Bomb Blast: ಪಾಕಿಸ್ತಾನದ ಸೇನಾ ಕಚೇರಿ ಬಳಿಯೇ ಆತ್ಮಾಹುತಿ ಬಾಂಬ್ ಸ್ಫೋಟ; 10 ಮಂದಿ ಸಾವು, ಹಲವರಿಗೆ ಗಾಯ, ವಿಡಿಯೋ ನೋಡಿ
ಪಾಕಿಸ್ತಾನದ ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದು, 32 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ (ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ) ಪ್ರಧಾನ ಕಚೇರಿಯ ಮೂಲೆಯಲ್ಲಿ ಬಾಂಬ್ ಸ್ಫೋಟಗೊಂಡಿದೆ.

-

ಪಾಕಿಸ್ತಾನದ (Pakistan) ಬಲೂಚಿಸ್ತಾನ್ ಪ್ರಾಂತ್ಯದ ಕ್ವೆಟ್ಟಾದಲ್ಲಿ ಸಂಭವಿಸಿದ ಪ್ರಬಲ ಸ್ಫೋಟ ಸಂಭವಿಸಿದೆ. ಸ್ಫೋಟದಲ್ಲಿ ಕನಿಷ್ಠ ಹತ್ತು ಜನರು ಸಾವನ್ನಪ್ಪಿದ್ದು, 32 ಜನರು ಗಾಯಗೊಂಡಿದ್ದಾರೆ. ಮಂಗಳವಾರ ಮಧ್ಯಾಹ್ನ ಕ್ವೆಟ್ಟಾದ (Bomb Blast) ಜರ್ಘುನ್ ರಸ್ತೆಯಲ್ಲಿರುವ ಎಫ್‌ಸಿ (ಫ್ರಾಂಟಿಯರ್ ಕಾನ್‌ಸ್ಟಾಬ್ಯುಲರಿ) ಪ್ರಧಾನ ಕಚೇರಿಯ ಮೂಲೆಯಲ್ಲಿ ಬಾಂಬ್ ಸ್ಫೋಟಗೊಂಡಿದೆ. ಪಾಕಿಸ್ತಾನಿ ಮಾಧ್ಯಮ ವರದಿಗಳ ಪ್ರಕಾರ, ಸ್ಫೋಟದ ಸದ್ದು ಎಷ್ಟು ಪ್ರಬಲವಾಗಿತ್ತೆಂದರೆ ಅದು ಮಾಡೆಲ್ ಟೌನ್ ಮತ್ತು ಪಕ್ಕದ ಪ್ರದೇಶಗಳಲ್ಲಿ ಕೇಳಿಬಂತು ಮತ್ತು ಹತ್ತಿರದ ಮನೆಗಳು ಮತ್ತು ಕಟ್ಟಡಗಳ ಕಿಟಕಿಗಳು ಪುಡಿಯಾಗಿವೆ.
ಮೂಲಗಳ ಪ್ರಕಾರ, ಪಾಕಿಸ್ತಾನ ಭದ್ರತಾ ಪಡೆಗಳು ದಾಳಿಯನ್ನು ವಿಫಲಗೊಳಿಸಿದ್ದು, ಕ್ವೆಟ್ಟಾದಲ್ಲಿರುವ ಫ್ರಾಂಟಿಯರ್ ಕಾರ್ಪ್ಸ್ ಪ್ರಧಾನ ಕಚೇರಿಗೆ ನುಸುಳಲು ಯತ್ನಿಸಿದ ನಾಲ್ವರು ಉಗ್ರರನ್ನು ಕೊಂದಿವೆ. ಸ್ವಲ್ಪ ಸಮಯದ ನಂತರ, ಆ ಪ್ರದೇಶದಲ್ಲಿ ಗುಂಡಿನ ಸದ್ದು ಕೂಡ ಕೇಳಿಬಂದಿದ್ದು, ನಿವಾಸಿಗಳಲ್ಲಿ ಭೀತಿ ಮತ್ತು ಭಯ ಮೂಡಿದೆ. ರಕ್ಷಣಾ ತಂಡಗಳು ಮತ್ತು ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ತಲುಪಿದ್ದು, ಶೋಧ ಕಾರ್ಯಾಚರಣೆಗಾಗಿ ಪ್ರದೇಶವನ್ನು ಸುತ್ತುವರೆದಿದೆ. ಜನನಿಬಿಡ ರಸ್ತೆಯಲ್ಲಿ ಪ್ರಬಲ ಸ್ಫೋಟ ಸಂಭವಿಸಿದ ಕ್ಷಣವನ್ನು ತೋರಿಸುವ ಸಿಸಿಟಿವಿ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದೆ. ಆತ್ಮಹತ್ಯಾ ಬಾಂಬರ್ ತನ್ನನ್ನು ತಾನು ಸ್ಫೋಟಿಸಿಕೊಂಡಿದ್ದಾನೆ ಎಂದು ತಿಳಿದುಬಂದಿದೆ.
🚨 BIG BREAKING
— Megh Updates 🚨™ (@MeghUpdates) September 30, 2025
Quetta, Pakistan: A powerful BLAST rocked the Frontier Corps HQ — HEAVY FIRING still ongoing.
At least 8 KILLED, including 4 Pakistan FC personnel.
Reports say 4–5 heavily armed fighters with advanced gear BREACHED security and ENTERED the HQ. pic.twitter.com/ipItq9RbHn
ಭಾರಿ ಸಾವುನೋವುಗಳ ಭೀತಿಯಿಂದಾಗಿ, ನಗರದಾದ್ಯಂತ ಆಸ್ಪತ್ರೆಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಲಾಗಿದೆ. ಸ್ಫೋಟದ ಸ್ವರೂಪವನ್ನು ನಿರ್ಧರಿಸಲು ಅಧಿಕಾರಿಗಳು ತನಿಖೆಯನ್ನು ಸಹ ಪ್ರಾರಂಭಿಸಿದ್ದಾರೆ. ಬಲೂಚಿಸ್ತಾನ ಆರೋಗ್ಯ ಸಚಿವ ಬಖ್ತ್ ಮುಹಮ್ಮದ್ ಕಾಕರ್ ಅವರು ಮಾತನಾಡಿ, ದಾಳಿಯಲ್ಲಿ 10 ಜನರು ಸಾವನ್ನಪ್ಪಿದ್ದಾರೆ, ಇದರಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಇತರ ಐದು ಜನರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದರು. ಮೂವತ್ತೆರಡು ಗಾಯಾಳುಗಳನ್ನು ಸಿವಿಲ್ ಆಸ್ಪತ್ರೆ ಮತ್ತು ಆಘಾತ ಕೇಂದ್ರಕ್ಕೆ ಕರೆದೊಯ್ಯಲಾಗಿದೆ" ಎಂದು ಕಾಕರ್ ಹೇಳಿದರು. ಗುಂಡಿನ ಚಕಮಕಿ ಮತ್ತು ಸ್ಫೋಟದಲ್ಲಿ ಇಬ್ಬರು ಎಫ್‌ಸಿ ಸಿಬ್ಬಂದಿ ಕೂಡ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ.