Narendra Modi: ಫೆ.13ರಂದು ಡೊನಾಲ್ಡ್ ಟ್ರಂಪ್ ಭೇಟಿಯಾಗಲಿರುವ ನರೇಂದ್ರ ಮೋದಿ!
ಪ್ರಧಾನಿ ನರೇಂದ್ರ ಮೋದಿ ಅವರು ಫೆ. 13ರಂದು ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ವಾರ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಗೆ ತೆರಳಲಿರುವ ಪ್ರಧಾನಿ, ಇತ್ತೀಚೆಗೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ. ಭೇಟಿಯ ಸಮಯದಲ್ಲಿ ಮೋದಿಗೆ ಟ್ರಂಪ್ ಔತಣಕೂಟವನ್ನು ಆಯೋಜಿಸಲಿದ್ದಾರೆ.
ನವದೆಹಲಿ: ಪ್ರಧಾನಿ ನರೇಂದ್ರ ಮೋದಿ(Narendra Modi) ಅವರು ಫೆ. 13ರಂದು ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್(Donald Trump) ಅವರನ್ನು ಭೇಟಿಯಾಗಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಮುಂದಿನ ವಾರ ಅಮೆರಿಕದ ರಾಜಧಾನಿ ವಾಷಿಂಗ್ಟನ್ ಡಿಸಿಗೆ ತೆರಳಲಿರುವ ಪ್ರಧಾನಿ, ಇತ್ತೀಚೆಗೆ ಅಮೆರಿಕ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆದ್ದು ಅಮೆರಿಕದ ನೂತನ ಅಧ್ಯಕ್ಷರಾಗಿ ಆಯ್ಕೆಯಾದ ಟ್ರಂಪ್ ಅವರನ್ನು ಭೇಟಿ ಮಾಡಲಿದ್ದಾರೆ. ಭೇಟಿಯ ಸಮಯದಲ್ಲಿ ಮೋದಿಗೆ ಟ್ರಂಪ್ ಔತಣಕೂಟವನ್ನು(Dinner) ಆಯೋಜಿಸಲಿದ್ದಾರೆ.
ಫ್ರಾನ್ಸ್ ಪ್ರವಾಸ ಕೈಗೊಳ್ಳಲಿರುವ ನರೇಂದ್ರ ಮೋದಿ, ಅಲ್ಲಿಂದ ಫೆಬ್ರುವರಿ 12ರ ಸಂಜೆ ವಾಷಿಂಗ್ಟನ್ ಡಿಸಿಗೆ ಆಗಮಿಸಲಿದ್ದಾರೆ. ಫೆಬ್ರುವರಿ 14ರವರೆಗೆ ಅಮೆರಿಕದ ರಾಜಧಾನಿಯಲ್ಲಿ ಉಳಿಯಲಿದ್ದಾರೆ. ಅಮೆರಿಕದ ಕಾರ್ಪೊರೇಟ್ ನಾಯಕರು ಮತ್ತು ಸಮುದಾಯದೊಂದಿಗೆ ಇತರ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ ಮಹತ್ವದ ಚರ್ಚೆಗಳನ್ನು ನಡೆಸಲಿದ್ದಾರೆ.
Modi and Trump likely to meet on February 13, Trump may host a dinner for PM | https://t.co/IvUMP88ss1
— Sheela Bhatt शीला भट्ट (@sheela2010) February 3, 2025
ಅಮೆರಿಕ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ತಮ್ಮ ಆತ್ಮೀಯ ಗೆಳೆಯ ನರೇಂದ್ರ ಮೋದಿಯೊಂದಿಗೆ ಟ್ರಂಪ್ ಫೋನ್ ಕರೆಯಲ್ಲಿ ಮಾತನಾಡಿದ್ದರು. ಅದಾದ ಬಳಿಕ, ಮೋದಿ ಫೆಬ್ರುವರಿಯಲ್ಲಿ ಶ್ವೇತಭವನಕ್ಕೆ ಭೇಟಿ ನೀಡುವ ಸಾಧ್ಯತೆಯಿದೆ ಎಂದು ಟ್ರಂಪ್ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಈ ಸುದ್ದಿಯನ್ನೂ ಓದಿ:Ramanand Sharma Column: ಅಮೆರಿಕ ವಲಸೆ ನೀತಿ: ಡೊನಾಲ್ಡ್ ಟ್ರಂಪ್ ಈಗ ಖಳನಾಯಕರೇ ?
ಟ್ರಂಪ್ ಮೋದಿ ದೂರವಾಣಿ ಮಾತು;ಕುಚಿಕು ಗೆಳೆಯರು ಏನೆಲ್ಲಾ ಮಾತಾಡಿದ್ರು?
ಕಳೆದ ವಾರವಷ್ಟೇ ಅಮೆರಿಕದ ನೂತನ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ದೂರವಾಣಿ ಕರೆ ಮಾಡಿ ಮಾತನಾಡಿದ್ದ ಭಾರತದ ಪ್ರಧಾನಮಂತ್ರಿ ನರೇಂದ್ರ ಮೋದಿ ಟ್ರಂಪ್ 2.0 ಅವಧಿಗೆ ಅತ್ಯಂತ ಪ್ರೀತಿಯಿಂದ ಶುಭ ಕೋರಿದ್ದರು. ಟ್ರಂಪ್ ಅವರನ್ನು ತಮ್ಮ ಆತ್ಮೀಯ ಗೆಳೆಯ ಎಂದು ಕರೆದಿದ್ದ ಪ್ರಧಾನಿ ಮೋದಿ, ಟ್ರಂಪ್ ಆಡಳಿತಾವಧಿಯಲ್ಲಿ ಭಾರತ ಮತ್ತು ಅಮೆರಿಕದ ಜನರ ನಡುವಿನ ಸ್ನೇಹ ಸಂಬಂಧ ಗಟ್ಟಿಯಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದರು. ಈ ವೇಳೆ ಪ್ರಧಾನಿ ಮೋದಿ ಅವರಿಗೆ ಧನ್ಯವಾದ ಅರ್ಪಿಸಿದ್ದ ಡೊನಾಲ್ಡ್ ಟ್ರಂಪ್, ಭಾರತ-ಅಮೆರಿಕ ನಡುವಿನ ದ್ವಿಪಕ್ಷೀಯ ಸಂಬಂಧ ವೃದ್ಧಿಗಾಗಿ ತಮ್ಮ ಭೇಟಿಗಾಗಿ ಕಾಯುತ್ತಿರುವುದಾಗಿ ದೂರವಾಣಿ ಕರೆಯಲ್ಲಿ ಹೇಳಿದ್ದರು.