ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ
Ad

MLC Election Result: ಕೊನೆಗೂ ಖಾತೆ ತೆರೆದ ಕೈ ಪಡೆ; ಆರ್‌ಎಸ್‌ಎಸ್ ಭದ್ರಕೋಟೆ ನಾಗಪುರದಲ್ಲಿ ಕಾಂಗ್ರೆಸ್ ಜಯಭೇರಿ

ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಭದ್ರಕೋಟೆಯಾಗಿರುವ ಮಹಾರಾಷ್ಟ್ರ ವಿಧಾನ ಪರಿಷತ್ತಿನ ನಾಗಪುರ ವಿಭಾಗದ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಅಭಿಜಿತ್ ಗೋವಿಂದರಾವ್ ವಂಜಾರಿ ಸತತ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಇಲ್ಲಿನ ಎಂಎಲ್‌ಸಿ ಚುನಾವಣೆಯಲ್ಲಿ ಇದೇ ಮೊದಲ ಬಾರಿಗೆ ಕಾಂಗ್ರೆಸ್‌ ಗೆಲುವು ದಾಖಲಿಸಿದೆ.

ಆರ್‌ಎಸ್‌ಎಸ್ ಭದ್ರಕೋಟೆಯನ್ನು ಗೆದ್ದ ಕಾಂಗ್ರೆಸ್

ಸಂಗ್ರಹ ಚಿತ್ರ -

ಮಹಾರಾಷ್ಟ್ರ: ಮಹಾರಾಷ್ಟ್ರ ವಿಧಾನ ಪರಿಷತ್ತಿನ (Maharashtra Legislative Council) ಚುನಾವಣೆಯಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದೆ. ಮಹಾ ವಿಕಾಸ್ ಅಘಾಡಿ (Maha Vikas Aghadi) ಅಭ್ಯರ್ಥಿಯಾಗಿ 2020ರಲ್ಲಿ ಈ ಕ್ಷೇತ್ರದಿಂದ ಮೊದಲ ಗೆಲುವು (MLC Election Result) ದಾಖಲಿಸಿದ್ದ ವಕೀಲ, ಶಿಕ್ಷಣ ತಜ್ಞರಾಗಿರುವ ಅಭಿಜಿತ್ ಗೋವಿಂದರಾವ್ ವಂಜಾರಿ (Congress leader Abhijit Govindrao Wanjari) ಅವರು ಇದೀಗ ಕಾಂಗ್ರೆಸ್ ಅಭ್ಯರ್ಥಿಯಾಗಿ ಇಲ್ಲಿ ಪಕ್ಷದಿಂದ ಮೊದಲು ಹಾಗೂ ಚುನಾವಣೆಯಲ್ಲಿ ಎರಡನೇ ಬಾರಿಗೆ ವಿಜಯಿಯಾಗಿದ್ದರೆ. ಈ ಮೂಲಕ ಅವರು ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಭದ್ರಕೋಟೆಯನ್ನು ತಮ್ಮ ಕೈಯಲ್ಲಿ ಉಳಿಸಿಕೊಂಡಿದ್ದಾರೆ.

ಮಹಾರಾಷ್ಟ್ರ ವಿಧಾನ ಪರಿಷತ್ತಿನ ನಾಗಪುರ ವಿಭಾಗದ ಪದವೀಧರರ ಕ್ಷೇತ್ರದಿಂದ ಕಾಂಗ್ರೆಸ್ ನಾಯಕ ಅಭಿಜಿತ್ ಗೋವಿಂದರಾವ್ ವಂಜಾರಿ ಅವರು ಸತತ ಎರಡನೇ ಬಾರಿಗೆ ಆಯ್ಕೆಯಾಗಿದ್ದಾರೆ. ಬಿಜೆಪಿ ವಿರುದ್ಧ ಜಯ ಸಾಧಿಸುವ ಮೂಲಕ ಕಾಂಗ್ರೆಸ್ ಸತತ ಎರಡನೇ ಬಾರಿಗೆ ಈ ಕ್ಷೇತ್ರವನ್ನು ತನ್ನದಾಗಿಸಿಕೊಂಡಿದೆ.

ಜಮ್ಮು–ಕಾಶ್ಮೀರ: ಭಯೋತ್ಪಾದಕರ ಅಡಗುದಾಣ ಪತ್ತೆ, ಶಸ್ತ್ರಾಸ್ತ್ರಗಳ ವಶ

ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರ ತವರು ನಗರವಾಗಿರುವ ನಾಗಪುರ ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರು ಪ್ರತಿನಿಧಿಸುವ ಲೋಕಸಭಾ ಕ್ಷೇತ್ರವಾಗಿದೆ. ಹೀಗಾಗಿ ಇಲ್ಲಿನ ಫಲಿತಾಂಶ ಸಾಕಷ್ಟು ಕುತೂಹಲ ಕೆರಳಿಸಿತ್ತು. ಆರ್‌ಎಸ್‌ಎಸ್‌ನ ಪ್ರಧಾನ ಕಚೇರಿಯನ್ನು ಹೊಂದಿರುವ ನಾಗಪುರದಲ್ಲಿ ಬಿಜೆಪಿ ಮತ್ತು ಆರ್‌ಎಸ್‌ಎಸ್ ಬಲವಾದ ರಾಜಕೀಯ ಉಪಸ್ಥಿತಿಯನ್ನು ಸೂಚಿಸುತ್ತದೆ. ಹೀಗಿರುವ ಈ ಪ್ರದೇಶದಲ್ಲಿ ಕಾಂಗ್ರೆಸ್ ಗೆಲುವು ಗಮನಾರ್ಹ ಸಂಗತಿಯಾಗಿದೆ.

ಮಂಕಪುರ ಒಳಾಂಗಣ ಕ್ರೀಡಾಂಗಣದಲ್ಲಿ ಬುಧವಾರ ನಡೆದ ದೀರ್ಘಕಾಲದ ಮತ ಎಣಿಕೆ ಪ್ರಕ್ರಿಯೆಯ ಬಳಿಕ ಕಾಂಗ್ರೆಸ್ ಅಭ್ಯರ್ಥಿ ಅಭಿಜಿತ್ ಗೋವಿಂದರಾವ್ ವಂಜಾರಿ ಅವರು ಬಿಜೆಪಿಯ ಸುಧಾಕರ್ ಕೊಹ್ಲೆ ಅವರನ್ನು 3,271 ಮತಗಳ ಅಂತರದಿಂದ ಸೋಲಿಸಿದರು. ಈ ಗೆಲುವಿನ ಮೂಲಕ ಕರ್ನಾಟಕ, ಬಿಹಾರ, ಉತ್ತರ ಪ್ರದೇಶ ಮತ್ತು ಮಹಾರಾಷ್ಟ್ರ ರಾಜ್ಯಗಳಲ್ಲಿ ನಡೆಯುತ್ತಿರುವ ಎಂಎಲ್‌ಸಿ ಚುನಾವಣೆಗಳಲ್ಲಿ ಒಟ್ಟು 28 ಸ್ಥಾನಗಳಲ್ಲಿ ಕಾಂಗ್ರೆಸ್ ತನ್ನ ಖಾತೆಯನ್ನು ತೆರೆದಿದೆ.



ಮಹಾರಾಷ್ಟ್ರ ವಿಧಾನ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿರುವ ಅಭಿಜಿತ್ ಗೋವಿಂದರಾವ್ ವಂಜಾರಿ ಅವರಿಗೆ ಕಾಂಗ್ರೆಸ್, ಶಿವಸೇನೆ (ಯುಬಿಟಿ) ಮತ್ತು ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷ (ಎಸ್‌ಪಿ) ಒಳಗೊಂಡ 'ಮಹಾ ವಿಕಾಸ್ ಅಘಾಡಿ' ಮೈತ್ರಿಕೂಟದ ಬೆಂಬಲವಿತ್ತು.

ಫಲಿತಾಂಶ ಪ್ರಕಟವಾದ ಬಳಿಕ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಯ ವಿರುದ್ಧ ಘೋಷಣೆಗಳನ್ನು ಕೂಗಿದರು. ಇದರಿಂದ ಸ್ಥಳದಲ್ಲಿ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿದ್ದು, ಪೊಲೀಸರು ಮಧ್ಯಪ್ರವೇಶಿಸಿ ಪರಿಸ್ಥಿತಿಯನ್ನು ನಿಯಂತ್ರಿಸಿದರು.

ಗೆಲುವಿನ ಬಳಿಕ ಪ್ರತಿಕ್ರಿಯೆ ನೀಡಿದ ಅಭಿಜಿತ್ ಗೋವಿಂದರಾವ್ ವಂಜಾರಿ, ನಾಗಪುರದಲ್ಲಿ ಬಿಜೆಪಿ ತನ್ನ ನಾಯಕರನ್ನು ಮತ್ತು ಸಂಪನ್ಮೂಲಗಳನ್ನು ಬಳಸಿಕೊಂಡಿತ್ತು. ಆದರೆ ಮತದಾರರು ಕಾಂಗ್ರೆಸ್‌ಗೆ ಬೆಂಬಲ ನೀಡಿದರು. ಬಿಜೆಪಿ ತನ್ನ ಸಂಪೂರ್ಣ ಶಕ್ತಿಯನ್ನು ಒಡ್ಡಿತು. ಆದರೂ ಮತದಾರರು ನಮ್ಮ ಪರವಾಗಿ ನಿಂತರು. ಇದಕ್ಕೆ ಕಾರಣ ಕಾಂಗ್ರೆಸ್ ಮತ್ತು ಎಂವಿಎ ಒಕ್ಕೂಟದೊಳಗಿನ ಐಕ್ಯತೆ ಎಂದು ಹೇಳಿದರು.

ನಾಗಪುರ ಪದವೀಧರರ ಕ್ಷೇತ್ರದಿಂದ 38 ಅಭ್ಯರ್ಥಿಗಳು ಕಣದಲ್ಲಿದ್ದರು. ಆದರೆ ತಮ್ಮ ಪ್ರಚಾರ ಅಭಿಯಾನಕ್ಕೆ 48 ಸಂಘಟನೆಗಳು ಬೆಂಬಲ ನೀಡಿವೆ. ಈ ಗೆಲುವು ಆ ಸಂಘಟನೆಗಳ ಕಾರ್ಯಕರ್ತರಿಗೆ ಮತ್ತು ನಾಯಕರಿಗೆ ಸಲ್ಲಬೇಕು ಎಂದು ತಿಳಿಸಿದರು.

Gururaj Gantihole Column: ಪ್ರಾಚೀನ ಹಸ್ತಪ್ರತಿಗಳ ಸಂರಕ್ಷಣೆ: ಗತವೈಭವ ಮತ್ತು ಕಾಪಾಡಿಕೊಳ್ಳಲಾಗದ ದಾರಿದ್ರ್ಯ

ಮಹಾರಾಷ್ಟ್ರ ವಿಧಾನ ಪರಿಷತ್ತಿನ ಐದು ಸ್ಥಾನಗಳಿಗೆ ನಡೆದ ಚುನಾವಣೆಯ ಫಲಿತಾಂಶಗಳಲ್ಲಿ ನಾಗಪುರದ ಫಲಿತಾಂಶವು ಒಂದು. ಎಂವಿಎ ಒಕ್ಕೂಟವು ಮೂರು ಕ್ಷೇತ್ರಗಳಲ್ಲಿ ಜಯಗಳಿಸಿದ್ದರೆ, ಬಿಜೆಪಿ ಮತ್ತು ಶಿವಸೇನೆ ತಲಾ ಒಂದು ಸ್ಥಾನವನ್ನು ಪಡೆದುಕೊಂಡಿವೆ.