ಕರ್ನಾಟಕ ಬಜೆಟ್​ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹೋಳಿ ಹಬ್ಬ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Amit Shah: ಎಲ್ ಕೆಜಿ ವಿದ್ಯಾರ್ಥಿಯಿಂದ ಪಿಹೆಚ್ ಡಿ ಪದವೀಧರನಿಗೆ ಪಾಠ ; ಸ್ಟ್ಯಾಲಿನ್‌ ಹೇಳಿಕೆಗೆ ಅಮಿತ್‌ ಶಾ ಖಡಕ್‌ ಕೌಂಟರ್‌

ಹಿಂದಿಯೇತರ ಭಾಷಿಕರ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿದೆ ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಆರೋಪಕ್ಕೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ ತಿರುಗೇಟು ನೀಡಿದ್ದಾರೆ. ತಮಿಳುನಾಡಿನ ಸರ್ಕಾರಕ್ಕೆ ತಮಿಳಿನಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಪರಿಚಯಿಸುವಂತೆ ಶಾ ಒತ್ತಾಯಿಸಿದ್ದಾರೆ.

ಹಿಂದಿ ಹೇರಿಕೆ ವಿಷಯ;  ಸ್ಟ್ಯಾಲಿನ್‌ ಗೆ ಖಡಕ್‌ ಕೌಂಟರ್‌ ಅಮಿತ್‌ ಶಾ

ಅಮಿತ್‌ ಶಾ

Profile Vishakha Bhat Mar 7, 2025 1:02 PM

ನವದೆಹಲಿ: ಹಿಂದಿಯೇತರ ಭಾಷಿಕರ ಮೇಲೆ ಕೇಂದ್ರ ಸರ್ಕಾರ ಹಿಂದಿ ಹೇರುತ್ತಿದೆ (Hindi Imposition) ಎಂದು ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟ್ಯಾಲಿನ್ ಆರೋಪಕ್ಕೆ ಇದೀಗ ಕೇಂದ್ರ ಗೃಹ ಸಚಿವ ಅಮಿತ್‌ ಶಾ (Amit Shah) ತಿರುಗೇಟು ನೀಡಿದ್ದಾರೆ. ತಮಿಳುನಾಡಿನ ಸರ್ಕಾರಕ್ಕೆ ತಮಿಳಿನಲ್ಲಿ ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳನ್ನು ಪರಿಚಯಿಸುವಂತೆ ಶಾ ಒತ್ತಾಯಿಸಿದ್ದಾರೆ. ಡಿಎಂಕೆ ಮುಖ್ಯಸ್ಥರು ಈ ನಿಟ್ಟಿನಲ್ಲಿ ಸಾಕಷ್ಟು ಕೆಲಸ ಮಾಡಿಲ್ಲ ಮತ್ತು ಪ್ರಾದೇಶಿಕ ಭಾಷೆಗಳಿಗೆ ಅವಕಾಶ ಕಲ್ಪಿಸಲು ನೇಮಕಾತಿ ನೀತಿಗಳಲ್ಲಿ ಪ್ರಮುಖ ಬದಲಾವಣೆಗಳನ್ನು ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರ ಸರ್ಕಾರ ಎಂದು ಅಮಿತ್‌ ಶಾ ಹೇಳಿದ್ದಾರೆ.

ಇಲ್ಲಿಯವರೆಗೆ, ಸಿಎಪಿಎಫ್ ನೇಮಕಾತಿಯಲ್ಲಿ ಮಾತೃಭಾಷೆಗೆ ಸ್ಥಾನವಿರಲಿಲ್ಲ. ನಮ್ಮ ಯುವಕರು ಈಗ ತಮಿಳು ಸೇರಿದಂತೆ ಎಲ್ಲಾ ಸ್ಥಳೀಯ ಭಾಷೆಗಳಲ್ಲಿ ತಮ್ಮ ಸಿಎಪಿಎಫ್ ಪರೀಕ್ಷೆಯನ್ನು ಬರೆಯಲು ಸಾಧ್ಯವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ನಿರ್ಧರಿಸಿದ್ದಾರೆ ಎಂದು ಅಮಿತ್ ಶಾ ಹೇಳಿದ್ದಾರೆ. ವೈದ್ಯಕೀಯ ಮತ್ತು ಎಂಜಿನಿಯರಿಂಗ್ ಕೋರ್ಸ್‌ಗಳ ಪಠ್ಯಕ್ರಮವನ್ನು ತಮಿಳು ಭಾಷೆಯಲ್ಲಿ ಪರಿಚಯಿಸುವತ್ತ ಸಾಧ್ಯವಾದಷ್ಟು ಬೇಗ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ನಾನು ತಮಿಳುನಾಡು ಮುಖ್ಯಮಂತ್ರಿಯನ್ನು ಒತ್ತಾಯಿಸಲು ಬಯಸುತ್ತೇನೆ ಎಂದು ಅವರು ಹೇಳಿದ್ದಾರೆ.

ಈ ಸುದ್ದಿಯನ್ನೂ ಓದಿ: MK Stalin : ಹಿಂದಿ ಭಾಷೆಯಿಂದ 25ಕ್ಕೂ ಹೆಚ್ಚು ಪ್ರಾಚೀನ ಮಾತೃಭಾಷೆಗಳು ಕಣ್ಮರೆ; ಸ್ಟ್ಯಾಲಿನ್‌ ಗಂಭೀರ ಆರೋಪ

ಇಂದು ಸಾಮಾಜಿಕ ಮಾಧ್ಯಮದಲ್ಲಿ ಸುದೀರ್ಘ ಪೋಸ್ಟ್ ಮಾಡಿರುವ ಸ್ಟಾಲಿನ್, ಕೇಂದ್ರ ಸರ್ಕಾರವು ರಾಷ್ಟ್ರೀಯ ಶಿಕ್ಷಣ ನೀತಿ (NEP) ಮೂಲಕ ಹಿಂದಿಯನ್ನು ಹೇರಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ್ದಾರೆ. ಎಲ್ ಕೆಜಿ ವಿದ್ಯಾರ್ಥಿಯೊಬ್ಬ ಪಿ ಹೆಚ್ ಡಿ ಪದವೀಧರನಿಗೆ ಪಾಠ ಮಾಡುತ್ತಿರುವಂತಿದೆ. "ದ್ರಾವಿಡಂ ದೆಹಲಿಯಿಂದ ಆಜ್ಞೆಗಳನ್ನು ತೆಗೆದುಕೊಳ್ಳುವುದಿಲ್ಲ. ಬದಲಾಗಿ, ಅದು ರಾಷ್ಟ್ರವು ಅನುಸರಿಸಬೇಕಾದ ಮಾರ್ಗವನ್ನು ನಿಗದಿಪಡಿಸುತ್ತದೆ" ಎಂದು ಸ್ಟ್ಯಾಲಿನ್ ಹೇಳಿದ್ದಾರೆ. ತಮಿಳು ನಾಡಿಗೆ ಬ್ಲಾಕ್‌ ಮೇಲೆ ಮಾಡಲು ಯಾರಿಗೂ ಸಾಧ್ಯವಿಲ್ಲ ಎಂದು ಅವರು ಹೇಳಿದ್ದಾರೆ. ಇತ್ತೀಚೆಗೆ ಗಡಿ ಹಂಚಿಕೆ ವಿಚಾರವಾಗಿ ತಮಿಳಿಗರು ಹೆಚ್ಚು ಮಕ್ಕಳನ್ನು ಹೆತ್ತು, ಜನಸಂಖ್ಯೆಯನ್ನು ಜಾಸ್ತಿ ಮಾಡಬೇಕು ಎಂದು ಹೇಳಿದ್ದರು. ಹಿಂದಿ ಭಾಷೆಯು 25 ಉತ್ತರ ಭಾರತದ ಭಾಷೆಯನ್ನು ನುಂಗಿ ಹಾಕಿದೆ ಎಂದು ಅವರು ವಾಗ್ದಾಳಿ ನಡೆಸಿದ್ದರು. ಭೋಜ್‌ಪುರಿ, ಅವಧಿ, ಬ್ರಜ್ ಮತ್ತು ಗರ್ವಾಲಿ ಸೇರಿದಂತೆ ಹಲವು ಭಾರತೀಯ ಭಾಷೆಗಳನ್ನು ಹಿಂದಿ ನುಂಗಿ ಹಾಕಿದೆ. ಆ ಭಾಷೆಗಳು ಈಗ ಉಳಿವಿಗಾಗಿ ಹೆಣಗಾಡುತ್ತಿವೆ ಎಂದು ಅವರು ಹೇಳಿದ್ದರು.