ಫೋಟೋ ಗ್ಯಾಲರಿ ಬಿಗ್​ಬಾಸ್ T20 ವಿಶ್ವಕಪ್​ ವಿದೇಶ ವಿಶ್ವವಾಣಿ ಪ್ರಾಪರ್ಟಿ ಫ್ಯಾಷನ್​ ಧಾರ್ಮಿಕ ಕ್ರೈಂ ಪ್ರವಾಸಿ ಪ್ರಪಂಚ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಗೋವಾ ನೈಟ್ ಕ್ಲಬ್‌ನಲ್ಲಿ ಭೀಕರ ಅಗ್ನಿ ದುರಂತ: ಸಾವು-ನೋವು ಹೆಚ್ಚಾಗಲು ಕಾರಣ ಬಹಿರಂಗ

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಜನಪ್ರಿಯ ನೈಟ್ ಕ್ಲಬ್‌ನಲ್ಲಿ ತಡರಾತ್ರಿ 1 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದ್ದು ಸ್ಫೋಟದ ತೀವ್ರತೆಗೆ ಕೆಲವೇ ಸಮಯದಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಸಿಗರು ಡ್ಯಾನ್ಸ್‌ ಮಾಡುತ್ತಿದ್ದ ಕ್ಲಬ್‌ನ ಮೊದಲ ಮಹಡಿಯಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ.

ಗೋವಾ ನೈಟ್‌ ಕ್ಲಬ್ ಬೆಂಕಿ ದುರಂತ:  ಸಾವಿನ ಸಂಖ್ಯೆ ಹೆಚ್ಚಾಗಿದ್ದು ಹೇಗೆ?

ಗೋವಾ ನೈಟ್‌ ಕ್ಲಬ್ ಬೆಂಕಿ ದುರಂತ -

Profile
Pushpa Kumari Dec 7, 2025 5:28 PM

ಗೋವಾ, ಡಿ. 7: ಉತ್ತರ ಗೋವಾದ ಅರ್‌ ಪೋರಾದಲ್ಲಿ ಭೀಕರ ಅಗ್ನಿ ದುರಂತವೊಂದು ಸಂಭವಿಸಿದೆ. ನೈಟ್​​ ಕ್ಲಬ್‌ನಲ್ಲಿ (Goa Night club Fire) ಬೆಂಕಿ ಕಾಣಿಸಿಕೊಂಡು 25 ಮಂದಿ ದುರ್ಮರಣ ಹೊಂದಿದ್ದು, ಆರು ಮಂದಿ ಗಾಯಗೊಂಡಿದ್ದಾರೆ. ಈ ಘಟನೆ ದೇಶವನ್ನೇ ಬೆಚ್ಚಿ ಬೀಳಿಸಿದ್ದು, ರಾಜ್ಯ ಸರ್ಕಾರ ನ್ಯಾಯಾಂಗ ತನಿಖೆಗೆ ಆದೇಶಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ರಾತ್ರಿ 100ಕ್ಕೂ ಹೆಚ್ಚು ಜನರಿದ್ದ ಡ್ಯಾನ್ಸ್ ಫ್ಲೋರ್‌ನಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದೆ‌.

ಉತ್ತರ ಗೋವಾದ ಅರ್ಪೋರಾದ ರೋಮಿಯೋ ಲೇನ್‌ನಲ್ಲಿರುವ ಜನಪ್ರಿ ನೈಟ್ ಕ್ಲಬ್‌ ಇದಾಗಿದ್ದು, ತಡ ರಾತ್ರಿ 1 ಗಂಟೆಗೆ ಅಗ್ನಿ ಅವಘಡ ಸಂಭವಿಸಿದೆ. ಅಡುಗೆ ಮನೆಯ ಬಳಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಅವಘಡ ಸಂಭವಿಸಿದ್ದು, ಕೆಲವೇ ಸಮಯದಲ್ಲಿ ಇಡೀ ಕಟ್ಟಡಕ್ಕೆ ಬೆಂಕಿ ವ್ಯಾಪಿಸಿದೆ. ಪ್ರತ್ಯಕ್ಷದರ್ಶಿಗಳ ಪ್ರಕಾರ, ಪ್ರವಾಸಿಗರು ಡ್ಯಾನ್ಸ್‌ ಮಾಡುತ್ತಿದ್ದ ಕ್ಲಬ್‌ನ ಮೊದಲ ಮಹಡಿಯಲ್ಲಿಯೇ ಬೆಂಕಿ ಕಾಣಿಸಿಕೊಂಡಿದೆ. ಹೆಚ್ಚಿನ ಸಾವುಗಳು ಸುಟ್ಟ ಗಾಯಗಳಿಂದಲ್ಲ ಬದಲಾಗಿ ಉಸಿರುಗಟ್ಟುವಿಕೆಯಿಂದ ಸಂಭವಿಸಿದೆ ಎಂದು ಪ್ರಾಥಮಿಕ ತನಿಖಾ ವರದಿ ಬಹಿರಂಗಪಡಿಸಿವೆ.

ಗೋವಾ ನೈಟ್ ಕ್ಲಬ್‌ನಲ್ಲಿ ಅಗ್ನಿ ಅವಘಡ: ಮ್ಯಾಜಿಸ್ಟ್ರೇಟ್ ತನಿಖೆಗೆ ಆದೇಶ ನೀಡಿದ ಸಿಎಂ

ಬೆಂಕಿ ಹತ್ತಿ ಕೊಳ್ಳುತ್ತಿದ್ದಂತೆ ಆತಂಕಗೊಂಡ ಜನರು ಓಡಿ ಹೋಗುವ ಪ್ರಯತ್ನಿಸಿದ್ದಾರೆ. ಈ ವೇಳೆ ಕೆಲವರು ಕೆಳಮಹಡಿಯ ಅಡುಗೆಮನೆ ಪ್ರದೇಶಕ್ಕೆ ಹೋಗಿ ಅಲ್ಲಿ ಸಿಕ್ಕಿಬಿದ್ದಿದ್ದಾರೆ. ಅಲ್ಲಿ ದಟ್ಟವಾದ ಹೊಗೆ ಆವರಿಸಿದ್ದರಿಂದ ಬಹುತೇಕ ಜನರು ಉಸಿರುಗಟ್ಟಿ ಸಾವನ್ನಪ್ಪಿದ್ದಾರೆ. ಮೃತರ ಪೈಕಿ 14 ಜನರು ಕ್ಲಬ್‌ನ ಸಿಬ್ಬಂದಿ ಸೇರಿದ್ದು, ನಾಲ್ವರು ಪ್ರವಾಸಿಗರು ಎಂಬುದು ದೃಢಪಟ್ಟಿದೆ. ಉಳಿದ ಏಳು ಜನರ ಗುರುತು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ. ಅಗ್ನಿ ಸುರಕ್ಷತಾ ನಿಯಮಗಳನ್ನು ಉಲ್ಲಂಘಿಸಿರುವುದು ಪ್ರಾಥಮಿಕ ತನಿಖೆಯಲ್ಲಿ ಬೆಳಕಿಗೆ ಬಂದಿದೆ.ಈ ಹಿನ್ನೆಲೆಯಲ್ಲಿ ಕ್ಲಬ್ ಪ್ರಧಾನ ವ್ಯವಸ್ಥಾಪಕನನ್ನು ಬಂಧಿಸಲಾಗಿದ್ದು, ಮಾಲೀಕನ ವಿರುದ್ಧವೂ ಪೊಲೀಸರು ವಾರಂಟ್‌ ಜಾರಿಗೊಳಿಸಿದ್ದಾರೆ.

ಪೊಲೀಸ್ ಮಾಹಿತಿ ಪ್ರಕಾರ, ನೈಟ್‌ಕ್ಲಬ್‌ನ ಒಳಾಂಗಣವು ಸುಲಭವಾಗಿ ಬೆಂಕಿ ಹತ್ತುವ ವಸ್ತುಗಳಿಂದ ನಿರ್ಮಿತವಾಗಿತ್ತು ಮತ್ತು ಹೊರಹೋಗಲು ಕೇವಲ ಒಂದೇ ಕಿರಿದಾದ ದ್ವಾರ ಇತ್ತು. ಇದು ಸಾವಿನ ಸಂಖ್ಯೆ ಹೆಚ್ಚಲು ಪ್ರಮುಖ ಕಾರಣವಾಗಿದೆ.