ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

Train tragedy: ತುಂಬಿ ತುಳುಕುತ್ತಿದ್ದ ಲೋಕಲ್‌ ಟ್ರೈನ್‌ನಿಂದ ಹಳಿಗೆ ಬಿದ್ದ ಹತ್ತಾರು ಮಂದಿ; ಐವರ ದುರ್ಮರಣ

ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ ಕಡೆಯಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಸಾಗುತ್ತಿದ್ದ ರೈಲಿನಲ್ಲಿ ಇಂದು ಭಾರೀ ಜನದಟ್ಟಣೆ ಉಂಟಾಗಿತ್ತು. ಈ ವೇಳೆ ನೂಕು ನುಗ್ಗಲು ಸಂಭವಿಸಿ, ಹಲವು ಪ್ರಯಾಣಿಕರು ಏಕಾಏಕಿ ಚಲಿಸುತ್ತಿರುವ ರೈಲಿನಿಂದ ಹಳಿಗೆ ಬಿದ್ದಿದ್ದಾರೆ. ಈ ವೇಳೆ ಐವರು ದುರಂತ ಅಂತ್ಯ ಕಂಡಿದ್ದಾರೆ.

ಮುಂಬೈ: ಲೋಕನ್‌ ರೈಲಿನಲ್ಲಿ ಜನ ಸಂದಣಿ ಹೆಚ್ಚಾಗಿ ನೂಕು ನುಗ್ಗಲು ಉಂಟಾಗಿ ಹಲವರು ಹಳಿಗೆ ಬಿದ್ದಿದ್ದು, ಘಟನೆಯಲ್ಲಿ ಐವರು ಸಾವನ್ನಪ್ಪಿರುವ ಘಟನೆ ಮುಂಬೈನಲ್ಲಿ ವರದಿಯಾಗಿದೆ. ಈ ದುರ್ಘಟನೆಯಲ್ಲಿ ಹಲವರು ಗಂಭೀವಾಗಿ ಗಾಯಗೊಂಡಿದ್ದಾರೆ. ಇಲ್ಲಿನ ಛತ್ರಪತಿ ಶಿವಾಜಿ ಮಹಾರಾಜ್ ಟರ್ಮಿನಲ್‌ ಕಡೆಯಿಂದ ಥಾಣೆಯ ಕಸರಾ ಪ್ರದೇಶದ ಕಡೆಗೆ ಸಾಗುತ್ತಿದ್ದ ರೈಲಿನಲ್ಲಿ ಇಂದು ಭಾರೀ ಜನದಟ್ಟಣೆ ಉಂಟಾಗಿತ್ತು. ಈ ವೇಳೆ ನೂಕು ನುಗ್ಗಲು ಸಂಭವಿಸಿ, ಹಲವು ಪ್ರಯಾಣಿಕರು ಏಕಾಏಕಿ ಚಲಿಸುತ್ತಿರುವ ರೈಲಿನಿಂದ ಹಳಿಗೆ ಬಿದ್ದಿದ್ದಾರೆ. ಈ ವೇಳೆ ಐವರು ದುರಂತ ಅಂತ್ಯ ಕಂಡಿದ್ದಾರೆ. ಈ ಬಗ್ಗೆ ಅಧಿಕಾರಿಗಳು ಮಾಹಿತಿ ಹಂಚಿಕೊಂಡಿದ್ದು, ಕನಿಷ್ಠ 10 ರಿಂದ 12 ಪ್ರಯಾಣಿಕರು ರೈಲಿನಿಂದ ಬಿದ್ದಿರುವುದಾಗಿ ತಿಳಿಸಿದ್ದಾರೆ. ಅನೇಕ ಪ್ರಯಾಣಿಕರು ರೈಲಿನ ಬಾಗಿಲಿನಲ್ಲಿ ನೇತಾಡುತ್ತಿದ್ದರು. ಹೀಗಾಗಿ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ ಎನ್ನಲಾಗಿದೆ.



ಈ ಸುದ್ದಿಯನ್ನೂ ಓದಿ: Stampede Situation: ರೈಲು ವಿಳಂಬ ; ನವದೆಹಲಿ ರೈಲು ನಿಲ್ದಾಣದಲ್ಲಿ ಕಾಲ್ತುಳಿತದಂತಹ ಪರಿಸ್ಥಿತಿ

ಇನ್ನು ಘಟನೆ ನಡೆದ ಕೂಡಲೇ ರೈಲ್ವೆ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಗಾಯಾಳುಗಳನ್ನು ಹತ್ತಿರದ ಆಸ್ಪತ್ರೆಗೆ ದಾಖಲಿಸಲಿಸುವ ವ್ಯವಸ್ಥೆ ಕಲ್ಪಿಸಿದ್ದಾರೆ. ಘಟನೆಯ ಬಗ್ಗೆ ಮಾಹಿತಿ ಪೆಡೆದು ಪ್ರಕರಣ ದಾಖಲಿಸಿಕೊಂಡ ಅಧಿಕಾರಿಗಳು ತನಿಖೆ ಕೈಗೆತ್ತಿಕೊಂಡಿದ್ದಾರೆ. ಮುಂಬೈನ ಎಲ್ಲಾ ರೈಲುಗಳು ಸ್ವಯಂಚಾಲಿತ ಡೋರ್‌ಗಳ ಸೌಲಭ್ಯವನ್ನು ಹೊಂದಿವೆ ಎಂದು ರೈಲ್ವೆ ಇಲಾಖೆ ತಿಳಿಸಿದೆ. ಇದರ ಜೊತೆಗೆ, ಸೇವೆಯಲ್ಲಿರುವ ಎಲ್ಲಾ ರೈಲುಗಳನ್ನು ಮತ್ತೊಮ್ಮೆ ಪರಿಶೀಲಿಸಿ ಸ್ವಯಂ ಚಾಲಿತ ಡೋರ್‌ಗಳನ್ನು ಅಳವಡಿಸಲಾಗುವುದು ಎಂದು ಮಾಹಿತಿ ಹಂಚಿಕೊಂಡಿದೆ.