ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ದೆಹಲಿ ಪ್ರತಿಭಟಣೆ ವೇಳೆ ಮೋದಿ ಪರ ಘೋಷಣೆ ಕೂಗಿದ ಯುವಕನ ಮೇಲೆ ಗೂಂಡಾಗಳಿಂದ ಹಲ್ಲೆ; ವಿಡಿಯೊ ವೈರಲ್‌

INDIA Bloc Protest: ರಾಜಧಾನಿ ದೆಹಲಿಯಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಪ್ರತಿಪಕ್ಷಗಳು ನಡೆಸುತ್ತಿದ್ದ ಬೃಹತ್ ಪ್ರತಿಭಟನೆ ವೇಳೆ ಹೈಡ್ರಾಮವೊಂದು ನಡೆದಿದೆ. ಪ್ರತಿಭಟನಾ ಸ್ಥಳದಲ್ಲಿ ಯುವಕನೊಬ್ಬ ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಘೋಷಣೆ ಕೂಗಿದ್ದಕ್ಕೆ ಆಕ್ರೋಶಗೊಂಡ ಪ್ರತಿಭಟನಾಕಾರರು ಆತನ ಮೇಲೆ ಹಿಗ್ಗಾಮಗ್ಗಾ ಹಲ್ಲೆ ನಡೆಸಿದ್ದಾರೆ. ಸ್ಥಳದಲ್ಲಿದ್ದ ಪೊಲೀಸರು ಮಧ್ಯಪ್ರವೇಶಿಸಿ ಯುವಕನನ್ನು ರಕ್ಷಿಸಿದ್ದು, ಈ ಘಟನೆಯ ವಿಡಿಯೊ ಈಗ ಸಾಮಾಜಿಕ ಜಾಲತಾಣಗಳಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.

ದೆಹಲಿಯಲ್ಲಿ ನಡೆದ ಪ್ರತಿಭಟನೆ ಮತ್ತು ಹಲ್ಲೆಗೊಳಗಾದ ಯುವಕ

ಹೊಸದೆಹಲಿ, ಅ. 8: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ ಕುಮಾರ್‌ (Gyanesh Kumar) ರಾಜೀನಾಮೆ, ಎಸ್‌ಐಆರ್‌ ಪ್ರಕ್ರಿಯೆ ವಿರೋಧಿಸಿ ದೆಹಲಿಯಲ್ಲಿ ವಿರೋಧ ಪಕ್ಷಗಳು ಪ್ರತಿಭಟನೆ ನಡೆಸುತ್ತಿವೆ. ಪ್ರತಿಭಟನೆಯು 3ನೇ ದಿನಕ್ಕೆ ಕಾಲಿಟ್ಟಿದ್ದು, ನೂರಾರು ಜನರು ಭಾಗವಹಿಸಿದ್ದಾರೆ. ಈ ವೇಳೆ ಪ್ರತಿಭಟನಾಕಾರರ ಗುಂಪಿನ ಮಧ್ಯೆ ಯುವಕನೊಬ್ಬ ಇದ್ದಕ್ಕಿದ್ದಂತೆ "ನರೇಂದ್ರ ಮೋದಿ ಜಿಂದಾಬಾದ್" ಹಾಗೂ "ಮೋದಿ-ಮೋದಿ" ಎಂದು ಗಟ್ಟಿಯಾಗಿ ಕೂಗಲು ಪ್ರಾರಂಭಿಸಿದ್ದಾನೆ. ಇದರಿಂದ ಕೆರಳಿದ ಪ್ರತಿಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಯುವಕನ ಜತೆ ತೀವ್ರ ವಾಗ್ವಾದಕ್ಕಿಳಿದಿದ್ದಾರೆ. ಕೆಲವೇ ಕ್ಷಣಗಳಲ್ಲಿ ಗುಂಪು ಯುವಕನನ್ನು ಸುತ್ತುವರಿದು ಆತನ ಮೇಲೆ ಹಲ್ಲೆ ನಡೆಸಿ ಕಪಾಳಮೋಕ್ಷ ಮಾಡಿದ ದೃಶ್ಯ ವಿಡಿಯೋದಲ್ಲಿ ಸೆರೆಯಾಗಿದೆ.

ಘಟನಾ ಸ್ಥಳದಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ದೆಹಲಿ ಪೊಲೀಸರು ತಕ್ಷಣವೇ ಕಾರ್ಯಪ್ರವೃತ್ತರಾಗಿ ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಆಕ್ರೋಶಗೊಂಡಿದ್ದ ಪ್ರತಿಭಟನಾಕಾರರ ಗುಂಪಿನಿಂದ ಯುವಕನನ್ನು ಸುರಕ್ಷಿತವಾಗಿ ಬಿಡಿಸಿ, ಸ್ಥಳದಿಂದ ದೂರ ಕರೆದೊಯ್ದಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿದ್ದ ಜನರು ಹಾಗೂ ಮಾಧ್ಯಮ ಪ್ರತಿನಿಧಿಗಳು ತಮ್ಮ ಮೊಬೈಲ್‌ಗಳಲ್ಲಿ ಈ ದೃಶ್ಯಗಳನ್ನು ಸೆರೆಹಿಡಿದಿದ್ದು, ಪ್ರಸ್ತುತ ಈ ವಿಡಿಯೊ ಸಾಮಾಜಿಕ ಜಾಲತಾಣಗಳಲ್ಲಿಹರಿದಾಡುತ್ತಿದೆ.

ಮೋದಿ ಪರ ಘೋಷಣೆ ಕೂಗಿದ ಯುವಕನ ಮೇಲೆ ಹಲ್ಲೆ:



ಘಟನೆಗೆ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದ್ದು, ಭಾರತದ ಪ್ರಜೆಗಳಾದ ನಾವು ಅಂತ ಕರೆದು ದಾಳಿ ನಡೆಸಿದ್ದಾರೆ ಎಂದು ಕಾಂಗ್ರೆಸ್‌ ಅನ್ನು ದೂರಿದೆ. ಈ ಘಟನೆಯ ವಿಡಿಯೊವನ್ನು ತಮ್ಮ ಎಕ್ಸ್ ಖಾತೆಯಲ್ಲಿ ಹಂಚಿಕೊಂಡಿರುವ ಬಿಜೆಪಿ ವಕ್ತಾರ ಪ್ರದೀಪ್ ಭಂಡಾರಿ, ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

''ಕಾಂಗ್ರೆಸ್ ಕಾರ್ಯಕರ್ತರಿಗೆ ನಾಚಿಕೆಯಾಗಬೇಕು. ಭಾರತದ ಸಾಮಾನ್ಯ ಪ್ರಜೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಪರವಾಗಿ ಘೋಷಣೆ ಕೂಗಿದ್ದಕ್ಕೆ ಕಾಂಗ್ರೆಸ್ ಕಾರ್ಯಕರ್ತರು ಆತನನ್ನು ಸುತ್ತುವರಿದು ಹಿಗ್ಗಾಮಗ್ಗಾ ಹೊಡೆದಿದ್ದಾರೆ'' ಎಂದು ಪ್ರದೀಪ್ ಭಂಡಾರಿ ಬರೆದುಕೊಂಡಿದ್ದಾರೆ.

ರಾಷ್ಟ್ರಪತಿ ಭೇಟಿಗೆ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ, ಮಮತಾ ಬ್ಯಾನರ್ಜಿ ಪ್ಲ್ಯಾನ್‌

ಆರೋಪಿಗಳ ವಿರುದ್ಧ 3 ಎಫ್‌ಐಆರ್‌ ದಾಖಲು

ಪ್ರತಿಭಟನೆಯನ್ನು ಹಾದಿತಪ್ಪಿಸಲು ಮತ್ತು ಅನಗತ್ಯ ಪ್ರಚೋದನೆ ಸೃಷ್ಟಿಸಲು ಈ ಯುವಕ ಯೋಜನೆ ರೂಪಿಸಿ ಬಂದಿದ್ದ ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ. ಬುಧವಾರ (ಅಕ್ಟೋಬರ್‌ 7) ನಡೆದ ಈ ಪ್ರತಿಭಟನೆಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಗುರುವಾರ ಮೂರು ಪ್ರತ್ಯೇಕ ಎಫ್‌ಐಆರ್ ಗಳನ್ನು ದಾಖಲಿಸಿದ್ದು, ಇನ್ನೂ ಹೆಚ್ಚಿನ ಪ್ರಕರಣಗಳನ್ನು ದಾಖಲಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಪೊಲೀಸ್ ಸಿಬ್ಬಂದಿಯ ಮೇಲೆ ಹಲ್ಲೆ, ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ್ದು, ಪೊಲೀಸರ ಜತೆ ನೂಕಾಟ-ತಳ್ಳಾಟ ಹಾಗೂ ದುರ್ವರ್ತನೆಗೆ ಸಂಬಂಧಿಸಿದ ವಿವಿಧ ಕಾಯ್ದೆಗಳಡಿ ಈ ಎಫ್‌ಐಆರ್‌ಗಳನ್ನು ದಾಖಲಿಸಲಾಗಿದೆ. ದೆಹಲಿ ಪೊಲೀಸರು ನೀಡಿರುವ ಮಾಹಿತಿಯ ಪ್ರಕಾರ, ಇದುವರೆಗೆ ದಾಖಲಾಗಿರುವ ಎಫ್‌ಐಆರ್‌ಗಳ ವಿವರಗಳಲ್ಲಿ ಕಾಂಗ್ರೆಸ್ ನಾಯಕರಾದ ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಹೆಸರೂ ಸೇರಿದೆ.

ದೇಶದ ಸುದ್ದಿ ಓದಲು ಇಲ್ಲಿ ಕ್ಲಿಕ್‌ ಮಾಡಿ.

ʼಪ್ರವಾಸಿ ಪ್ರಪಂಚʼ ವೆಬ್‌ಸೈಟ್‌ಗೆ ಭೇಟಿ ನೀಡಲು ಇಲ್ಲಿ ಕ್ಲಿಕ್‌ ಮಾಡಿ.

Ramesh Ballamoole

View all posts by this author