ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಮೀನಾಕ್ಷಿ ನಟರಾಜನ್ ನಾಮಪತ್ರ ರದ್ದು: ಹಸ್ತಕ್ಷೇಪ ಸಾಧ್ಯವಿಲ್ಲ ಎಂದ ಸುಪ್ರೀಂ ಕೋರ್ಟ್ , ಕಾಂಗ್ರೆಸ್ ಗೆ ಭಾರಿ ಹಿನ್ನಡೆ

ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲು ಗುರುವಾರ ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ಇದೀಗ ಶುಕ್ರವಾರ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರ ಸಂಬಂಧಿತ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದೆ. ಇದು ಕಾಂಗ್ರೆಸ್ ಗೆ ಬಹುದೊಡ್ಡ ಹಿನ್ನಡೆಯಾಗಿದೆ.

ಸಂಗ್ರಹ ಚಿತ್ರ

ನವದೆಹಲಿ: ಕಾಂಗ್ರೆಸ್ ನ ಪ್ರಮುಖ ನಾಯಕಿ (congress Former MP) ಮೀನಾಕ್ಷಿ ನಟರಾಜನ್ (Meenakshi Natarajan) ಅವರ ನಾಮಪತ್ರ ತಿರಸ್ಕಾರಕ್ಕೆ (Nomination Rejection) ಸಂಬಂಧಿಸಿ ಚುನಾವಣಾಧಿಕಾರಿಯ ಆದೇಶದಲ್ಲಿ ಹಸ್ತಕ್ಷೇಪ ಮಾಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಸುಪ್ರೀಂ ಕೋರ್ಟ್ (Supreme Court) ಹೇಳಿದೆ. ಮಧ್ಯಪ್ರದೇಶದಲ್ಲಿ ನಡೆಯಲಿರುವ ರಾಜ್ಯಸಭಾ ಚುನಾವಣೆ ಪ್ರಕ್ರಿಯೆಗೆ ತಡೆ ನೀಡಲು ಗುರುವಾರ ನಿರಾಕರಿಸಿದ್ದ ಸುಪ್ರೀಂ ಕೋರ್ಟ್ ಇದೀಗ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರ ಸಂಬಂಧಿತ ವಿಚಾರದಲ್ಲಿ ಮಧ್ಯಪ್ರವೇಶಿಸಲು ಸಾಧ್ಯವಿಲ್ಲ ಎಂದು ಹೇಳಿದ್ದು, ಇದು ಕಾಂಗ್ರೆಸ್ ಗೆ ಬಹುದೊಡ್ಡ ಹಿನ್ನಡೆಯಾಗಿದೆ.

ತೆಲಂಗಾಣದಲ್ಲಿ ಕ್ರಿಮಿನಲ್ ಪ್ರಕರಣವನ್ನು ಬಹಿರಂಗಪಡಿಸದ ಕಾರಣ ಕಾಂಗ್ರೆಸ್ ಅಭ್ಯರ್ಥಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾಧಿಕಾರಿ ರದ್ದುಗೊಳಿಸಿದ್ದಾರೆ. ಇದರಲ್ಲಿ ಹಸ್ತಕ್ಷೇಪ ಮಾಡಲು ನಿರಾಕರಿಸಿರುವ ಸುಪ್ರೀಂ ಕೋರ್ಟ್, ಇದಕ್ಕೆ ಒಂದೇ ಪರಿಹಾರ. ಚುನಾವಣಾ ಆಯೋಗವನ್ನು ಸಂಪರ್ಕಿಸಿ ಎಂದು ಹೇಳಿದೆ.

ಲಖನೌ-ದೆಹಲಿ ಇಂಡಿಗೊ ವಿಮಾನದ ಶೌಚಾಲಯದಲ್ಲಿ ಟಿಶ್ಯೂ ಪೇಪರ್ ಮೇಲೆ ಬಾಂಬ್ ಬೆದರಿಕೆ ಸಂದೇಶ; ವಿಮಾನ ಹಾರಾಟ ಸ್ಥಗಿತ

ನ್ಯಾಯಮೂರ್ತಿಗಳಾದ ಪಿ.ಕೆ. ಮಿಶ್ರಾ ಮತ್ತು ಎ.ಎಸ್. ಚಂದೂರ್ಕರ್ ಅವರ ಪೀಠವು, ರಾಜ್ಯಸಭಾ ಚುನಾವಣೆಗೆ ಕಾಂಗ್ರೆಸ್ ನಾಯಕಿ ಮೀನಾಕ್ಷಿ ನಟರಾಜನ್ ಅವರು ಸಲ್ಲಿಸಿದ ನಾಮಪತ್ರ ತಿರಸ್ಕಾರವನ್ನು ಪ್ರಶ್ನಿಸಿ ಸಲ್ಲಿಸಿದ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ ಎಂದು ಹೇಳಿದೆ.

ನಾಮಪತ್ರ ತಿರಸ್ಕೃತವಾದರೆ ಅದಕ್ಕೆ ಬೇರೆ ಪರಿಹಾರವೇ ಇಲ್ಲವೇ ಎಂದು ಮೀನಾಕ್ಷಿ ನಟರಾಜನ್ ಅವರ ಪರವಾಗಿ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ನ್ಯಾಯಾಲಯವನ್ನು ಪ್ರಶ್ನಿಸಿದರು. ಅಲ್ಲದೇ ಇದು ನ್ಯಾಯಾಲಯ ಮಧ್ಯಪ್ರವೇಶಿಸಬೇಕಾದ ಪ್ರಮುಖ ಪ್ರಕರಣ. ಅಭ್ಯರ್ಥಿಯೊಬ್ಬರು ಕನಿಷ್ಠ ಎರಡು ವರ್ಷಗಳ ಶಿಕ್ಷೆಯನ್ನು ನೀಡುವ ಕ್ರಿಮಿನಲ್ ಪ್ರಕರಣವನ್ನು ಬಹಿರಂಗಪಡಿಸಬೇಕು ಮತ್ತು ಪ್ರಸ್ತುತ ವಿಷಯದಲ್ಲಿ ಸಮನ್ಸ್ ಮಾತ್ರ ನೀಡಲಾಗಿದೆ. ಜನತಾ ಪ್ರಾತಿನಿಧ್ಯ ಕಾಯ್ದೆಯಡಿ ಕ್ರಿಮಿನಲ್ ಪ್ರಕರಣವನ್ನು ಬಹಿರಂಗಪಡಿಸದ ಆರೋಪದ ಮೇಲೆ ಮಧ್ಯಪ್ರದೇಶದಲ್ಲಿ ರಾಜ್ಯಸಭಾ ಚುನಾವಣೆಗೆ ನಾಮಪತ್ರವನ್ನು ಚುನಾವಣಾಧಿಕಾರಿ ತಪ್ಪಾಗಿ ತಿರಸ್ಕರಿಸಿದ್ದಾರೆ ಎಂದು ವಾದಿಸಿದರು.

ಮಧ್ಯಪ್ರದೇಶ ರಾಜ್ಯಸಭಾ ಚುನಾವಣೆಯಲ್ಲಿ ಗುರುವಾರ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದೆ. ಮೂರು ಸ್ಥಾನಗಳನ್ನು ಅವಿರೋಧವಾಗಿ ಗೆದ್ದಿದೆ. ಸುಪ್ರೀಂ ಕೋರ್ಟ್ ಆದೇಶದ ಬಳಿಕ ಮಾಧ್ಯಮದೊಂದಿಗೆ ಮಾತನಾಡಿದ ಮೀನಾಕ್ಷಿ ನಟರಾಜನ್, ಯಾವುದೇ ನಿರಾಶೆಯಾಗಿಲ್ಲ ಎಂದು ಹೇಳಿದರು.

ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿರುವ ರಾಜ್ಯಸಭಾ ಚುನಾವಣಾ ಅಧಿಕಾರಿ ಅರವಿಂದ್ ಶರ್ಮಾ, ಮೀನಾಕ್ಷಿ ನಟರಾಜನ್ ಅವರು ತಮ್ಮ ನಾಮಪತ್ರದೊಂದಿಗೆ ಸಲ್ಲಿಸಿದ ನಮೂನೆ 26 ರಲ್ಲಿ ನ್ಯಾಯಾಲಯದ ದೂರನ್ನು ಬಿಟ್ಟು ಅಪೂರ್ಣ ಅಫಿಡವಿಟ್ ಸಲ್ಲಿಸಿದ್ದಾರೆ ಎಂದು ತಿಳಿಸಿದ್ದಾರೆ. ಇದಕ್ಕೆ ಸಂಬಂಧಿಸಿ ಮಧ್ಯಪ್ರದೇಶದ ವಿಧಾನಸಭಾ ಅಧಿಕಾರಿಯೊಬ್ಬರು ಚುನಾವಣಾ ಅಧಿಕಾರಿಗೆ ದೂರು ಸಲ್ಲಿಸಿದ್ದರು.

ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಪ್ರಯಾಣಿಸುತ್ತಿದ್ದ ರೈಲಿನ ಮೇಲೆ ಕಲ್ಲು ತೂರಾಟ; ಕೋಚ್‌ನ ಕಿಟಕಿ ಗಾಜು ಪುಡಿಪುಡಿ

ಮಧ್ಯಪ್ರದೇಶದ ಕಾಂಗ್ರೆಸ್ ಮುಖ್ಯಸ್ಥ ಜಿತು ಪಟ್ವಾರಿ ಅವರು ಪ್ರತಿಕ್ರಿಯಿಸಿ ಮೀನಾಕ್ಷಿ ನಟರಾಜನ್ ಅವರ ನಾಮಪತ್ರ ತಿರಸ್ಕೃತಗೊಂಡಿರುವುದು ದೇಶದ ಪ್ರಜಾಪ್ರಭುತ್ವದ ಬಗ್ಗೆ ಕಳವಳ ವ್ಯಕ್ತಪಡಿಸುವಂತಾಗಿದೆ. ಇದು ದೇಶದ ರಾಜಕೀಯದಲ್ಲಿ ಮೊದಲ ಘಟನೆ. ರಾಷ್ಟ್ರವು ನಿರಂಕುಶಾಧಿಕಾರ ಮತ್ತು ಸರ್ವಾಧಿಕಾರದತ್ತ ಸಾಗುತ್ತಿದೆಯೇ ಎಂದು ಪ್ರಶ್ನಿಸಿದರು.

ವಿದ್ಯಾ ಇರ್ವತ್ತೂರು

View all posts by this author