Maoists Killed: ಛತ್ತೀಸ್‌ಗಢದಲ್ಲಿ 8 ಮಾವೋವಾದಿಗಳ ಹತ್ಯೆ
ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ 8 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ. ಸದ್ಯ ಮೃತ ಮಾವೋವಾದಿಗಳ ಗುರುತು ಪತ್ತೆಯಾಗಿಲ್ಲ. ಅವರ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.

ಸಾಂದರ್ಭಿಕ ಚಿತ್ರ.

ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ (Bijapur) ಜಿಲ್ಲೆಯಲ್ಲಿ ನಡೆದ ಎನ್‌ಕೌಂಟರ್ (Encounter)ನಲ್ಲಿ ಭದ್ರತಾ ಪಡೆಯ ಸಿಬ್ಬಂದಿ (Security forces) 8 ಮಾವೋವಾದಿಗಳನ್ನು ಹೊಡೆದುರುಳಿಸಿದ್ದಾರೆ (Maoists Killed). ಸ್ಥಳದಿಂದ ಐಎನ್‌ಎಸ್‌ಎಎಸ್ (INSAS) ರೈಫಲ್ಸ್ ಮತ್ತು ಬ್ಯಾರೆಲ್ ಗ್ರನೇಡ್ ಲಾಂಚರ್ (BGL)ನಂತಹ ಸ್ವಯಂಚಾಲಿತ ರೈಫಲ್ಸ್ ಸೇರಿದಂತೆ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಮೃತ ಮಾವೋವಾದಿಗಳ ಗುರುತು ಪತ್ತೆಯಾಗಿಲ್ಲ. ಅವರ ಪತ್ತೆ ಹಚ್ಚಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದ್ದಾರೆ.
ʼʼಮಾವೋವಾದಿಗಳ ಮೃತದೇಹವನ್ನು ಶನಿವಾರ (ಫೆ. 1) ರಾತ್ರಿ ಜಿಲ್ಲಾ ಕೇಂದ್ರಕ್ಕೆ ರವಾನಿಸಲಾಗುತ್ತದೆ. ಬಳಿಕ ಅವರ ಗುರುತನ್ನು ಪತ್ತೆ ಹಚ್ಚುವ ಕಾರ್ಯ ನಡೆಯಲಿದೆʼʼ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
Bijapur, Chhattisgarh: Eight Maoists were killed in an exchange of fire (EoF) between security forces (DRG, STF, CRPF) and CPI (Maoist) of the West Bastar Division. The encounter took place in the forest near Korcholi, Bijapur district pic.twitter.com/Fhkb3zhUpt
— IANS (@ians_india) February 1, 2025
ʼʼಶನಿವಾರ ಬೆಳಗ್ಗೆ 8.30ಕ್ಕೆ ಎನ್‌ಕೌಂಟರ್ ಆರಂಭವಾಯಿತು. ಗಂಗಲೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಅರಣ್ಯ ಪ್ರದೇಶದಲ್ಲಿ ಜಂಟಿ ಭದ್ರತಾ ಪಡೆಗಳು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಗುಂಡಿನ ಚಕಮಕಿ ನಡೆಯಿತುʼʼ ಎಂದು ಪೊಲೀಸರು ಘಟನೆಯನ್ನು ವಿವರಿಸಿದ್ದಾರೆ.
ಬಸ್ತಾರ್ ರೇಂಜ್‌ನ ಪೊಲೀಸ್ ಇನ್ಸ್‌ಪೆಕ್ಟರ್ ಸುಂದರ್‌ರಾಜ್ ಪಿ. ಈ ಬಗ್ಗೆ ಮಾತನಾಡಿ, ʼʼಜಿಲ್ಲಾ ಮೀಸಲು ಪಡೆ (District Reserve Guard-DRG), ವಿಶೇಷ ಕಾರ್ಯಪಡೆ (Special Task Force-STF), ಕೇಂದ್ರ ಮೀಸಲು ಪೊಲೀಸ್ ಪಡೆ (Central Reserve Police Force-CRPF) ಮತ್ತು ಕೋಬ್ರಾ (Commando Battalion for Resolute Action-CoBRA) ಪಡೆಯ ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದರು. ಮಾವೋವಾದಿಗಳ ಪಶ್ಚಿಮ ಬಸ್ತಾರ್ ವಿಭಾಗದಲ್ಲಿ ಬೀಡು ಬಿಟ್ಟಿರುವ ಬಗ್ಗೆ ಗುಪ್ತಚರ ಮಾಹಿತಿಯ ಆಧಾರದ ಮೇಲೆ ಶುಕ್ರವಾರ (ಜ. 31) ಕಾರ್ಯಾಚರಣೆಯನ್ನು ಪ್ರಾರಂಭಿಸಲಾಯಿತು" ಎಂದು ಅವರು ಹೇಳಿದ್ದಾರೆ.
ʼʼಇದುವರೆಗೆ 8 ವಾಮೋವಾದಿಗಳ ಮೃತದೇಹ ಪತ್ತೆಯಾಗಿದೆ. ಈ ಸಂಖ್ಯೆ ಏರಿಕೆಯಾಗುವ ಸಾಧ್ಯತೆ ಇದೆ. ಗುಂಡಿನ ದಾಳಿಯಿಂದ ಗಾಯಗೊಂಡ ಹಲವು ಮಾವೋವಾದಿಗಳು ಕಾಡಿನೊಳಗೆ ಓಡಿ ಹೋಗಿದ್ದಾರೆ. ಕಾಡಿನಲ್ಲಿ ಶೋಧ ಕಾರ್ಯಾಚರಣೆ ನಡೆಯುತ್ತಿದೆʼʼ ಎಂದು ಅವರು ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ: Maoists Killed: ಛತ್ತೀಸ್‌ಗಢದಲ್ಲಿ ಭದ್ರತಾ ಪಡೆಯ ಭರ್ಜರಿ ಬೇಟೆ; ಮೂವರು ಮಾವೋವಾದಿಗಳ ಹತ್ಯೆ
ಮಾಮೋವಾದಿಗಳ ನಿರ್ಮೂಲನೆಯ ಪಣ
ಛತ್ತೀಸ್‌ಗಢದ ಗೃಹ ಸಚಿವವ ವಿಜಯ್ ಶರ್ಮಾ ಈ ಬಗ್ಗೆ ಮಾತನಾಡಿ, ʼʼರಾಜ್ಯದಿಂದ ಮಾಮೋವಾದಿಗಳನ್ನು ನಿರ್ಮೂಲನೆಗೊಳಿಸುವ ಕಾರ್ಯಾಚರಣೆ ನಡೆಯುತ್ತಿದೆ. ಮಾವೋವಾದಿಗಳು ಕಾಡಿನಿಂದ ಹೊರಬಂದು ಶರಣಾಗಬೇಕುʼʼ ಎಂದು ಅವರು ಕರೆ ನೀಡಿದ್ದಾರೆ. ಇಂದಿನ ಕಾರ್ಯಾಚರಣೆಯಲ್ಲಿ ಸುಮಾರು 600 ಮಂದಿ ಭದ್ರತಾ ಪಡೆಯ ಸಿಬ್ಬಂದಿ ಪಾಲ್ಗೊಂಡಿದ್ದಾರೆ. ಈ ವರ್ಷ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ ಇದುವರೆಗೆ ಸುಮಾರು 50 ಮಾವೋವಾದಿಗಳು ಹತರಾಗಿದ್ದಾರೆ. ಜ. 20ರಂದು ಒಡಿಶಾ ಗಡಿಯ ಅರಣ್ಯದಲ್ಲಿ ನಡೆದ ಎನ್‌ಕೌಂಟರ್‌ನಲ್ಲಿ 16 ಮಾವೋವಾದಿಗಳನ್ನು ಹೊಡೆದುರುಳಿಸಲಾಗಿತ್ತು. ಇನ್ನು ಜ. 16ರಂದು ಬಿಜಾಪುರ ಜಿಲ್ಲೆಯಲ್ಲಿ 12 ಮಾವೋವಾದಿಗಳನ್ನು ಹತ್ಯೆ ಮಾಡಲಾಗಿತ್ತು.
ಕಳೆದ ವರ್ಷ ರಾಜ್ಯದಲ್ಲಿ 219 ಮಾವೋವಾದಿಗಳನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದವು.