ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಅಂಬೋಲಿ ಫಾಲ್ಸ್‌ ಬಳಿ ಭಾರೀ ಭೂಕುಸಿತ; ಕರ್ನಾಟಕ–ಮಹಾರಾಷ್ಟ್ರ ಗಡಿ ಮಾರ್ಗದಲ್ಲಿ ಟ್ರಾಫಿಕ್‌

ಮಹಾರಾಷ್ಟ್ರ ಹಾಗೂ ಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕಕ್ಕೆ ಹೊಂದಿಕೊಂಡಿರುವ ಅಂಬೋಲಿ ಫಾಲ್ಸ್ ಬಳಿ ಭಾರೀ ಪ್ರಮಾಣದ ಗುಡ್ಡ ಕುಸಿತವಾಗಿದೆ. ಮಹಾರಾಷ್ಟ್ರದ ಸಾವಂತವಾಡಿ ತಾಲೂಕಿನಲ್ಲಿರುವ ಅಂಬೋಲಿ ಫಾಲ್ಸ್ ಬಳಿ ಘಟನೆ ನಡೆದಿದೆ. ತಡರಾತ್ರಿ ಗುಡ್ಡದ ಮೇಲಿಂದ ಬೃಹತ್ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ.

ಅಂಬೋಲಿ ಫಾಲ್ಸ್‌ ಬಳಿ ಭಾರೀ ಭೂಕುಸಿತ

ಸಂಗ್ರಹ ಚಿತ್ರ -

Vishakha Bhat Heggar
Vishakha Bhat Heggar Jul 8, 2026 11:16 AM

ಮುಂಬೈ: ಮಹಾರಾಷ್ಟ್ರ (Maharashtra) ಹಾಗೂ ಗಡಿ ಭಾಗದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರ್ನಾಟಕಕ್ಕೆ ಹೊಂದಿಕೊಂಡಿರುವ ಅಂಬೋಲಿ ಫಾಲ್ಸ್ (Amboli Falls) ಬಳಿ ಭಾರೀ ಪ್ರಮಾಣದ ಗುಡ್ಡ ಕುಸಿತವಾಗಿದೆ. ಮಹಾರಾಷ್ಟ್ರದ ಸಾವಂತವಾಡಿ ತಾಲೂಕಿನಲ್ಲಿರುವ ಅಂಬೋಲಿ ಫಾಲ್ಸ್ ಬಳಿ ಘಟನೆ ನಡೆದಿದೆ. ತಡರಾತ್ರಿ ಗುಡ್ಡದ ಮೇಲಿಂದ ಬೃಹತ್ ಬಂಡೆಗಳು ರಸ್ತೆಗೆ ಉರುಳಿ ಬಿದ್ದಿದೆ. ರಸ್ತೆ ಮೇಲೆಯೇ ನಾಲ್ಕು ಬೃಹತ್ ಬಂಡೆಗಳು ಉರುಳಿ ಬಿದ್ದಿದೆ.

ಘಟನೆಯ ಪರಿಣಾಮ ಮಧ್ಯರಾತ್ರಿ ಕೆಲಹೊತ್ತು ಬೆಳಗಾವಿ-ಸಿಂಧದುರ್ಗ ಸಂಚಾರ ತಾತ್ಕಾಲಿಕ ಸ್ಥಗಿತಗೊಂಡಿತ್ತು. ಮಧ್ಯರಾತ್ರಿಯಿಂದಲೇ ಚಂದಗಡ ಅಗ್ನಿಶಾಮಕ ಸಿಬ್ಬಂದಿ ಬಂಡೆಗಳ ತೆರವು ಕಾರ್ಯಾಚರಣೆಯಲ್ಲಿ ತೊಡಗಿದ್ದಾರೆ. ತಡರಾತ್ರಿ ವೇಳೆ ಸಂಭವಿಸಿದ್ದರಿಂದ ಸಂಚಾರ ದಟ್ಟಣೆ ಕಡಿಮೆಯಾಗಿದ್ದು, ಯಾವುದೇ ಪ್ರಾಣಹಾನಿ ಅಥವಾ ವಾಹನಗಳಿಗೆ ಹಾನಿಯಾಗಿಲ್ಲ. ಸಿಂಧುದುರ್ಗ ಜಿಲ್ಲಾ ಉಸ್ತುವಾರಿ ಸಚಿವ ನಿತೇಶ್ ರಾಣೆ ಅವರ ಸೂಚನೆಯಂತೆ ಈ ಕಾರ್ಯಾಚರಣೆ ಕೈಗೊಳ್ಳಲಾಯಿತು. ಬೃಹತ್ ಬಂಡೆಗಳನ್ನು ತೆರವುಗೊಳಿಸಿ ಸಂಪರ್ಕವನ್ನು ಪುನಃ ಸ್ಥಾಪಿಸಲು ಭಾರೀ ಯಂತ್ರೋಪಕರಣಗಳನ್ನು ಬಳಸಲಾಯಿತು.

ಹಲವು ಗಂಟೆಗಳ ಕಾರ್ಯಾಚರಣೆಯ ಬಳಿಕ ಮಹಾರಾಷ್ಟ್ರ ಪೊಲೀಸರು ಕಟ್ಟುನಿಟ್ಟಿನ ನಿಯಂತ್ರಣದೊಂದಿಗೆ ಏಕಮುಖ ಸಂಚಾರಕ್ಕೆ ಅವಕಾಶ ನೀಡಿ ರಸ್ತೆಯನ್ನು ಭಾಗಶಃ ತೆರೆಯಲಾಗಿದೆ. ಅಂಬೋಲಿ ಜಲಪಾತವು ಕರ್ನಾಟಕ, ಮಹಾರಾಷ್ಟ್ರ ಹಾಗೂ ಗೋವಾದ ಪ್ರವಾಸಿಗರ ಪಾಲಿನ ಅತ್ಯಂತ ಜನಪ್ರಿಯ ಮಳೆಗಾಲ ಪ್ರವಾಸಿ ತಾಣವಾಗಿದೆ. ಕರ್ನಾಟಕದ ಹಲವು ಜಲಪಾತಗಳಲ್ಲಿ ಸುರಕ್ಷತಾ ಕಾರಣಗಳಿಂದ ನಿರ್ಬಂಧ ಹೇರಲಾಗಿರುವ ಹಿನ್ನೆಲೆಯಲ್ಲಿ, ವಾರಾಂತ್ಯಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು ಪರ್ಯಾಯ ತಾಣವಾಗಿ ಅಂಬೋಲಿಯನ್ನು ಆಯ್ಕೆ ಮಾಡುತ್ತಿದ್ದಾರೆ.

ಹವಾಮಾನ ಪರಿಸ್ಥಿತಿಯನ್ನು ಗಮನಿಸಿ ಹಾಗೂ ಪೊಲೀಸ್ ಇಲಾಖೆಯ ಸೂಚನೆಗಳನ್ನು ಪಾಲಿಸಿದ ನಂತರವೇ ಈ ಪ್ರದೇಶಕ್ಕೆ ಪ್ರಯಾಣಿಸುವಂತೆ ಅಧಿಕಾರಿಗಳು ಪ್ರವಾಸಿಗರಿಗೆ ಮನವಿ ಮಾಡಿದ್ದಾರೆ.

ಜೋಗ ಜಲಪಾತ ವೀಕ್ಷಣೆಗೆ ವಾಯವ್ಯ ಸಾರಿಗೆ ಸಂಸ್ಥೆಯಿಂದ ವಿಶೇಷ ಬಸ್

ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಜೋಗ ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರ ಅನುಕೂಲಕ್ಕಾಗಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಿಂದ ವಾರಾಂತ್ಯ ಹಾಗೂ ಸಾರ್ವಜನಿಕ ರಜಾ ದಿನಗಳಂದು ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ" ಎಂದು ಹುಬ್ಬಳ್ಳಿ ವಿಭಾಗೀಯ ನಿಯಂತ್ರಣಾಧಿಕಾರಿ ಹೆಚ್. ರಾಮನಗೌಡರ ತಿಳಿಸಿದ್ದಾರೆ. ಮುಂಗಾರು ಆರಂಭವಾಗಿದ್ದು ಮಲೆನಾಡು ಪ್ರದೇಶದಲ್ಲಿ ವ್ಯಾಪಕ ಮಳೆ ಸುರಿಯುತ್ತಿದೆ. ನದಿ, ಹಳ್ಳ-ಕೊಳ್ಳ ಇತ್ಯಾದಿಗಳಲ್ಲಿ ಜಲಧಾರೆ ಸೃಷ್ಟಿಯಾಗಿದೆ. ವಿಶ್ವವಿಖ್ಯಾತ ಜೋಗ ಜಲಪಾತ ಮೈದುಂಬಿಕೊಂಡು ಮತ್ತೆ ಜೀವಕಳೆಯಿಂದ ಕಣ್ಮನ ಸೆಳೆಯುತ್ತಿದೆ. ಅಪರೂಪದ ದೃಶ್ಯ ವೈಭವದ ವೀಕ್ಷಣೆಗೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ.

Viral Video: ಜಲಪಾತದಲ್ಲಿ ಜಲಕ್ರೀಡೆ ಆಡುತ್ತಿದ್ದವರು ಜೀವ ಉಳಿಸಿಕೊಳ್ಳಲು ಎದ್ದೋ ಬಿದ್ದು ಓಡಿದ್ಯಾಕೆ? ಬೆಚ್ಚಿಬೀಳಿಸುವ ವಿಡಿಯೊ ವೈರಲ್

ಸಾರ್ವಜನಿಕರ ಬೇಡಿಕೆಯ ಮೇರೆಗೆ ಪ್ರವಾಸಿಗರ ಅನುಕೂಲಕ್ಕಾಗಿ ಎರಡನೇ ಶನಿವಾರ, ನಾಲ್ಕನೇ ಶನಿವಾರ, ಭಾನುವಾರ ಹಾಗೂ ಸಾರ್ವಜನಿಕ ರಜೆ ದಿನಗಳಂದು ಹುಬ್ಬಳ್ಳಿಯಿಂದ ಜೋಗಫಾಲ್ಸ್​​ಗೆ ನೇರವಾಗಿ ವಿಶೇಷ ಬಸ್ಸುಗಳ ವ್ಯವಸ್ಥೆ ಮಾಡಲಾಗಿದೆ. ಈ ಬಸ್ಸುಗಳು ಗೋಕುಲ ರಸ್ತೆ ಕೇಂದ್ರ ಬಸ್ ನಿಲ್ದಾಣದಿಂದ ಹೊರಡುತ್ತವೆ. ಹೋಗುವಾಗ ಮಾರ್ಗ ಮಧ್ಯದಲ್ಲಿ ಶಿರಸಿ ಮಾರಿಕಾಂಬ ದೇವಸ್ಥಾನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.