ಎಸ್​ ಎಲ್​ ಭೈರಪ್ಪ ನಿಧನ ಫೋಟೋ ಗ್ಯಾಲರಿ ವಿದೇಶ ಫ್ಯಾಷನ್​ ಕ್ರೈಂ ಧಾರ್ಮಿಕ ಹವಾಮಾನ ವಿಶ್ವವಾಣಿ ಕ್ಲಬ್​​ ಹೌಸ್​ ಸಂಪಾದಕೀಯ ಉದ್ಯೋಗ

Mann Ki Baat: "ಅವರ ಕೃತಿಗಳು ಸದಾ ಜೀವಂತ" ; ಮನ್ ಕಿ ಬಾತ್‌ನಲ್ಲಿ ಭೈರಪ್ಪನವರನ್ನು ನೆನೆದ ಮೋದಿ

ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 28) ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ನ 126 ನೇ ಸಂಚಿಕೆಯಲ್ಲಿ ಭಾಷಣ ಮಾಡಿದರು. ರೇಡಿಯೋ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೋದಿ ದಿವಂಗತ ಎಸ್‌ ಎಲ್‌ ಭೈರಪ್ಪನವರ ಕುರಿತು ಮಾತನಾಡಿದ್ದಾರೆ.

ಮನ್ ಕಿ ಬಾತ್‌ನಲ್ಲಿ ಭೈರಪ್ಪನವರನ್ನು ನೆನೆದ ಮೋದಿ

-

Vishakha Bhat Vishakha Bhat Sep 28, 2025 11:56 AM

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಇಂದು (ಸೆಪ್ಟೆಂಬರ್ 28) ತಮ್ಮ ಮಾಸಿಕ ರೇಡಿಯೋ ಕಾರ್ಯಕ್ರಮ 'ಮನ್ ಕಿ ಬಾತ್' ನ (Mann Ki Baat) 126 ನೇ ಸಂಚಿಕೆಯಲ್ಲಿ ಭಾಷಣ ಮಾಡಿದರು. ರೇಡಿಯೋ ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿದ ಮೋದಿ ದಿವಂಗತ ಎಸ್‌ ಎಲ್‌ ಭೈರಪ್ಪನವರ (SL Bhairappa) ಕುರಿತು ಮಾತನಾಡಿದ್ದಾರೆ. ಸಾಹಿತ್ಯ ಕ್ಷೇತ್ರಕ್ಕೆ ಭೈರಪ್ಪನವರ ಕೊಡುಗೆ ಅಪಾರ. ನಾವಿಂದು ಅವರನ್ನು ಕಳೆದುಕೊಂಡಿದ್ದೇವೆ. ಅವರ ಜೊತೆ ನನಗೆ ಅಪಾರ ಒಡನಾಟವಿತ್ತು. ಕೆಲವು ವಿಷಯಗಳ ಕುರಿತು ನಾನು ಅವರೊಂದಿಗೆ ಚರ್ಚೆ ನಡೆಸಿದ್ದೆ ಎಂದು ಮೋದಿ ಹೇಳಿದರು.

ಇಂದಿನ ಯುವ ಪೀಳಿಗೆಗೆ ಸರಿಯಾದ ಸಾಮಾಜಿಕವಾಗಿ ಮಾರ್ಗದರ್ಶನ ನೀಡುವಲ್ಲಿ ಭೈರಪ್ಪನವರ ಕೃತಿಯ ಕೊಡುಗೆ ಅಪಾರ. ಭೈರಪ್ಪನವರ ಕೃತಿಗಳು ಕೇವಲ ಕನ್ನಡ ಮಾತ್ರವಲ್ಲದೇ ಹಲವು ಭಾಷೆಗಳಲ್ಲಿಯೂ ದೊರೆಯುತ್ತವೆ ಎಂದು ಮೋದಿ ಹೇಳಿದ್ದಾರೆ. ನಾನು ಈ ಕಾರ್ಯಕ್ರಮದ ಮೂಲಕ ಅವರ ಆತ್ಮಕ್ಕೆ ಶಾಂತಿ ಕೋರುತ್ತೇನೆ ಹಾಗೂ ಯುವ ಪೀಳಿಗೆಗೆ ಅವರ ಪುಸ್ತಕ ಓದುವಂತೆ ಒತ್ತಾಯಿಸುತ್ತೇನೆ ಎಂದು ಪ್ರಧಾನಿ ಹೇಳಿದ್ದಾರೆ.

ಬೆಂಗಳೂರಿನ ರಾಷ್ಟ್ರೋಸ್ಥಾನ ಆಸ್ಪತ್ರೆಗೆ ದಾಖಲಾಗಿದ್ದ ಅವರು ವಯೋಸಹಜ ಕಾಯಿಲೆಯಿಂದ ಮೃತಪಟ್ಟಿದ್ದಾರೆ. ಭೈರಪ್ಪನವರ ನಿಧನಕ್ಕೆ ಪ್ರಧಾನಿ ಮೋದಿ ಸಂತಾಪ ಸೂಚಿಸಿದ್ದರು. ಎಕ್ಸ್‌ನಲ್ಲಿ ಟ್ವೀಟ್‌ ಮಾಡಿದ್ದ ಅವರು, ಸಾಹಿತ್ಯ ಕ್ಷೇತ್ರದ ಧೀಮಂತ ವ್ಯಕ್ತಿಯೊಬ್ಬ ಇಂದು ನಮ್ಮನ್ನು ಅಗಲಿದ್ದಾರೆ. ನಿರ್ಭೀತ ಮತ್ತು ಕಾಲಾತೀತ ಚಿಂತಕರಾಗಿದ್ದ ಅವರು ತಮ್ಮ ಚಿಂತನಶೀಲ ಕೃತಿಗಳಿಂದ ಕನ್ನಡ ಸಾಹಿತ್ಯವನ್ನು ಆಳವಾಗಿ ಶ್ರೀಮಂತಗೊಳಿಸಿದ್ದಾರೆ. ನಮ್ಮ ಇತಿಹಾಸ ಮತ್ತು ಸಂಸ್ಕೃತಿಯ ಬಗ್ಗೆ ಅವರ ಅಚಲವಾದ ಉತ್ಸಾಹವು ಮುಂಬರುವ ವರ್ಷಗಳಲ್ಲಿ ಯುವ ಪೀಳಿಗೆಗೆ ಮಾದರಿಯಾಗಲಿದೆ. ಸಾಹಿತ್ಯ ಕ್ಷೇತ್ರದಲ್ಲಿ ಧೀಮಂತ ವ್ಯಕ್ತಿಯನ್ನು ನಾವು ಕಳೆದುಕೊಂಡಿದ್ದೇವೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಹೇಳಿದ್ದರು.