ಅಮೃತಸರ: ಪಂಜಾಬ್‌ನ ಅಮೃತಸರದಲ್ಲಿ ಭಾರೀ ಅನಾಹುತವೊಂದು ಅದೃಷ್ಟವಶಾತ್ ತಪ್ಪಿದೆ. ನಗರದಲ್ಲಿ ಬಾಂಬ್ ಸ್ಫೋಟಕ್ಕೆ ಯತ್ನಿಸಿದ ವ್ಯಕ್ತಿಯೊಬ್ಬನ ಕೈಯಲ್ಲೇ ಅದು ಸ್ಫೋಟ(Bomb Blast Attempt)ಗೊಂಡಿದೆ. ಬಾಂಬ್ ಸ್ಫೋಟಕ್ಕೆ ಯತ್ನಿಸಿದ ವ್ಯಕ್ತಿ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದು, ಆತನನ್ನು ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ದಾಖಲಿಸಲಾಗಿದೆ.
#WATCH | Amritsar, Punjab | An explosion occurred in the area around Naushera village under the Kambo police station limits in the Amritsar rural district.
— ANI (@ANI) May 27, 2025
SSP Amritsar Rural, Maninder Singh, says, "We received information in the morning that there was an explosion here. The… pic.twitter.com/zzKRU7nu9e
ಸ್ಫೋಟದ ಶಬ್ದ ಕೇಳಿ ಸುತ್ತಮುತ್ತಲಿನ ಜನರು ಸ್ಥಳಕ್ಕೆ ಬಂದು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಪೊಲೀಸರು ಸ್ಥಳಕ್ಕೆ ತಲುಪಿ ತನಿಖೆ ಆರಂಭಿಸಿದರು.ಈ ಘಟನೆ ನಡೆದ ಪ್ರದೇಶವು ಅಮೃತಸರ ಗ್ರಾಮೀಣ ಪೊಲೀಸರ ವ್ಯಾಪ್ತಿಗೆ ಬರುತ್ತದೆ. ಈ ವಿಷಯದ ಬಗ್ಗೆ ಪೊಲೀಸರು ಶೀಘ್ರದಲ್ಲೇ ಹೇಳಿಕೆ ನೀಡಲಿದ್ದಾರೆ.