ರಾಜ್ಯಸಭೆ ವಿರೋಧ ಪಕ್ಷದ ನಾಯಕರಾಗಿ ಮಲ್ಲಿಕಾರ್ಜುನ ಖರ್ಗೆ ಮರು ನೇಮಕ
Mallikarjun Kharge Reappointed: ರಾಜ್ಯಸಭೆಗೆ ಪುನರಾಯ್ಕೆಯಾದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಗೆ ಸೋಮವಾರ ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಜವಾಬ್ದಾರಿ ನೀಡಲಾಗಿದೆ. ಖರ್ಗೆ ರಾಜ್ಯಸಭಾ ಸಭಾಪತಿ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು.
ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (ಸಂಗ್ರಹ ಚಿತ್ರ) -
ನವದೆಹಲಿ, ಜೂ. 29: ರಾಜ್ಯಸಭೆಗೆ ಪುನರಾಯ್ಕೆಯಾದ ನಂತರ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ (Mallikarjun Kharge) ಅವರಿಗೆ ಸೋಮವಾರ (ಜೂ. 29) ಮತ್ತೊಂದು ಜವಾಬ್ದಾರಿ ನೀಡಲಾಗಿದೆ. ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡಲಾಗಿದೆ. ಖರ್ಗೆ ಜೂನ್ 25ರವರೆಗೆ ರಾಜ್ಯಸಭೆಯ (Rajya Sabha) ಸದಸ್ಯರಾಗಿದ್ದರು. ಅವರ ಪುನರಾಯ್ಕೆಯ ನಂತರ, ಮೇಲ್ಮನೆಯ ಅಧ್ಯಕ್ಷ ಸಿ.ಪಿ. ರಾಧಾಕೃಷ್ಣನ್ ಜೂನ್ 26ರಿಂದ ಜಾರಿಗೆ ಬರುವಂತೆ ವಿರೋಧ ಪಕ್ಷದ ನಾಯಕ ಎಂದು ಮಾನ್ಯತೆ ನೀಡಿದರು.
ಖರ್ಗೆ ಸೋಮವಾರ ರಾಜ್ಯಸಭಾ ಸಭಾಪತಿ ಅವರ ಕೊಠಡಿಯಲ್ಲಿ ಪ್ರಮಾಣ ವಚನ ಸ್ವೀಕರಿಸಿದರು. ಜೂನ್ 25ರಂದು ರಾಜ್ಯಸಭೆಯ ಸದಸ್ಯರಾಗಿ ಮಲ್ಲಿಕಾರ್ಜುನ ಖರ್ಗೆ ಅವರ ಅಧಿಕಾರಾವಧಿ ಮುಗಿದ ನಂತರ ಅವರು ಜೂನ್ 26ರಂದು ರಾಜ್ಯಸಭೆಯ ವಿರೋಧ ಪಕ್ಷದ ನಾಯಕನ ಹುದ್ದೆಯಿಂದ ಕೆಳಗಿಳಿದರು.
ʼʼರಾಜ್ಯಸಭೆಗೆ ಮರು ಆಯ್ಕೆಯಾದ ಹಿನ್ನೆಲೆಯಲ್ಲಿ ಜೂನ್ 26ರಿಂದ ಜಾರಿಗೆ ಬರುವಂತೆ ಕಾಂಗ್ರೆಸ್ ಸದಸ್ಯ ಮತ್ತು ರಾಜ್ಯಸಭೆಯ ನಾಯಕ ಮಲ್ಲಿಕಾರ್ಜುನ ಖರ್ಗೆ ಅವರನ್ನು ಜೂನ್ 26ರಿಂದ ಜಾರಿಗೆ ಬರುವಂತೆ ರಾಜ್ಯಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆʼʼ ಎಂದು ಪ್ರಕಟಣೆ ತಿಳಿಸಿದೆ.
2007ರಲ್ಲಿ ಬಿಡದಿ ಟೌನ್‌ಶಿಪ್‌ಗೆ ಡಿಕೆಶಿ, ಸಿದ್ದರಾಮಯ್ಯ, ಖರ್ಗೆ ವಿರೋಧಿಸಿದ್ದರು: ಎಚ್.ಡಿ.ಕೆ.
ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧ ಆಯ್ಕೆ
ಕರ್ನಾಟಕ ವಿಧಾನಸಭೆಯಿಂದ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ನಾಲ್ವರು ಅವಿರೋಧವಾಗಿ ಆಯ್ಕೆಯಾಗಿದ್ದರು. ಚುನಾವಣಾ ಕಣದಲ್ಲಿ ಯಾವುದೇ ಸ್ಪರ್ಧಿಗಳಿಲ್ಲದ ಕಾರಣ ಮೂವರು ಕಾಂಗ್ರೆಸ್ ಮತ್ತು ಓರ್ವ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಗೆಲುವು ಸಾಧಿಸಿದ್ದರು. ಕಾಂಗ್ರೆಸ್ ಅಭ್ಯರ್ಥಿಗಳಾದ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಬಿಜೆಪಿಯ ಪ್ರೊ.ಎಂ. ನಾಗರಾಜು ಅವಿರೋಧವಾಗಿ ಆಯ್ಕೆಯಾದವರು.
“ಪ್ರತಿಸ್ಪರ್ಧಿಗಳಿಲ್ಲದ ಕಾರಣ ಮಲ್ಲಿಕಾರ್ಜುನ ಖರ್ಗೆ, ಮನ್ಸೂರ್ ಅಲಿಖಾನ್, ಪವನ್ ಖೇರಾ ಹಾಗೂ ಪ್ರೊ. ಎಂ. ನಾಗರಾಜು ಅವಿರೋಧವಾಗಿ ಆಯ್ಕೆಯಾಗಿದ್ದಾರೆ” ಎಂದು ವಿಧಾನಸಭೆ ಕಾರ್ಯದರ್ಶಿ, ಚುನಾವಣಾಧಿಕಾರಿ ಕೆ.ಎಂ. ವಿಶಾಲಾಕ್ಷಿ ಘೋಷಿಸಿದ್ದರು.
ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕಲಬುರಗಿ ಜಿಲ್ಲೆಯಿಂದ ರಾಜಕೀಯ ಜೀವನ ಆರಂಭಿಸಿದರು. ಸುಮಾರು 40 ವರ್ಷಗಳ ಸುದೀರ್ಘ ರಾಜಕೀಯ ಅನುಭವ ಹೊಂದಿರುವ ಅವರು 9 ವಿಧಾನಸಭೆ ಹಾಗೂ 2 ಲೋಕಸಭೆ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದಾರೆ.