ಫೋಟೋ ಗ್ಯಾಲರಿ ಬಿಗ್​ಬಾಸ್ ಬಜೆಟ್​ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ಸಂಪಾದಕೀಯ ಉದ್ಯೋಗ

ಕರೂರು ದುರಂತ ಮಾಸುವ ಮುನ್ನವೇ ಮತ್ತೆ ಅವಘಡ; ಟಿವಿಕೆ ವಿಜಯ್‌ ರ‍್ಯಾಲಿಯಲ್ಲಿ ಓರ್ವ ಸಾವು, ಹಲವರು ಅಸ್ವಸ್ಥ

ತಮಿಳುನಾಡಿನ ಸೇಲಂನಲ್ಲಿ ಶುಕ್ರವಾರ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೊದಲು ಅವರು ಮೂರ್ಛೆ ಹೋಗಿದ್ದಾರೆ. ಬಳಿಕ ಅವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರ್ಯಾಲಿ ನಡೆಯುತ್ತಿದ್ದ ಸ್ಥಳದಲ್ಲಿ ಅತಿಯಾಗಿ ಬಿಸಿಲು ಇತ್ತು ಇದರಿಂದ ಅವರ ದೇಹ ನಿರ್ಜಲೀಕರಣಕ್ಕೆ ಒಳಗಾಯಿತು.

ಸಂಗ್ರಹ ಚಿತ್ರ

ಚೆನ್ನೈ: ತಮಿಳುನಾಡಿನ ಸೇಲಂನಲ್ಲಿ ಶುಕ್ರವಾರ ನಡೆದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಮುಖ್ಯಸ್ಥ ವಿಜಯ್ ಅವರ ರ್ಯಾಲಿಯಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ. ಮೊದಲು ಅವರು ಮೂರ್ಛೆ (Vijay's rally) ಹೋಗಿದ್ದಾರೆ. ಬಳಿಕ ಅವರು ಆಸ್ಪತ್ರೆಗೆ ಸಾಗಿಸುವಾಗ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ರ್ಯಾಲಿ ನಡೆಯುತ್ತಿದ್ದ ಸ್ಥಳದಲ್ಲಿ ಅತಿಯಾಗಿ ಬಿಸಿಲು ಇತ್ತು ಇದರಿಂದ ಅವರ ದೇಹ ನಿರ್ಜಲೀಕರಣಕ್ಕೆ ಒಳಗಾಯಿತು. ಇದೇ ಅವರ ಸಾವಿಗೆ ಕಾರಣವಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮೃತ ವ್ಯಕ್ತಿ ಹೃದಯ ಸಂಬಂಧಿ ಕಾಯಿಲೆಗಳಿಂದ ಕೂಡ ಬಳಲುತ್ತಿದ್ದರು.

ಮುಖ್ಯಸ್ಥ ವಿಜಯ್ ಅವರು ಸೇಲಂನಲ್ಲಿ ಬೃಹತ್ ಸಾರ್ವಜನಿಕ ಸಭೆಯನ್ನು ಆಯೋಜಿಸಿದ್ದರು. ತಮ್ಮ ನೆಚ್ಚಿನ ನಟ ಹಾಗೂ ನಾಯಕನ ನೋಡಲು ಲಕ್ಷಾಂತರ ಸಂಖ್ಯೆಯಲ್ಲಿ ಅಭಿಮಾನಿಗಳು ಮತ್ತು ಕಾರ್ಯಕರ್ತರು ಸೇರಿದ್ದರು. ಮಧ್ಯಾಹ್ನದ ವೇಳೆ ಬಿಸಿಲಿನ ತಾಪಮಾನ ಏರಿಕೆಯಾಗಿದ್ದರಿಂದ ಮತ್ತು ವಿಪರೀತ ಜನಸಂದಣಿಯಿಂದಾಗಿ ಉಸಿರುಗಟ್ಟುವ ವಾತಾವರಣ ನಿರ್ಮಾಣವಾಗಿತ್ತು. ಈ ಸಂದರ್ಭದಲ್ಲಿ ವ್ಯಕ್ತಿಯೊಬ್ಬರು ಕುಸಿದು ಬಿದ್ದಿದ್ದಾರೆ. ತಕ್ಷಣವೇ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ದಾರಿಯಲ್ಲೇ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.

ಗರಿಷ್ಠ ಮಿತಿ 5,000 ಆಗಿದ್ದರೂ, ಟಿವಿಕೆ ಆಯೋಜಕರು 7,000 ಕ್ಕೂ ಹೆಚ್ಚು ಜನರಿಗೆ ಸ್ಥಳಕ್ಕೆ ಪ್ರವೇಶಿಸಲು ಅವಕಾಶ ನೀಡಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಸಾವಿನ ಹಿಂದಿನ ಕಾರಣ ಖಚಿತವಾದ ನಂತರ, ಆಯೋಜಕರ ವಿರುದ್ಧ ಎಫ್‌ಐಆರ್ ದಾಖಲಿಸಲಾಗುವುದು ಎಂದು ಪೊಲೀಸ್ ಮೂಲಗಳು ತಿಳಿಸಿವೆ. ರ್ಯಾಲಿಯಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮತ್ತು ನೆರಳಿನ ವ್ಯವಸ್ಥೆ ಸಮರ್ಪಕವಾಗಿರಲಿಲ್ಲ ಎಂದು ಹಲವರು ಆರೋಪಿಸಿದ್ದಾರೆ. ಹೀಟ್‌ವೇವ್‌ನಿಂದ ಹಲವರು ಕುಸಿದು ಬಿದ್ದಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕರೂರು ಕಾಲ್ತುಳಿತ

ಕಳೆದ ಸೆಪ್ಟೆಂಬರ್‌ನಲ್ಲಿ ಕರೂರಿನಲ್ಲಿ ವಿಜಯ್‌ ರ್ಯಾಲಿಯಲ್ಲಿ ಸಂಭವಿಸಿದ ಜನಸಂದಣಿಯ ಕಾಲ್ತುಳಿತದಲ್ಲಿ 41 ಕ್ಕೂ ಹೆಚ್ಚು ಜನರು ಸಾವನ್ನಪ್ಪಿ 100ಕ್ಕೂ ಹೆಚ್ಚು ಜನರು ಗಾಯಗೊಂಡರು. ನಟ ವಿಜಯ್ ಅವರ ಆಗಮನ ವಿಳಂಬವಾದಾಗ ಅಭಿಮಾನಿಗಳ ನೂಕುನುಗ್ಗಲು ಉಂಟಾಯಿತು. ಘಟನೆಯ ತನಿಖೆಯನ್ನು ಸಿಬಿಐಗೆ ವಹಿಸಲಾಗಿದ್ದು, ವಿಜಯ್ ಅವರು ವಿಚಾರಣೆಗೆ ಹಾಜರಾಗಿದ್ದರು.

Vishakha Bhat Heggar

View all posts by this author