ದೇವಸ್ಥಾನಕ್ಕೆ ನುಗ್ಗಿ ಅರ್ಚಕನ ಮೇಲೆ ಹಲ್ಲೆ; ದೇವಿಯ ವಿಗ್ರಹಕ್ಕೂ ಹಾನಿ ಮಾಡಿದ ಕಿರಾತಕ: ವಿಡಿಯೊ ವೈರಲ್
Vandalises Temple: ಹೈದರಾಬಾದ್‌ನ ದಿಲ್‌ಸುಖ್‌ನಗರದಲ್ಲಿರುವ ಸಂತೋಷಿ ಮಾತಾ ದೇವಸ್ಥಾನದಲ್ಲಿ ವ್ಯಕ್ತಿಯೊಬ್ಬ ಅರ್ಚಕನ ಮೇಲೆ ಹಲ್ಲೆ ನಡೆಸಿ, ದೇವಿಯ ವಿಗ್ರಹಕ್ಕೆ ಕೋಲಿನಿಂದ ಹೊಡೆದ ಘಟನೆ ನಡೆದಿದ್ದು, ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿಯನ್ನು ಪೊಲೀಸರು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಹೈದರಾಬಾದ್‌ನಲ್ಲಿ ದೇವಸ್ಥಾನದ ಮೇಲೆ ದಾಳಿ ನಡೆಸಿದ ದುಷ್ಕರ್ಮಿ -
ಹೈದರಾಬಾದ್, ಅ. 3: ಹೈದರಾಬಾದ್‌ನ ದಿಲ್‌ಸುಖ್‌ನಗರ ಬಸ್ ಡಿಪೋ ಬಳಿಯ ಸಂತೋಷಿ ಮಾತಾ ದೇವಸ್ಥಾನದಲ್ಲಿ ಶುಕ್ರವಾರ ವ್ಯಕ್ತಿಯೊಬ್ಬ ಅರ್ಚಕನ ಮೇಲೆ ಹಲ್ಲೆ ನಡೆಸಿ, ವಿಗ್ರಹಕ್ಕೆ ಕೋಲುಗಳಿಂದ ಹೊಡೆದಿರುವ ಘಟನೆ ನಡೆದಿದೆ. ಈ ಘಟನೆ ದೇವಸ್ಥಾನದ ಸಿಸಿಟಿವಿ ಕ್ಯಾಮೆರಾದಲ್ಲಿ (CCTV camera) ಸೆರೆಯಾಗಿದ್ದು, ವೈರಲ್ ಆಗಿದೆ. ಘಟನೆ ಗಮನಿಸಿದ ದೇವಸ್ಥಾನದಲ್ಲಿದ್ದವರು ಮಧ್ಯ ಪ್ರವೇಶಿಸಿ ವ್ಯಕ್ತಿಯನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಈ ವೇಳೆ ಆತನಿಗೆ ಹಲ್ಲೆ ನಡೆಸಲಾಗಿದೆ ಎನ್ನಲಾಗಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಯನ್ನು ವಶಕ್ಕೆ ಪಡೆದಿರುವ ಪೊಲೀಸರು ಹೆಚ್ಚಿನ ವಿಚಾರಣೆ ನಡೆಸುತ್ತಿದ್ದಾರೆ.
ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಹಲ್ಲೆಯ ಹಿಂದಿನ ಕಾರಣವೇನು ಎಂಬುದರ ಕುರಿತು ತನಿಖೆ ಮುಂದುವರಿಸಿದ್ದಾರೆ. ಆರೋಪಿಯ ವೈದ್ಯಕೀಯ ಪರೀಕ್ಷೆ ಹಾಗೂ ಮಾನಸಿಕ ಆರೋಗ್ಯ ತಪಾಸಣೆಯನ್ನೂ ನಡೆಸಲಾಗುತ್ತಿದೆ. ಘಟನೆಗೆ ನಿಖರವಾದ ಕಾರಣ ತಕ್ಷಣಕ್ಕೆ ತಿಳಿದುಬಂದಿಲ್ಲ.
ವೈರಲ್ ವಿಡಿಯೊ ಇಲ್ಲಿದೆ:
Mohammed Ansari entered the sanctum sanctorum of Dilsukhnagar Santhoshi Matha Temple and attacked the deity with sticks. Hindu devotees then caught him and handed him over to the police.
— Akshay Akki ಅಕ್ಷಯ್🇮🇳 (@FollowAkshay1) October 2, 2026
Hope the Telangana Congress govt won’t call him mentally unstable 🤡 pic.twitter.com/S1vbYzsB6A
ಈ ಘಟನೆಗೆ ತೆಲಂಗಾಣದ ಬಿಜೆಪಿ ನಾಯಕರು ತೀವ್ರ ಪ್ರತಿಕ್ರಿಯೆ ವ್ಯಕ್ತಪಡಿಸಿದ್ದು, ದೇವಸ್ಥಾನಗಳ ಭದ್ರತೆ ವಿಚಾರದಲ್ಲಿ ರಾಜ್ಯ ಸರ್ಕಾರದ ಕ್ರಮಗಳನ್ನು ಪ್ರಶ್ನಿಸಿದ್ದಾರೆ. ತೆಲಂಗಾಣ ಬಿಜೆಪಿ ಅಧ್ಯಕ್ಷ ಎನ್. ರಾಮಚಂದರ್ ರಾವ್ ಸರ್ಕಾರದ ವಿರುದ್ಧ ಟೀಕಾಪ್ರಹಾರ ನಡೆಸಿದ್ದು, ಧಾರ್ಮಿಕ ವಿಚಾರಗಳ ನಿರ್ವಹಣೆಯಲ್ಲಿನ ಸರ್ಕಾರದ ಧೋರಣೆಯಿಂದ ಇಂತಹ ಘಟನೆಗಳಿಗೆ ಅವಕಾಶ ಸಿಗುವ ವಾತಾವರಣ ನಿರ್ಮಾಣವಾಗಿದೆ ಎಂದು ಆರೋಪಿಸಿದ್ದಾರೆ. ಧಾರ್ಮಿಕ ಸಂಸ್ಥೆಗಳ ಸುರಕ್ಷತೆ ಖಚಿತಪಡಿಸುವುದು ರಾಜ್ಯ ಸರ್ಕಾರದ ಜವಾಬ್ದಾರಿಯಾಗಿದ್ದು, ಈ ಕುರಿತು ಹೊಣೆಗಾರಿಕೆ ನಿಗದಿಪಡಿಸಬೇಕು ಎಂದು ಒತ್ತಾಯಿಸಿದ್ದಾರೆ.
ಮಹಿಳಾ ಪೊಲೀಸ್ ಸಿಬ್ಬಂದಿ ಮೇಲೆಯೇ ಹಲ್ಲೆ ನಡೆಸಿದ 22 ವರ್ಷದ ಯುವಕ; ವಿಡಿಯೊ ವೈರಲ್
ಗೋಷಾಮಹಲ್ ಶಾಸಕ ಟಿ. ರಾಜಾ ಸಿಂಗ್ ಘಟನೆ ಕುರಿತು ನಿಷ್ಪಕ್ಷಪಾತ ತನಿಖೆ ನಡೆಸಬೇಕು ಹಾಗೂ ಆರೋಪ ಸಾಬೀತಾದರೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ. ಅಲ್ಲದೆ, ತೆಲಂಗಾಣದಲ್ಲಿ ಹಿಂದೂ ದೇವಸ್ಥಾನಗಳು ಮತ್ತು ಭಕ್ತರಿಗೆ ನೀಡಲಾಗುತ್ತಿರುವ ಭದ್ರತೆ ಕುರಿತು ಮುಖ್ಯಮಂತ್ರಿ ರೇವಂತ್ ರೆಡ್ಡಿ ಅವರನ್ನು ಪ್ರಶ್ನಿಸಿದ್ದಾರೆ.