ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ ಅಂತ್ಯಕ್ರಿಯೆಗೆ ಇರಾನ್‌ಗೆ ತೆರಳಲಿದ್ದಾರೆ ಮೆಹಬೂಬಾ ಮುಫ್ತಿ
Mehbooba Mufti to Visit Iran: ಜಮ್ಮು-ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಅವರಿಗೆ ಅಂತಿಮ ಗೌರವ ಸಲ್ಲಿಸಲು ಇರಾನ್‌ಗೆ ಪ್ರಯಾಣಿಸಲಿದ್ದಾರೆ. ಜುಲೈ 3 ರಿಂದ 6 ರವರೆಗೆ ಟೆಹರಾನ್‌ನಲ್ಲಿ ನಡೆಯಲಿರುವ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅಧಿಕೃತ ಆಹ್ವಾನವನ್ನು ಅವರು ಸ್ವೀಕರಿಸಿದ್ದಾರೆ.
ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ (ಸಂಗ್ರಹ ಚಿತ್ರ) -
ಟೆಹರಾನ್, ಜು.2: ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಖಮೇನಿ (Ayatollah Khamenei) ಅವರ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಮೆಹಬೂಬಾ ಮುಫ್ತಿ (Mehbooba Mufti) ಭಾಗವಹಿಸಲಿದ್ದಾರೆ. ಜುಲೈ 3 ರಿಂದ 6 ರವರೆಗೆ ಟೆಹರಾನ್‌ನಲ್ಲಿ ನಡೆಯಲಿರುವ ಸರ್ಕಾರಿ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಅಧಿಕೃತ ಆಹ್ವಾನವನ್ನು ಅವರು ಸ್ವೀಕರಿಸಿದ್ದಾರೆ. ಹೀಗಾಗಿ ಜಮ್ಮು-ಕಾಶ್ಮೀರದ ಪೀಪಲ್ಸ್ ಡೆಮಾಕ್ರಟಿಕ್ ಪಕ್ಷದ ಅಧ್ಯಕ್ಷೆ ಮೆಹಬೂಬಾ ಮುಫ್ತಿ ಅವರು ಅಯತೊಲ್ಲಾ ಸಯ್ಯದ್ ಅಲಿ ಖಮೇನಿ ಅವರಿಗೆ ಅಂತಿಮ ಗೌರವ ಸಲ್ಲಿಸಲು ಇರಾನ್‌ಗೆ ಪ್ರಯಾಣಿಸಲಿದ್ದಾರೆ.
ಭಾರತದ ವಿಶೇಷ ಅತಿಥಿಯಾಗಿ ಆಹ್ವಾನಿತರಾದ ನಂತರ ಸಮಾರಂಭದಲ್ಲಿ ಭಾಗವಹಿಸುವುದಾಗಿ ಮುಫ್ತಿ ಹೇಳಿದರು. ಇದು ನನಗೆ ಸಿಕ್ಕ ಅಪಾರ ಗೌರವ ಮತ್ತು ಈ ಆಹ್ವಾನವನ್ನು (ಇರಾನ್‌ನಿಂದ) ಸ್ವೀಕರಿಸಲು ಜೀವಮಾನದಲ್ಲಿ ಒಮ್ಮೆ ಮಾತ್ರ ಸಿಗುವ ಅವಕಾಶ. ಸರ್ವೋಚ್ಚ ನಾಯಕನಿಗೆ ಅಂತಿಮ ನಮನ ಸಲ್ಲಿಸಲು ನಾನು ಅಲ್ಲಿಗೆ ಪ್ರಯಾಣಿಸುತ್ತೇನೆ ಎಂದು ಪಿಡಿಪಿ ಪಿಟಿಐಗೆ ತಿಳಿಸಿದರು.
ಇರಾನ್ ಇಸ್ಲಾಮಿಕ್ ಗಣರಾಜ್ಯದ ಸರ್ವೋಚ್ಚ ನಾಯಕರ ಕಚೇರಿಯ ಅಂತಾರಾಷ್ಟ್ರೀಯ ಸಂಬಂಧಗಳ ವಿಭಾಗದ ನಿರ್ದೇಶಕರಾದ ಮೊಹ್ಸೀನ್ ಖುಮ್ಮಿ ಅವರು ಈ ಆಹ್ವಾನವನ್ನು ನೀಡಿದ್ದಾರೆ. ಖುಮ್ಮಿ ಅವರು ತಮ್ಮ ಪತ್ರದಲ್ಲಿ, ಭಾರತದ ಗೌರವಾನ್ವಿತ ಅತಿಥಿಯಾಗಿ ಅಂತ್ಯಕ್ರಿಯೆಯ ಸಮಾರಂಭದಲ್ಲಿ ಪಾಲ್ಗೊಳ್ಳುವಂತೆ ಮುಫ್ತಿ ಅವರಿಗೆ ಅಧಿಕೃತವಾಗಿ ಆಹ್ವಾನ ನೀಡಿದ್ದಾರೆ.
ಫೆಬ್ರವರಿ 28 ರಂದು ಖಮೇನಿ ಅವರ ಹತ್ಯೆಯಾಯಿತು. ರಾಷ್ಟ್ರೀಯ ಶೋಕಾಚರಣೆಯ ಅವಧಿ ಮತ್ತು ಇಸ್ಲಾಮಿಕ್ ಗಣರಾಜ್ಯದ ಶಿಷ್ಟಾಚಾರಗಳಿಗೆ ಅನುಸಾರವಾಗಿ, ಜುಲೈ 3 ರಿಂದ 6 ರವರೆಗೆ ಟೆಹರಾನ್‌ನಲ್ಲಿ ಸರ್ಕಾರಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಪತ್ರದಲ್ಲಿ ತಿಳಿಸಲಾಗಿದೆ.
“ಇರಾನ್ ಇಸ್ಲಾಮಿಕ್ ಗಣರಾಜ್ಯ ಮತ್ತು ಭಾರತ ಗಣರಾಜ್ಯವನ್ನು ಬೆಸೆಯುವ ಆಳವಾದ ಐತಿಹಾಸಿಕ ಹಾಗೂ ಆಯಕಟ್ಟಿನ ಸಂಬಂಧಗಳ ಹಿನ್ನೆಲೆಯಲ್ಲಿ, ಈ ಗಂಭೀರ ಸಮಾರಂಭದಲ್ಲಿ ಪಾಲ್ಗೊಳ್ಳಲು ಭಾರತದ ಗೌರವಾನ್ವಿತ ಅತಿಥಿಯಾಗಿ ನಿಮ್ಮನ್ನು ಆಹ್ವಾನಿಸುತ್ತಿರುವುದನ್ನು ನಾನು ನನಗೆ ಸಂದ ಗೌರವ ಎಂದು ಭಾವಿಸುತ್ತೇನೆ. ನಿಮ್ಮ ಉಪಸ್ಥಿತಿಯು ನಮ್ಮೆರಡು ಮಹಾನ್ ಪುರಾತನ ನಾಗರಿಕತೆಗಳ ನಡುವಿನ ಆಳವಾದ ಸ್ನೇಹ ಮತ್ತು ಪರಸ್ಪರ ಗೌರವಕ್ಕೆ ಸಾಕ್ಷಿಯಾಗಲಿದೆ” ಎಂದು ಮುಫ್ತಿ ಅವರಿಗೆ ಬರೆದ ಪತ್ರದಲ್ಲಿ ತಿಳಿಸಲಾಗಿದೆ.
ಕಾರ್ಯಕ್ರಮದ ಪ್ರಕಾರ, ಜುಲೈ 3 ರಂದು ಟೆಹ್ರಾನ್‌ನ ಇಮಾಮ್ ಖೊಮೇನಿ ಗ್ರ್ಯಾಂಡ್ ಮೊಸಲ್ಲಾ ಸಂಕೀರ್ಣದಲ್ಲಿ ನಾಯಕನಿಗೆ ಬೀಳ್ಕೊಡುಗೆ ಕಾರ್ಯಕ್ರಮ ನಡೆಯಲಿದೆ. ನಂತರ ಮರುದಿನ ಸ್ಮರಣಾರ್ಥ ಕಾರ್ಯಕ್ರಮ ಮತ್ತು ಜುಲೈ 6 ರಂದು ಅಂತ್ಯಕ್ರಿಯೆಯ ಮೆರವಣಿಗೆ ನಡೆಯಲಿದೆ.
ಜುಲೈ 3 ರಿಂದ 6 ರವರೆಗೆ ನಡೆಯಲಿರುವ ಸಮಾರಂಭಗಳಿಗೆ ಅಧಿಕೃತ ಆಹ್ವಾನವನ್ನು ಸ್ವೀಕರಿಸಿದ ನಂತರ ಮುಫ್ತಿ ಅವರು ಅಂತ್ಯಕ್ರಿಯೆಯ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಮತ್ತು ಅವರಿಗೆ ಅಂತಿಮ ನಮನ ಸಲ್ಲಿಸಲು ಟೆಹರಾನ್‌ಗೆ ಪ್ರಯಾಣಿಸಲಿದ್ದಾರೆ.