಗಬೇಕಿತ್ತು. ಪ್ರಶ್ನೆಪತ್ರಿಕೆ ಸೋರಿಕೆ ಹಿನ್ನೆಲೆಯಲ್ಲಿ ಪರೀಕ್ಷೆಯನ್ನು ಮುಂದೂಡುವ ಅನಿವಾರ್ಯತೆ ಎದುರಾಗಿದೆ ಎಂದು ಮಹಾರಾಷ್ಟ್ರ ರಾಜ್ಯ ಪರೀಕ್ಷಾ ಮಂಡಳಿ ತಿಳಿಸಿದೆ. ಅಭ್ಯರ್ಥಿಗಳು ಮರು ನೋಂದಣಿ ಮಾಡಿಕೊಳ್ಳುವ ಅಗತ್ಯವಿಲ್ಲ ಹಾಗೂ ಯಾವುದೇ ಹೆಚ್ಚುವರಿ ಶುಲ್ಕವನ್ನು ವಿಧಿಸಲಾಗುವುದಿಲ್ಲ ಎಂದು ಮಂಡಳಿ ಸ್ಪಷ್ಟಪಡಿಸಿದೆ. ಹೊಸ ಪರೀಕ್ಷಾ ದಿನಾಂಕವನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ತಿಳಿಸಿದೆ.
ಉಪಮುಖ್ಯಮಂತ್ರಿ ಏಕನಾಥ್ ಶಿಂಧೆ ಘಟನೆಗೆ ತೀವ್ರ ಖಂಡನೆ ವ್ಯಕ್ತಪಡಿಸಿದ್ದು, ಪ್ರಕರಣದ ಪ್ರಮುಖ ಆರೋಪಿಗಳ ವಿರುದ್ಧ ಕಠಿಣ ಕಾನೂನುಗಳಡಿ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ. ಇತ್ತ, ಪ್ರತಿಪಕ್ಷಗಳು ಪರೀಕ್ಷಾ ವ್ಯವಸ್ಥೆಯ ವೈಫಲ್ಯವನ್ನು ಟೀಕಿಸಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿವೆ.