ವಕ್ಫ್​ ತಿದ್ದುಪಡಿ ಮಸೂದೆ ಐಪಿಎಲ್​ ಸುನಿತಾ ವಿಲಿಯಮ್ಸ್​ ಫ್ಯಾಷನ್​ ವಿದೇಶ ಧಾರ್ಮಿಕ ಕ್ರೈಂ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

ಅಮಾನವೀಯ! ಮುಟ್ಟಾಗಿದ್ದ ವಿದ್ಯಾರ್ಥಿನಿಯನ್ನು ತರಗತಿ ಹೊರಗೆ ಕೂರಿಸಿ ಪರೀಕ್ಷೆ ಬರೆಸಿದ ಪಾಂಶುಪಾಲ

ಪರೀಕ್ಷೆ ವೇಳೆ ವಿದ್ಯಾರ್ಥಿನಿಗೆ ಮುಟ್ಟಿನ ನೋವು ಏಕಾಏಕಿ ಶುರುವಾಗಿತ್ತು. ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಗಂಟೆಗಳ ಕಾಲ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಸದ್ಯ ಘಟನೆ ಬಗ್ಗೆ ವ್ಯಾಪಕ ಆಕ್ರೋಶ ವ್ಯಕ್ತವಾಗುತ್ತಿದೆ.

ತರಗತಿ ಹೊರಗೆ ಕೂತು ಪರೀಕ್ಷೆ ಬರೆದ ಮುಟ್ಟಾಗಿದ್ದ ವಿದ್ಯಾರ್ಥಿನಿ

ಸಾಂದರ್ಭಿಕ ಚಿತ್ರ.

Profile Sushmitha Jain Apr 11, 2025 12:10 AM

ಚೆನ್ನೈ: ಪರೀಕ್ಷೆ ವೇಳೆ ವಿದ್ಯಾರ್ಥಿನಿಗೆ ಮುಟ್ಟಿನ ನೋವು ಏಕಾಏಕಿ ಶುರುವಾಗಿತ್ತು. ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಗಂಟೆಗಳ ಕಾಲ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಎಂಟನೇ ತರಗತಿಯ ವಿದ್ಯಾರ್ಥಿನಿ ಅಂದು ಪರೀಕ್ಷಾ ಕೊಠಡಿಯಲ್ಲಿ ಕುಳಿತಿದ್ದಳು. ಆಗ ಮುಟ್ಟು ಕಾಣಿಸಿಕೊಂಡಿತ್ತು. ಕೂಡಲೇ ಶಿಕ್ಷಕರಿಗೆ ವಿಷಯ ತಿಳಿಸಿದ್ದಳು. ಆದರೆ ಇದೊಂದು ನೈಸರ್ಗಿಕ ಪ್ರಕ್ರಿಯೆ ಎಂದು ಯೋಚಿಸದೇ ಬಹಳ ಕ್ರೂರವಾಗಿ ವರ್ತಿಸಿದ್ದ ಪ್ರಾಂಶುಪಾಲರು ಆಕೆಯನ್ನು ತರಗತಿಯಿಂದ ಹೊರಗಿಟ್ಟಿದ್ದಾರೆ.

ಹೌದು, ತಮಿಳುನಾಡಿನ ಖಾಸಗಿ ಶಾಲೆಯೊಂದರಲ್ಲಿ ಇಂತಹ ಅಮಾನುಷ ಘಟನೆ ನಡೆದಿದ್ದು, ಸೋಶಿಯಲ್ ಮೀಡಿಯಾದಲ್ಲಿ ಇದು ಭಾರೀ ವೈರಲ್ ಆಗಿದೆ. ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವೀಡಿಯೊದಲ್ಲಿ ಮಗಳ ಬಳಿಗೆ ಬಂದ ತಾಯಿ ಏನಾಯಿತು ಎಂದು ಕೇಳುತ್ತಾರೆ. ಆಗ ವಿದ್ಯಾರ್ಥಿನಿ ಪ್ರಾಂಶುಪಾಲರು ಮುಟ್ಟು ಆಗಿರುವುದಕ್ಕೆ ಹೊರಗೆ ಕೂರಿಸಿದ್ದಾರೆ ಎಂದು ಹೇಳುತ್ತಾಳೆ.

ವೈರಲ್‌ ವಿಡಿಯೊ ಇಲ್ಲಿದೆ:



ಇದರಿಂದ ಕೋಪಗೊಂಡ ತಾಯಿ ಮಗಳನ್ನು ತನ್ನ ಮುಟ್ಟಿನ ಸಮಯದಲ್ಲಿ ಹೊರಗೆ ಕೂರಿಸಿ ಪರೀಕ್ಷೆ ಬರೆಯುವಂತೆ ಏಕೆ ಹೇಳಿದ್ದೀರಿ ಎಂದು ಪ್ರಶ್ನೆ ಮಾಡಿದ್ದಾರೆ.

ಈ ಸುದ್ದಿಯನ್ನೂ ಓದಿ: ಅನ್ಯಕೋಮಿನ ಯುವಕನನ್ನು ಪ್ರೀತಿಸಿದ್ದಕ್ಕೆ ಮಗಳನ್ನೇ ಕೊಂದ ಅಪ್ಪ! ಲವ್ ಮಾಡಿದ ಹುಡುಗಿಗೆ ಇದೆಂಥಾ ಶಿಕ್ಷೆ?

ಬಾಲಕಿಯ ತಂದೆ ದೂರು ದಾಖಲಿಸಿದ್ದು, ತನ್ನ ಮಗಳು ಪರೀಕ್ಷೆಗೆ ಶಾಲೆಗೆ ಹೋಗುತ್ತಿದ್ದಾಗ ಮುಟ್ಟಗಿದ್ದಾಳೆ. ಇದನ್ನು ಶಾಲೆಯ ಹೆಡ್ ಮಾಸ್ಟರ್‌ಗೆ ಹೇಳಿದ್ದು ಸಿಡಿಮಿಡಿಗೊಂಡ ಅವರು ಸುಮಾರು ಒಂದು ಗಂಟೆಗಳ ಕಾಲ ಹೊರಗೆ ನಿಲ್ಲುವಂತೆ ಒತ್ತಾಯಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈ ಘಟನೆಯಿಂದ ಆಕೆ ಮಾನಸಿಕವಾಗಿ ಹಾಗೂ ದೈಹಿಕವಾಗಿ ನೊಂದಿದ್ದಾಳೆ ಎಂದು ಪೋಷಕರು ತಿಳಿಸಿದ್ದಾರೆ. ತಂದೆಯ ದೂರಿನ ನಂತರ, ಚುರುಕಾಗಿ ಪೊಲೀಸರು ತನಿಖೆ ನಡೆಸುತ್ತಿದ್ದಾರೆ. ಅವರು ಮಹಿಳಾ ಕಲ್ಯಾಣ ಇಲಾಖೆ, ರಾಜ್ಯ ಮಹಿಳಾ ಆಯೋಗ, ಜಿಲ್ಲಾ ಮ್ಯಾಜಿಸ್ಟ್ರೇಟ್ ಮತ್ತು ಜಿಲ್ಲಾ ಶಾಲೆಗಳ ನಿರೀಕ್ಷಕರಿಗೆ (DIOS) ಔಪಚಾರಿಕ ದೂರುಗಳನ್ನು ಸಲ್ಲಿಸಿದ್ದಾರೆ. ಈ ವಿಷಯದ ಬಗ್ಗೆ ಅಧಿಕೃತ ವಿಚಾರಣೆಗೆ ಆದೇಶಿಸಲಾಗಿದೆ.

ತನಿಖೆಯ ಫಲಿತಾಂಶದ ಆಧಾರದ ಮೇಲೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದಿದ್ದು, ಘಟನೆಯನ್ನು ಹಲವು ಸಾಮಾಜಿಕ ಕಾರ್ಯಕರ್ತರು ಹಾಗೂ ಸಂಘಟನೆಗಳು ಖಂಡಿಸಿದ್ದಾರೆ. ಶಾಲಾ ಆಡಳಿತ ಮಂಡಳಿ ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದು, ಮಹಿಳಾ ಕಲ್ಯಾಣ ಇಲಾಖೆ ಹಾಗೂ ರಾಜ್ಯ ಮಹಿಳಾ ಆಯೋಗ ಕೂಡ ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿದೆ. ಹಕ್ಕುಗಳ ಉಲ್ಲಂಘನೆ ಪ್ರಕರಣ ಎಂದು ಹೇಳಲಾಗಿದೆ.

ಪರೀಕ್ಷೆ ವೇಳೆ ವಿದ್ಯಾರ್ಥಿನಿಗೆ ಮುಟ್ಟಿನ ನೋವು ಏಕಾಏಕಿ ಶುರುವಾಗಿ, ಪ್ರಾಂಶುಪಾಲರ ಬಳಿ ಸ್ಯಾನಿಟರಿ ಪ್ಯಾಡ್ ಕೇಳಿದ್ದಕ್ಕೆ ಆಕೆಯನ್ನು ಗಂಟೆಗಳ ಕಾಲ ಕೊಠಡಿಯಿಂದ ಹೊರಗೆ ನಿಲ್ಲಿಸಿರುವ ಅಮಾನವೀಯ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿತ್ತು.