ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

ಹೈದರಾಬಾದ್‌ನಲ್ಲಿ ದುರ್ಗಾದೇವಿ ಶೋಭಾ ಯಾತ್ರೆ ವೇಳೆ ಮೊಟ್ಟೆ ಎಸೆದ ಕಿಡಿಗೇಡಿಗಳು

Viral Video: ದುರ್ಗಾದೇವಿ ಶೋಭಾ ಯಾತ್ರೆ ಸಂದರ್ಭದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಹೈದರಾಬಾದ್‌ನ ಹಳೆಯ ನಗರ ಭಾಗದ ಮದನ್ನಾಪೇಟ್ ಪ್ರದೇಶದಲ್ಲಿ ದುರ್ಗಾದೇವಿ ಶೋಭಾ ಯಾತ್ರೆ ನಡೆಯುತ್ತಿತ್ತು. ಈ ವೇಳೆ ದುಷ್ಕರ್ಮಿಗಳ ಗುಂಪೊಂದು ಮೊಟ್ಟೆಯನ್ನು ಎಸೆದಿದೆ. ಈ ಘಟನೆ ನಡೆದ ಸಂದರ್ಭದಲ್ಲಿ ಕೆಲ ಕಾಲ ಉದ್ವಗ್ನ ವಾತಾವರಣ ನಿರ್ಮಾಣವಾಗಿತ್ತು

ದುರ್ಗಾ ದೇವಿ ವಿಗ್ರಹ ಮೆರವಣಿಗೆಯ ವೇಳೆ ಮೊಟ್ಟೆ ಎಸೆದ ಕಿಡಿಗೇಡಿಗಳು!

ಹೈದರಾಬಾದ್‌ನಲ್ಲಿ ನಡೆದ ದುರ್ಗಾ ದೇವಿ ವಿಗ್ರಹದ ಮೆರವಣಿಗೆ -

Profile
Pushpa Kumari Oct 25, 2026 5:36 PM

ಹೈದರಾಬಾದ್, ಅ. 25: ದುರ್ಗಾ ದೇವಿ ಶೋಭಾ ಯಾತ್ರೆ ಸಂದರ್ಭದಲ್ಲಿ ಆಘಾತಕಾರಿ ಘಟನೆಯೊಂದು ವರದಿಯಾಗಿದೆ. ಹೈದರಾಬಾದ್‌ನ ಹಳೆಯ ನಗರ ಭಾಗದ ಮದನ್ನಾಪೇಟ್ ಪ್ರದೇಶದಲ್ಲಿ ದುರ್ಗಾದೇವಿ ಶೋಭಾ ಯಾತ್ರೆ ನಡೆಯುತ್ತಿದ್ದ ವೇಳೆ ದುಷ್ಕರ್ಮಿಗಳ ಗುಂಪೊಂದು ಮೊಟ್ಟೆ ಎಸೆದಿದೆ. ಈ ಘಟನೆ (Viral News) ನಡೆದ ಸಂದರ್ಭದಲ್ಲಿ ಕೆಲ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾಗಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದ ಪೊಲೀಸರು ಪರಿಸ್ಥಿತಿಯನ್ನು ತಿಳಿಗೊಳಿಸಿ ಶಂಕಿತರನ್ನು ಪತ್ತೆ ಹಚ್ಚಿದ್ದಾರೆ.

ಮಧ್ಯರಾತ್ರಿ ಸುಮಾರು ರಾತ್ರಿ 2 ಗಂಟೆಗೆ ಮೆರವಣಿಗೆಯ ಸಂದರ್ಭದಲ್ಲಿ ಮೊಟ್ಟೆ ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮಾಹಿತಿ ತಿಳಿದ ಕೂಡಲೇ ವಲಯದ ಡಿಸಿಪಿ ಕಿರಣ್ ಖಾರೆ, ಎಸಿಪಿ ಶ್ಯಾಮ್ ಸುಂದರ್, ಮದನ್ನಾಪೇಟೆ ಠಾಣಾಧಿಕಾರಿ ಕೆ. ಚಂದ್ರಶೇಖರ್ ಸೇರಿ ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಪರಿಸ್ಥಿತಿಯನ್ನು ನಿಭಾಯಿಸಿದ್ದಾರೆ.

ಹೈದರಾಬಾದ್‌ನಲ್ಲಿ ಪ್ರತಿಭಟನೆ ನಡೆಸಿ ಕ್ರಮಕ್ಕೆ ಆಗ್ರಹಿಸಿದ ಸಾರ್ವಜನಿಕರು:



ಮೆರವಣಿಗೆಯ ಆಯೋಜಕರೊಂದಿಗೆ ಮಾತುಕತೆ ನಡೆಸಿದ ಪೊಲೀಸರು ಪರಿಸ್ಥಿತಿಯನ್ನು ಹತೋಟಿಗೆ ತಂದಿದ್ದಾರೆ. ಅದೇ ರೀತಿ ಮೆರವಣಿಗೆ ನಿಲ್ಲಸದಂತೆ ಕಾರ್ಯಕ್ರಮವನ್ನು ಮುಂದುವರಿಸಲು ಪ್ರೇರೇಪಿಸಿದ್ದಾರೆ. ಪೊಲೀಸರು ಹೆಚ್ಚಿನ ತನಿಖೆ ನಡೆಸುವುದಾಗಿ ಮತ್ತು ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳುದಾಗಿ ತಿಳಿಸಿದ್ದಾರೆ‌.

ಅಳಿಲಿನ ಅಂತ್ಯಕ್ರಿಯೆ ವೇಳೆ ಕಣ್ಣೀರಿಟ್ಟ ಪುಟಾಣಿಗಳು; 'ಇಂತಹ ಮಕ್ಕಳನ್ನು ಬೆಳೆಸಬೇಕು' ಎಂದ ನಟಿ ರಮ್ಯಾ

ಘಟನೆಗೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯಾವಳಿಗಳನ್ನು ಪೊಲೀಸರು ತೀವ್ರವಾಗಿ ಪರಿಶೀಲಿಸುತ್ತಿದ್ದು ಇದರಲ್ಲಿ ಭಾಗಿಯಾದವರನ್ನು ವಿಚಾರಣೆ ನಡೆಸುವುದಾಗಿ ಹೇಳಿದ್ದಾರೆ‌. ಸದ್ಯ ಪ್ರದೇಶದಲ್ಲಿ ವಾತಾವರಣ ಸಂಪೂರ್ಣ ಶಾಂತಿಯುತವಾಗಿದೆ. ವಾಟ್ಸ್‌ಆ್ಯಪ್‌ನಲ್ಲಿ ಹರಿದಾಡುವ ಯಾವುದೇ ಆಧಾರರಹಿತ ವದಂತಿಗಳನ್ನು ನಂಬಬಾರದು ಎಂದು ಸಾರ್ವಜನಿಕರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.