ವಿಡಿಯೋ ಫೋಟೋ ಗ್ಯಾಲರಿ ಫ್ಯಾಷನ್​ ಕ್ರೈಂ ಧಾರ್ಮಿಕ ವಿಶ್ವವಾಣಿ ಪ್ರಾಪರ್ಟಿ ಪ್ರವಾಸಿ ಪ್ರಪಂಚ ವಿದೇಶ ಸಂಪಾದಕೀಯ ಉದ್ಯೋಗ

ಜ್ಞಾನೇಶ್ ಕುಮಾರ್‌ ರಕ್ಷಣೆಗಾಗಿ ದೇಶದ ಜನರ ವಿರುದ್ಧ ಮೋದಿ, ಶಾ ನಿಂತಿದ್ದಾರೆ; ಪ್ರಧಾನಿ ವಿರುದ್ಧ ಕಿಡಿಕಾರಿದ ಅಭಿಜೀತ್ ದೀಪ್ಕೆ ಆರೋಪ

ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರು ಮುಖ್ಯ ಚುನಾವಣಾ ಆಯುಕ್ತರ ರಕ್ಷಣೆಗಾಗಿ ದೇಶದ ಜನರ ವಿರುದ್ಧವೇ ಯುದ್ಧ ಸಾರಿದ್ದಾರೆ ಎಂದು ಕಾಕ್ರೋಚ್ ಜನತಾ ಪಕ್ಷದ ಸಂಸ್ಥಾಪಕ ಅಭಿಜೀತ್ ದೀಪ್ಕೆ ಆರೋಪಿಸಿದ್ದಾರೆ. ನೇಹಾ ಬೋರಾ ಮತ್ತು ಪ್ರಕಾಶ್ ರಾಜ್ ಅವರೊಂದಿಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಅವರು ಮಾತನಾಡಿದರು.

ಸಂಗ್ರಹ ಚಿತ್ರ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್‌ (CEC Gyanesh Kumar), ಮತದಾರರ ಪಟ್ಟಿಯ ತೀವ್ರ ಪರಿಷ್ಕರಣೆ (SIR) ವಿರುದ್ಧ ರಸ್ತೆಗಿಳಿದಿರುವ ಪ್ರತಿಭಟನಾಕಾರರನ್ನು ರಸ್ತೆಗಳಲ್ಲಿ ಎಳೆದಾಡಲಾಗುತ್ತಿದೆ. ಟಿಎಂಸಿ ನಾಯಕಿ ಮಮತಾ ಬ್ಯಾನರ್ಜಿ (Mamata Banerjee), ಆಪ್ ನಾಯಕ ಅರವಿಂದ್ ಕೇಜ್ರಿವಾಲ್ (Arvind Kejriwal) ಸೇರಿದಂತೆ ವಿರೋಧ ಪಕ್ಷದ ನಾಯಕರನ್ನು ಪೊಲೀಸರು ಬಂಧಿಸಿದ್ದಾರೆ. ಒಟ್ಟಿನಲ್ಲಿ ಜ್ಞಾನೇಶ್ ಕುಮಾರ್‌ ಅವರ ರಕ್ಷಣೆಗಾಗಿ ಪ್ರಧಾನಿ ನರೇಂದ್ರ ಮೋದಿ (Prime Minister Narendra Modi) ಮತ್ತು ಗೃಹ ಸಚಿವ ಅಮಿತ್ ಶಾ (Amit Shah) ಅವರು ದೇಶದ ಜನರ ವಿರುದ್ಧವೇ ಯುದ್ಧಕ್ಕೆ ನಿಂತಿದ್ದಾರೆ ಎಂದು ಅಭಿಜೀತ್ ದೀಪ್ಕೆ ಹೇಳಿದರು.

ಸಿಜೆಪಿ ನಾಯಕರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ತಿಹಾರ್ ಜೈಲಿಗೆ ಕಳುಹಿಸಲು ನ್ಯಾಯಾಲಯ ಆದೇಶ ನೀಡಿದ ಬಳಿಕ ನೇಹಾ ಬೋರಾ ಮತ್ತು ಪ್ರಕಾಶ್ ರಾಜ್ ಅವರೊಂದಿಗೆ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜ್ಞಾನೇಶ್ ಕುಮಾರ್‌ ಅವರನ್ನು ರಕ್ಷಿಸುವ ಸಲುವಾಗಿ ಕೇಂದ್ರ ಸರ್ಕಾರವು ತನ್ನದೇ ನಾಗರಿಕರ ವಿರುದ್ಧ ಯುದ್ಧ ಸಾರಿದೆ. ಚುನಾವಣಾ ಆಯೋಗದ ಮುಖ್ಯಸ್ಥರ ರಾಜೀನಾಮೆಗೆ ಆಗ್ರಹಿಸಿ ನಡೆಸುತ್ತಿರುವ ಪ್ರತಿಭಟನಾಕಾರರನ್ನು ಬಂಧಿಸಲಾಗುತ್ತಿದೆ ಎಂದರು.

ಜಂತರ್ ಮಂತರ್ ಪ್ರತಿಭಟನೆಗೂ ಮುನ್ನವೇ ಶಾಕ್‌; CJP ನಾಯಕರಾದ ಅಭಿಜೀತ್ ದೀಪ್ಕೆ, ಅಶುತೋಷ್ ರಂಕಾ, ಸೌರವ್ ದಾಸ್ ವಶಕ್ಕೆ

ಒಬ್ಬ ವ್ಯಕ್ತಿಯನ್ನು ರಕ್ಷಿಸಲು ಪ್ರತಿಭಟನಾಕಾರರು ಮತ್ತು ವಿರೋಧ ಪಕ್ಷದ ನಾಯಕರನ್ನು ಗುರಿ ಮಾಡಲಾಗಿದೆ ಎಂದ ಅವರು, ದೆಹಲಿಯ ಯುವಜನರೆಲ್ಲರೂ ಬೀದಿಗಳಲ್ಲಿ ಹೋರಾಡುತ್ತಿದ್ದಾರೆ. ಅವರನ್ನು ರಸ್ತೆಗಳಲ್ಲಿ ಎಳೆದಾಡಲಾಗುತ್ತಿದೆ. ಅಕ್ಟೋಬರ್ 10ರಂದು ಕರೆ ನೀಡಿದ ಪ್ರತಿಭಟನಾ ವೇಳೆ ರೈಲು ಸೇವೆಗಳನ್ನು ಸ್ಥಗಿತಗೊಳಿಸಲಾಗಿತ್ತು. ಇಂತಹ ಕ್ರಮಗಳು ಯಾರನ್ನು ರಕ್ಷಿಸಲು ಕೈಗೊಳ್ಳಲಾಗಿವೆ. ಇದು ಯಾರ ಸಲುವಾಗಿ ಎಂದು ಪ್ರಶ್ನಿಸಿದರು.

ನನ್ನ ಶೈಕ್ಷಣಿಕ ಪದವಿ ತೋರಿಸಲು ಸಿದ್ಧ, ನೀವು? ಪ್ರಧಾನಿ ನರೇಂದ್ರ ಮೋದಿಗೆ ಅಭಿಜಿತ್ ದೀಪ್ಕೆ ಸವಾಲು

ಸೌರವ್ ದಾಸ್, ಅಶುತೋಷ್ ರಂಕಾ ಮತ್ತು ಅಜಿಂಕ್ಯ ಶಿಂಧೆ ಅವರು ಪೊಲೀಸ್ ಬ್ಯಾರಿಕೇಡ್‌ಗಳನ್ನು ದಾಟಿ ಜಂತರ್ ಮಂತರ್ ಪ್ರವೇಶಿಸಿದರು ಎಂಬ ಆರೋಪದ ಮೇರೆಗೆ ಮಂಗಳವಾರ ಬೆಳಗ್ಗೆ ಅವರನ್ನು ಬಂಧಿಸಲಾಗಿತ್ತು. ಇವರ ವಿರುದ್ಧ ಸಾರ್ವಜನಿಕ ಅಧಿಕಾರಿಯ ಕರ್ತವ್ಯಕ್ಕೆ ಅಡ್ಡಿ ಆರೋಪ ಸೇರಿದಂತೆ ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿತ್ತು. ಸೌರವ್ ದಾಸ್ ಮತ್ತು ಅಶುತೋಷ್ ರಂಕಾ ಅವರನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ ನ್ಯಾಯಾಲಯ ಅಜಿಂಕ್ಯ ಶಿಂಧೆ ಅವರನ್ನು ವೈಯಕ್ತಿಕ ಬಾಂಡ್ ಮೇಲೆ ಬಿಡುಗಡೆ ಮಾಡಿತು.

ವಿದ್ಯಾ ಇರ್ವತ್ತೂರು

View all posts by this author